ಮಸೀದಿ ಮೇಲಿನ ಮೈಕ್ ತೆರವಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

By Suvarna News  |  First Published Apr 6, 2022, 5:19 PM IST

ಜಿಲ್ಲೆಯ ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ಹೋರಾಟ ತೀವ್ರಗೊಂಡಿದ್ದು, ಕಲಬುರಗಿಯಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದವು.


ಶರಣಯ್ಯ ಹಿರೇಮಠ, ಏಷ್ಯಾನೇಟ್ ಸುವರ್ಣ ನ್ಯೂಸ್ ಕಲಬುರಗಿ 

ಕಲಬುರಗಿ (ಏ.6): ಮಸೀದಿ (Mosque) ಮೇಲಿನ ಧ್ವನಿವರ್ದಕ (Mike)ತೆರವಿಗೆ ಹೋರಾಟ ತೀವ್ರಗೊಂಡಿದ್ದು, ಹಿಂದೂಪರ ಸಂಘಟನೆಗಳ (hindu organisations) ಕಾರ್ಯಕರ್ತರು ಕಲಬುರಗಿಯಲ್ಲಿಂದು(Kalaburagi ) ಪ್ರತಿಭಟನೆ ನಡೆಸಿದರು. 

Tap to resize

Latest Videos

ಕಲಬುರಗಿ ನಗರದ ಡಿಸಿ ಕಛೇರಿ (DC Office) ಮುಂದೆ ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರು  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.  ಮೈಕ್ ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದ್ದು ಕೂಡಲೇ ಎಲ್ಲಾ ಅನಧಿಕೃತ ಮೈಕ್ ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಧ್ವನಿವರ್ಧಕಗಳ ಬಳಕೆಗೆ ಕೆಲವು ನಿಯಮಗಳಿವೆ. ಆದರೆ ಮಸೀದಿ ಮೇಲೆ ಮೈಕ್ ಅಳವಡಿಸುವವರು ಇದಾವ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಕೂಡಲೇ ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Karnataka Politics: ಸಿಎಂ ಬೊಮ್ಮಾಯಿ ಮೂಕ ಬಸವ ಆಗಿದ್ದಾರೆ: ಪ್ರಿಯಾಂಕ್‌ ಖರ್ಗೆ

ಮಸೀದಿ ಮೇಲ್ಗಡೆ ಇರುವ ಧ್ವನಿವರ್ಧಕಗಳನ್ನು ಪೊಲೀಸ್ ಇಲಾಖೆ ಈ ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರು ಒತ್ತಾಯಿಸಿದರು. 

ಕಲಬುರಗಿಯಲ್ಲಿ ಅತ್ಯಧಿಕ 41 ಡಿಗ್ರಿ ತಾಪ: ಸುಡು ಬಿಸಿಲಿಗೆ ಕಂಗಾಲಾದ ಜನತೆ..!

ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಅರ್ಥ ಮಾಡಿಕೊಂಡು ಮತ್ತು ನ್ಯಾಯಾಲಯದ ಆದೇಶವನ್ನು ಗಮನಿಸಿ ಮುಸ್ಲಿಂ ಮುಖಂಡರು ತಾವೇ ಮಸಿದಿ ಮೇಲಿನ ಧ್ವನಿವರ್ದಕಗಳನ್ನು ತೆರವುಗೊಳಿಸಿ ಸೌಹಾರ್ದತೆ ಕಾಪಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
 

click me!