Covid Vaccination: ಲಸಿಕೆ ನೀಡಿಕೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ

Published : Dec 11, 2021, 10:50 PM ISTUpdated : Dec 11, 2021, 10:51 PM IST
Covid Vaccination: ಲಸಿಕೆ ನೀಡಿಕೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ

ಸಾರಾಂಶ

* ಲಸಿಕೆ ನೀಡಿಕೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ * ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ಕರ್ನಾಟಕವೇ ಪ್ರಥಮ * ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು, (ಡಿ.11):  ಲಸಿಕೆ ನೀಡಿಕೆಯಲ್ಲಿ ಕರ್ನಾಟಕ ಮತ್ತೊಂದು ಹೊಸ ಮೈಲಿಗಲ್ಲು ಸಾಧಿಸಿದೆ. ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ಕರ್ನಾಟಕವೇ ಫಸ್ಟ್.

ಹೌದು....ರಾಜ್ಯದಲ್ಲಿ ಈವರೆಗೆ 8 ಕೋಟಿ ಡೋಸ್‌ ಲಸಿಕೆ ನೀಡಲಾಗಿದದ್ದು, ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ರಾಜ್ಯವೇ ಪ್ರಥಮ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

Omicron Test Kit ವಾರಗಟ್ಟಲೇ ಕಾಯಬೇಕಿಲ್ಲ 2 ಗಂಟೆಯಲ್ಲಿ ರಿಸಲ್ಟ್, ICMR ಅಭಿವೃದ್ಧಿ ಪಡಿಸಿದ ಟೆಸ್ಟ್ ಕಿಟ್!
 
ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ರಾಜ್ಯವೇ ಪ್ರಥಮ ಆಗಿದೆ. 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಇದೆ. ಇದಕ್ಕಾಗಿ ಜಿಲ್ಲಾಡಳಿತಗಳು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಡಾ.ಕೆ.ಸುಧಾಕರ್‌ ಧನ್ಯವಾದ ಹೇಳಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಏರಿಳಿತ 
ಕರ್ನಾಟಕದಲ್ಲಿ ಕೊರೋನಾ ವೈರಸ್ ಏರಿಳಿತವಾಗುತ್ತಿದ್ದು, ಇಂದು (ಡಿ.11) ಹೊಸದಾಗಿ 320 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,54,513 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು(ಶನಿವಾರ) ಕೊರೋನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. 

ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೋನಾದಿಂದ 38,257 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,306  ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಇನ್ನು ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 190 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

 ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ 12,58,699 ಕ್ಕೆ ಏರಿಕೆಯಾಗಿದ್ರೆ, ಈವರೆಗೆ 16,362 ಜನರು ಸೋಂಕಿಗೆ ಬಲಿಯಾಗಿದ್ದಾರೆ. 12,58,699 ಸೋಂಕಿತರ ಪೈಕಿ 12,36,789 ಜನರು ಗುಣಮುಖರಾಗಿದ್ದು, ಸದ್ಯ ಬೆಂಗಳೂರಲ್ಲಿ 5,547 ಕೊರೋನಾ ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೋ ಕೇಸ್
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 190, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 10, ಚಿತ್ರದುರ್ಗ 0, ದಕ್ಷಿಣ ಕನ್ನಡ 20, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 1, ಕೊಡಗು 21, ಕೋಲಾರ 0, ಕೊಪ್ಪಳ 0, ಮಂಡ್ಯ 4, ಮೈಸೂರು 14, ರಾಯಚೂರು 0, ರಾಮನಗರ 2, ಶಿವಮೊಗ್ಗ 3, ತುಮಕೂರು 9, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ