ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು

By Suvarna News  |  First Published Apr 5, 2022, 10:38 PM IST

ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು

ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಚೇತರಿಕೆ ಎಂದ ವೈದ್ಯರು
 


ಮಂಗಳೂರು (ಏ.5): ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಅವರ ಆರೋಗ್ಯದಲ್ಲಿ ಸಣ್ಣ ಪ್ರಮಾಣದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದ.ಕ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಕಲ್ಲಡ್ಕದ (Kalldka) ಮನೆಯಲ್ಲಿದ್ದ ಪ್ರಭಾಕರ್ ಭಟ್ ಅವರಿಗೆ ಕಡಿಮೆ ರಕ್ತದೊತ್ತಡ (ಲೋ ಬಿಪಿ) ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಅದರಲ್ಲೂ ಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಂಗಳೂರಿನ (Manglore) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು  ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಉತ್ತಮವಾಗಿದ್ದು ಭಯಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

click me!