ಒಂದು ದಿನದ ಭೇಟಿಗಾಗಿ ಶುಕ್ರವಾರ ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ವಸತಿ ಪ್ರಧಾನ ಕಚೇರಿಯಲ್ಲಿ ನಡೆಯುವ ಪ್ರಶಾಂತಿ ಕುಟೀರದ ಸ್ವರ್ಣ ಜಯಂತಿ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಸ್ವರ್ಣ ಜಯಂತಿ ಆಡಳಿತ ಮಂಡಳಿಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ತಿರುವನಂತಪುರಂನಲ್ಲಿ ಎಸ್-ವ್ಯಾಸ ಆಫ್-ಕ್ಯಾಂಪಸ್‌ಗೆ ಚಾಲನೆ ನೀಡಲಿದ್ದಾರೆ.
ಕಾಳೇನ ಅಗ್ರಹಾರದಿಂದ ತಾವರೆಕೆರೆ ನಿಲ್ದಾಣದವರೆಗೆ ನಮ್ಮ ಮೆಟ್ರೋ ಪಿಂಕ್ ಲೈನ್‌ನ ಎತ್ತರಿಸಿದ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ನಿಲ್ದಾಣಗಳಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರತಿಯೊಂದು ಮೆಟ್ರೋ ನಿಲ್ದಾಣಗಳಲ್ಲಿ ಹದ್ದಿನ ಕಣ್ಣು ಇಡಲಾಗಿದೆ.
ಸುಮಾರು 3,470 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಳೇನ ಅಗ್ರಹಾರ-ತಾವರೆಕೆರೆ ನಡುವಿನ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಲಿದ್ದಾರೆ. ಬಳಿಕ ತಾವರೆಕೆರೆ ಯಿಂದ ಐಐಎಂ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. 15,600 ಕೋಟಿ ರು.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ನೆರವೇರಿಸಲಿದ್ದಾರೆ.