ಉಡುಪಿ: ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಅಧಿಸೂಚನೆ ಜಾರಿ ವಿರುದ್ಧ ಸೆ. 21, 22, 23 ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಅವರು ಶುಕ್ರವಾರ, ಇಲ್ಲಿನ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಈ ಅಧಿಸೂಚನೆ ಜಾರಿ ಬಗ್ಗೆ ಸ್ಥಳೀಯರ ಅಭಿಪ್ರಾಯ ಆಲಿಸಿ ಮಾತನಾಡಿದರು.
ಅವರು ಸಭೆಯಲ್ಲಿ ಅಧಿಸೂಚನೆಯ ಪರ ಅಥವಾ ವಿರುದ್ಧ ಸ್ಪಷ್ಟ ನಿರ್ಣಯವನ್ನು ಘೋಷಿಸಲಿಲ್ಲ, ಆದರೆ, ಜನರ ಅಭಿಪ್ರಾಯವೇ ನನ್ನ ಸರ್ಕಾರದ ಅಭಿಪ್ರಾಯ, ನಾನು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿಗಾಗಿ ರಾಜಕಾರಣ ಮಾಡುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.
08:58 AM (IST) Sep 19
08:41 AM (IST) Sep 19
08:33 AM (IST) Sep 19
ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸಿದ್ದರಿಂದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ. ಕಳೆದೆರಡು ವರ್ಷಗಳಿಗೆ ಹೋಲಿಸಿದರೆ 100 ಟಿಎಂಸಿ ನೀರು ಕಡಿಮೆಯಾಗಿದ್ದು, 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
08:07 AM (IST) Sep 19
ಹಣಕ್ಕಾಗಿ ತನ್ನ ನೆರೆಮನೆ ರಿಯಲ್ ಎಸ್ಟೇಟ್ ಏಜೆಂಟ್‌ರೊಬ್ಬರ 13 ವರ್ಷದ ಮಗನನ್ನು ಅಪಹರಿಸಿ ಹ೧ತ್ಯೆಗೈದು ಬಳಿಕ ಮೃತದೇಹದ ಜತೆ ಸಮೇತ ತಪ್ಪಿಸಿಕೊಳ್ಳುವ ಧಾವಂತದಲ್ಲಿ ಕಾರು ಅಪಘಾತಕ್ಕೀಡಾಗಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಪೊಲೀಸರ ಬಲೆಗೆ ಬಿದ್ದಿರುವ ಸಿನಿಮೀಯ ಶೈಲಿಯ ಘಟನೆ ಚಿಕ್ಕಜಾಲ ಸಮೀಪ ನಡೆದಿದೆ.
07:30 AM (IST) Sep 19