ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ.
ಎಸ್‌ಐಆರ್ ಹೋರಾಟ ಸೇರಿದಂತೆ ಇನ್ನಿತರ ವಿಚಾರಗಳ ಕುರಿತಂತೆ ಚರ್ಚೆ ನಡೆಸಲು ರಾಹುಲ್ ಗಾಂಧಿ ಅವರು ಶುಕ್ರವಾರ ದೆಹಲಿಯಲ್ಲಿ ಚಹಾಕೂಟ ನಡೆಸಲಿದ್ದಾರೆ. ಅದರಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳು, ಪಿಸಿಸಿ ಅಧ್ಯಕ್ಷರು ಸೇರಿದಂತೆ ಇನ್ನಿತರರಿಗೆ ಆಹ್ವಾನ ನೀಡಲಾಗಿದೆ. ಅದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಯಾಗಿ ಚರ್ಚೆ ನಡೆಸಿದ ನಂತರ, ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ. ದೆಹಲಿ ಪ್ರವಾಸದ ವೇಳೆ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಕುರಿತಂತೆ ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
08:40 AM (IST) Nov 06
ಅಮೆರಿಕದ ಮೊದಲ ಮುಸ್ಲಿಂ ಸೆನೆಟರ್ ಆಗಿ ಆಯ್ಕೆಯಾದ ಅಬ್ದುಲ್ ಎಲ್-ಸಯೀದ್ ತಾವು ಈಗ ಅರಬ್‌ಗಿಂತ ಹೆಚ್ಚು ಭಾರತೀಯನಾಗಿರಬಹುದು ಎಂದು ಅವರು ಭಾವುಕವಾಗಿ ಹೇಳಿದ್ದಾರೆ. ಅವರ ಪತ್ನಿ ಸಾರಾ ಜುಕಾಕು ಅವರ ಕುಟುಂಬದ ಬೇರುಗಳು ಕರ್ನಾಟಕದ ಭಟ್ಕಳದಲ್ಲಿವೆ.
08:16 AM (IST) Nov 06
ಬೆಳಗಾವಿಯಲ್ಲಿ ಕಬ್ಬಿಗೆ ನ್ಯಾಯಯುತ ಬೆಲೆ ಕೋರಿ ನಡೆಯುತ್ತಿದ್ದ ರೈತರ 12 ದಿನಗಳ ಪ್ರತಿಭಟನೆ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ. ಪ್ರತಿ ಟನ್‌ಗೆ ₹3,600 ದರ ನಿಗದಿಯಾಗಿದ್ದು, ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಆದರೆ, ಸರ್ಕಾರ ₹1,000 ಪ್ರೋತ್ಸಾಹಧನ ನೀಡದಿದ್ದರೆ ಅಧಿವೇಶನದ ವೇಳೆ ಮತ್ತೆ ಹೋರಾಟ?
08:11 AM (IST) Nov 06
ರಾಜ್ಯಾದ್ಯಂತ ₹20,000 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ನಡುವೆ 3,986 ಕಿ.ಮೀ. ರಸ್ತೆ ಅಭಿವೃದ್ಧಿ ₹6,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆ ತೀರ್ಮಾನ.
07:52 AM (IST) Nov 06
KRS Dam Water level Today: ಮಳೆ ಕೊರತೆ ಮತ್ತು ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾರಣ ಕೆ.ಆರ್.ಎಸ್ ಅಣೆಕಟ್ಟೆಯ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಇದರಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಭಾರಿ ಸಮಸ್ಯೆ ಎದುರಾಗುವ ಆತಂಕವಿದೆ.