ಬೆಂಗಳೂರು : ಪರಿಶಿಷ್ಟ ಜಾತಿಯೊಳಗಿನ ಒಳಮೀಸಲಾತಿ ಸಂಬಂಧ ನ್ಯಾ.ಎಚ್.ಎನ್.ನಾಗಮೋಹನದಾಸ್ ವರದಿ ಶಿಫಾರಸ್ಸುಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಬಂಜಾರ, ಭೋವಿ, ಕೊರಚ ಹಾಗೂ ಕೊರವ ಸಮುದಾಯಗಳ ಮುಖಂಡರು ಬೃಹತ್ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಬಂಜಾರ, ಭೋವಿ, ಕೊರಚ, ಕೊರವ ಮೀಸಲಾತಿ ಒಕ್ಕೂಟ ಬುಧವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಹಸ್ರಾರು ಜನ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಮ್ಮ ಸಮುದಾಯಗಳಿಗೆ ಆಗಿರುವ ಅನ್ಯಾಯ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
11:43 PM (IST) Sep 11
ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರ ರಿಯಾಯಿತಿ ಯೋಜನೆಗೆ ಭಾರಿ ಪ್ರತಿಕ್ರಿಯೆ. 21 ದಿನಗಳಲ್ಲಿ ₹80 ಕೋಟಿಗೂ ಅಧಿಕ ದಂಡ ಸಂಗ್ರಹ. 28.84 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥ. ರಿಯಾಯಿತಿ ನಾಳೆ (ಸೆ.12) ಕೊನೆಗೊಳ್ಳಲಿದೆ.
10:56 PM (IST) Sep 11
ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
10:56 PM (IST) Sep 11
Udupi Railway Station to be Renamed After Sri Krishna ಉಡುಪಿಯ ಇಂದ್ರಾಳಿ ರೈಲು ನಿಲ್ದಾಣವು ಶೀಘ್ರದಲ್ಲೇ 'ಉಡುಪಿ ಶ್ರೀ ಕೃಷ್ಣ ರೈಲು ನಿಲ್ದಾಣ' ಎಂದು ಮರುನಾಮಕರಣಗೊಳ್ಳಬಹುದು. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರು ಈ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ.
10:42 PM (IST) Sep 11
ಕಾಂತಾರ ಚಿತ್ರದ ಪ್ರಿಕ್ವೆಲ್ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದ್ದು, ಟ್ರೇಲರ್ ಈ ತಿಂಗಳ 20 ರಂದು ಬಿಡುಗಡೆಯಾಗಲಿದೆ. ಅಮೆಜಾನ್ ಪ್ರೈಮ್ ವಿಡಿಯೋ ಚಿತ್ರದ ಒಟಿಟಿ ಹಕ್ಕುಗಳನ್ನು 125 ಕೋಟಿ ರೂ.ಗೆ ಖರೀದಿಸಿದೆ. ಈ ಮೂಲಕ ಚಿತ್ರಕ್ಕೆ ಹೂಡಿದ ಬಂಡವಾಳ ರಿಲೀಸ್‌ಗೂ ಮುನ್ನವೇ ವಾಪಸ್ ಬಂದಿದೆ ಎನ್ನಲಾಗುತ್ತಿದೆ.
10:23 PM (IST) Sep 11
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ 12ರ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಂಡಕ್ಟರ್‌ನ ಮೇಲೆ ಪೋಕ್ಸೋ ಕೇಸ್ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಬಾಲಕಿಯ ಕುಟುಂಬಸ್ಥರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
10:18 PM (IST) Sep 11
ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಯಾರು ತೊಂದರೆ ಕೊಡಬಾರದು. ಮದ್ದೂರಿನಲ್ಲಿ ನಡೆದ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಒದ್ದು ಒಳಗೆ ಹಾಕಬೇಕು ಕಠಿಣವಾದ ಶಿಕ್ಷೆ ಕೊಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
09:57 PM (IST) Sep 11
ಪ್ರಸ್ತುತದ ರಂಗಭೂಮಿ ಬಗ್ಗೆ ಮಕ್ಕಳು, ಯುವಕರಿಗೆ ಶಾಲಾ- ಕಾಲೇಜಿನಲ್ಲಿ ಅಭ್ಯಾಸ ಮಾಡಿಸುವ ಮೂಲಕ ಅವರಲ್ಲಿ ಆಸಕ್ತಿ ಮೂಡಿಸಬೇಕಿದೆ ಎಂದು ಹಿರಿಯ ನಟಿ ಗಿರಿಜಾ ಲೋಕೇಶ್ ಹೇಳಿದರು.
09:51 PM (IST) Sep 11
ಸೂರ್ಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ತಂಡ ಕಳ್ಳತನ ಪ್ರಕರಣದಲ್ಲಿ ವಶಪಡಿಸಿಕೊಂಡ 2 ಕೆಜಿ ಚಿನ್ನದಲ್ಲಿ 250 ಗ್ರಾಂ ಮಾತ್ರ ದಾಖಲಿಸಿ ಉಳಿದದ್ದನ್ನು ಹಂಚಿಕೊಂಡ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡುವುದಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿಗೆ ವಹಿಸಲಾಗಿದೆ.
09:35 PM (IST) Sep 11
ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೋ ಅಥವಾ ತಾಲಿಬಾನ್ ಸರ್ಕಾರವೋ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.
08:59 PM (IST) Sep 11
ಬಿಜೆಪಿಯವರು ಕೋಮು ಸೌಹಾರ್ದತೆ ಕದಡುತ್ತಿದ್ದಾರೆಂದು ಕಾಂಗ್ರೆಸ್ಸಿಗರು ಆರೋಪಿಸುತ್ತಾರೆ. ಮಸೀದಿಯಲ್ಲಿ ಕಲ್ಲು ಇಟ್ಟುಕೊಂಡಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಇವತ್ತು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.
08:43 PM (IST) Sep 11
ಬೆಂಗಳೂರಿನಲ್ಲಿ ಪ್ರೀತಿಸುತ್ತಿದ್ದ ಯುವತಿಯನ್ನು ಮದುವೆಯಾಗುವ ವಿಚಾರದಲ್ಲಿ ಇಬ್ಬರು ಯುವಕರ ನಡುವೆ ಜಗಳ ನಡೆದು ಒಬ್ಬ ಯುವಕನ ಕೊಲೆಯಾಗಿದೆ. ಆರೋಪಿ ಮತ್ತು ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜಯನಗರದಲ್ಲಿ ನಡೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ.
08:43 PM (IST) Sep 11
ಕರ್ನಾಟಕ ಮೂಲದ ನ್ಯಾಯಮೂರ್ತಿ ಪವನಕುಮಾರ್ ಭೀಮಪ್ಪ ಬಜಂತ್ರಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಖಾಯಂ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಹಂಗಾಮಿ ಸಿಜೆ ಆಗಿ ನೇಮಕಗೊಂಡ ಎರಡು ವಾರಗಳ ನಂತರ ಈಗ ಖಾಯಂ ಆಗಿ ನೇಮಕಗೊಂಡಿದ್ದಾರೆ.
08:33 PM (IST) Sep 11
ರಾಜ್ಯ ಸರ್ಕಾರ ಗ್ರಾಪಂ ಮಟ್ಟದಲ್ಲಿ ಸಮೀಕ್ಷೆ ಮಾಡಿ, ಮಧ್ಯಂತರ ಪರಿಹಾರ ಕೊಡಬೇಕು. ಕೇಂದ್ರಕ್ಕೆ ಬೆಳೆ ನಷ್ಟದ ವರದಿ ಕಳುಹಿಸಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಯಮಗಳ ಪ್ರಕಾರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
08:15 PM (IST) Sep 11
ಗುತ್ತಿಗೆ ಪಡೆದ ಸಂಸ್ಥೆ ಇಲ್ಲಿರುವ 368 ಮರಗಳನ್ನು ಕಡಿಯಲು ಅನುಮತಿ ಕೋರಿತ್ತು. ಮರಗಳ ಹನನಕ್ಕೆ ಸ್ಥಳೀಯರು ಸೇರಿದಂತೆ ಪರಿಸರ ಪ್ರೇಮಿಗಳು, ವೃಕ್ಷ ಪ್ರೇಮಿಗಳು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು ಎಂದು ಸಚಿವರು ಹೇಳಿದರು.
08:13 PM (IST) Sep 11
Karnataka ratna award posthumous ಕರ್ನಾಟಕ ರತ್ನ ಪ್ರಶಸ್ತಿಯನ್ನು ಈ ವರ್ಷ ವಿಷ್ಣುವರ್ಧನ್ ಮತ್ತು ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ನೀಡಲಾಗಿದೆ. ಬದುಕಿರುವಾಗಲೇ ಸಾಧಕರನ್ನು ಗುರುತಿಸಿ ಗೌರವಿಸುವ ಅಗತ್ಯವಿದೆ ಎಂದು ಲೇಖನ ಒತ್ತಿ ಹೇಳುತ್ತದೆ.
07:37 PM (IST) Sep 11
ಆ ವೃದ್ಧನ ಕುಟುಂಬ ಏಲಕ್ಕಿ ತೋಟವನ್ನೇ ನಂಬಿ ಬದುಕು ದೂಡುತ್ತಿತ್ತು. ಆದರೆ ಇದು ಅರಣ್ಯ ಭೂಮಿ ಎಂದು ವಾದಿಸಿದ ಅರಣ್ಯ ಇಲಾಖೆ ಫಸಲಿದ್ದ ಏಲಕ್ಕಿ ಬೆಳೆಯನ್ನು ಕತ್ತರಿಸಿ ತುಂಡು ತುಂಡು ಮಾಡಿದೆ.
07:04 PM (IST) Sep 11
ನಾನು ಬಾಲಚಂದರ್ ಅವರಂತಹ ಹೆಸರಾಂತ ನಿರ್ದೇಶಕರ ಜೊತೆಗೆ ಹತ್ತು ಸಿನಿಮಾ ಮಾಡಿದ್ದೇನೆ. ಮುಂದೆ ವತ್ಸ ಅವರ ಜೊತೆಗೂ ಇದೇ ರೀತಿ ಮಾಡುತ್ತೇನೆ. ಇನ್ನೂ, ನಿರ್ಮಾಪಕ ರವಿ ಕಶ್ಯಪ್ ಅವರ ಸಿನಿಮಾ ಪ್ರೀತಿ ಬಗ್ಗೆ ಎಷ್ಟು ಹೇಳಿದರು ಕಡಿಮೆ.
06:37 PM (IST) Sep 11
ದೇವರ ತೆಂಗಿನಕಾಯಿಗಾಗಿ ತಮ್ಮನ ಹೆಂಡತಿಯನ್ನು ಅಣ್ಣನೇ ಬರ್ಬರವಾಗಿ ಕೊ*ಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ರಾಮನಗರದ ಆಮಶೇತ-ಕೊಲೇಮಾಳ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ ಸೋನು ವರಕ (35) ಹತ್ಯೆ*ಯಾದ ಮಹಿಳೆ.
06:21 PM (IST) Sep 11
fining students for Speaking in kannada ಬೆಂಗಳೂರಿನ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತನಿಖೆಗೆ ಆದೇಶಿಸಿದೆ.
06:08 PM (IST) Sep 11
ಕರ್ನಾಟಕ ಸರ್ಕಾರವು ನಟ ಡಾ.ವಿಷ್ಣುವರ್ಧನ್ ಮತ್ತು ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು. ಆರೋಗ್ಯ ಮತ್ತು ವಸತಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
05:47 PM (IST) Sep 11
ರಾಜ್ಯದಾದ್ಯಂತ 22 ವಿಧಾನಸಭಾ ಕ್ಷೇತ್ರಗಳಲ್ಲಿ 40 ಅಲ್ಪಸಂಖ್ಯಾತ ಕಾಲನಿಗಳ ಅಭಿವೃದ್ಧಿಗೆ 398 ಕೋಟಿ ರೂ. ಅನುದಾನವನ್ನು ನೀಡುವುದಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆಯನ್ನು ಸೂಚಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣ, ಆರೋಗ್ಯ, ಮತ್ತು ರಸ್ತೆ ಸುಧಾರಣೆಗೆ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
05:38 PM (IST) Sep 11
05:23 PM (IST) Sep 11
Insult to Chhatrapati Shivaji Maharashtra CM ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಶಿವಾಜಿ ನಗರ ಮೆಟ್ರೋ ಸ್ಟೇಷನ್ ಮರುನಾಮಕರಣ ಮಾಡುವ ಕ್ರಮದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
05:15 PM (IST) Sep 11
ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಸತೀಶ್ ಸೈಲ್ ಅವರಿಗೆ 7 ದಿನಗಳ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು. ಲಿವರ್ ಸೈರೋಸಿಸ್ ಮತ್ತು ಸ್ಲೀಪ್ ಆಪ್ನಿಯಾ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ನ್ಯಾಯಾಲಯ ಜಾಮೀನು ನೀಡಿದೆ.
04:53 PM (IST) Sep 11
04:33 PM (IST) Sep 11
ಕುಲ್ಮನ್ ಘೀಸಿಂಗ್: ಜೇನ್ ಜಿ ಸಮುದಾಯದ ಪ್ರತಿಭಟನೆಯ ನಂತರ ನೇಪಾಳ ಪ್ರಧಾನಿ ಸ್ಥಾನಕ್ಕೆ ಹೆಸರು ಕೇಳಿ ಬರುತ್ತಿರುವ ಕುಲ್ಮನ್ ಘೀಸಿಂಗ್ ಅವರು ಭಾರತದಲ್ಲಿ ಇಂಜಿನಿಯರಿಂಗ್ ಓದಿದ್ದು, ಅವರ ಹಿನ್ನೆಲೆಯ ಬಗ್ಗೆ ಇಲ್ಲಿದೆ ಡಿಟೇಲ್ ಮಾಹಿತಿ.
04:20 PM (IST) Sep 11
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ರಾಜಕೀಯ ಜೀವನ, ಆಹಾರ ಪದ್ಧತಿ ಮತ್ತು ವೈಯಕ್ತಿಕ ಆಸಕ್ತಿಗಳ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದ ದೋಸೆಯ ಮೇಲಿನ ಪ್ರೀತಿ ಮತ್ತು ರಾಜಕೀಯದ ಹೊರತಾದ ಬದುಕಿನ ಕಲ್ಪನೆಯನ್ನು ಅವರು ಹಂಚಿಕೊಂಡಿದ್ದಾರೆ.
04:18 PM (IST) Sep 11
ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ವಿಚಾರದಲ್ಲಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯಗೊಂಡಿದೆ. ಗಂಡನಿಗೆ ಹೆಂಡತಿ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಮಾಡಿ ಪರಾರಿ ಆಗಿದ್ದನು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
04:12 PM (IST) Sep 11
04:05 PM (IST) Sep 11
Woman attacked over daughter education in Bagalkote ಬಾಗಲಕೋಟೆ ಜಿಲ್ಲೆಯ ಶಿರೂರ ಗ್ರಾಮದಲ್ಲಿ ಮಗಳಿಗೆ ನೋಟ್ಬುಕ್ ಕೇಳಿದ್ದಕ್ಕೆ ಸೊಸೆಯ ಮೇಲೆ ಅತ್ತೆ, ಮಾವ ಮತ್ತು ಮೈದುನ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಮಹಿಳೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
03:37 PM (IST) Sep 11
ನಿಂಬೆಹಣ್ಣು ಅನೇಕ ಆರೋಗ್ಯ ಪ್ರಯೋಜನಗಳನ್ನು ಮತ್ತು ಉಪಯೋಗಗಳನ್ನು ಹೊಂದಿದೆ. ಮನೆ ಸ್ವಚ್ಛಗೊಳಿಸಲು ಸಹ ನಿಂಬೆಹಣ್ಣನ್ನು ಬಳಸುತ್ತಾರೆ. ಇದರ ಪ್ರಬಲ ಆಮ್ಲೀಯತೆಯು ಸ್ವಚ್ಛಗೊಳಿಸುವ ಕೆಲಸವನ್ನು ಸುಲಭಗೊಳಿಸುತ್ತದೆ. ಆದರೆ ಎಲ್ಲವನ್ನೂ ನಿಂಬೆಹಣ್ಣಿನಿಂದ ಸ್ವಚ್ಛಗೊಳಿಸಬಾರದು.
03:12 PM (IST) Sep 11
Basanagouda Patil Yatnal controversial statement ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಧರ್ಮ, ರಾಜಕೀಯ ಮತ್ತು ಆಡಳಿತದ ಬಗ್ಗೆ ಟೀಕಾಪ್ರಹಾರ ನಡೆಸಿದ ಅವರು, ಸಂಗಮೇಶ್ ಅವರನ್ನು ಇಸ್ಲಾಂ ಧರ್ಮ ಸೇರಲು ಸಲಹೆ ನೀಡಿದ್ದಾರೆ.
02:55 PM (IST) Sep 11
02:41 PM (IST) Sep 11
ಜೈಲಿನಲ್ಲಿರುವ ಅವ್ಯವಸ್ಥೆಗೆ ನೊಂದು ತಮಗೆ ವಿಷ ಕೊಟ್ಟುಬಿಡಿ ಎಂದು ದರ್ಶನ್ ಅವರು ನ್ಯಾಯಾಧೀಶರ ಮುಂದೆ ಅಂಗಲಾಚಿದ ಕುರಿತು ನಿರ್ದೇಶಕ ತರುಣ್ ಸುಧೀರ್ ಹೇಳಿದ್ದೇನು?
02:26 PM (IST) Sep 11
ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರೇ ತಪ್ಪಿತಸ್ಥರಾದರೂ, ಸರ್ಕಾರ ಹಿಂದೂಗಳ ಮೇಲೆ ಕ್ರಮ ಜರುಗಿಸಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.
01:51 PM (IST) Sep 11
ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಟೀಕಿಸಿದ ರೇಣುಕಾಚಾರ್ಯ, ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
01:29 PM (IST) Sep 11
ಕಾನ್ಪುರದಲ್ಲಿ ಮಾತು ಬಾರದ, ಕಿವಿಯೂ ಕೇಳದ ಗರ್ಭಿಣಿ ಮಹಿಳೆಗೆ ಗರ್ಭಪಾತದ ಮಾತ್ರೆ ನೀಡಿ ಇಬ್ಬರು ಕಾಮುಕರು ಅತ್ಯಾ*ಚಾರವೆಸಗಿದ್ದು, ಇದರಿಂದ ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
01:12 PM (IST) Sep 11
Dog beaten with stick in Hosur ತಮಿಳುನಾಡಿನಲ್ಲಿ ಇಬ್ಬರು ವೃದ್ಧರು ಸಾಕು ನಾಯಿಯ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿರುವ ಮನಕಲಕುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪ್ರಾಣಿಪ್ರೇಮಿಗಳು ನಾಯಿಯನ್ನು ರಕ್ಷಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
01:10 PM (IST) Sep 11
12:27 PM (IST) Sep 11