
ರಾಜ್ಯದಲ್ಲಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸುವ ಹಾಗೂ ಮೂಲಸೌಕರ್ಯಗಳನ್ನು ಬಲಪಡಿಸಲು ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ವಿನೂತನ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದಿದೆ. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರತಿನಿಧಿಗಳು ಹಾಗೂ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಹಯೋಗದೊಂದಿಗೆ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಬೃಹತ್ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅಧಿಕೃತವಾಗಿ ರಾಜ್ಯ ಸರ್ಕಾರ ಚಾಲನೆ ನೀಡಿದೆ
ಈ ಉನ್ನತ ಮಟ್ಟದ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಖಾಸಗಿ ಶಾಲಾ ಮಂಡಳಿಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
"ಟೂ ಸ್ಕೂಲ್ ಸಿಸ್ಟಮ್ಸ್; ಒನ್ ಶೇರ್ಡ್ ಮಿಷನ್" ಎಂಬ ಪರಿಕಲ್ಪನೆಯಡಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನಡುವೆ 3ರಿಂದ 5 ವರ್ಷಗಳ ಒಪ್ಪಂದಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಒಂದು ಖಾಸಗಿ ಶಾಲೆಯು ಸರಿಸುಮಾರು 5 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳ ಶೈಕ್ಷಣಿಕ ಪ್ರಗತಿಗೆ ಮಾರ್ಗದರ್ಶನ ನೀಡಬೇಕು.
ಆಸಕ್ತ ಖಾಸಗಿ ಸಂಸ್ಥೆಗಳು ಸರ್ಕಾರದ ಅಧಿಕೃತ ಪೋರ್ಟಲ್ nsnj.karnataka.gov.in ಮೂಲಕ ಸುಲಭವಾಗಿ ನೋಂದಣಿ ಮಾಡಿಕೊಳ್ಳಬಹುದು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಯೇ 1,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಈ ಜಾಲದೊಂದಿಗೆ ಜೋಡಿಸುವ ಬೃಹತ್ ಯೋಜನೆಯನ್ನು ಸರ್ಕಾರ ಇರಿಸಿಕೊಂಡಿದೆ.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆಯ ಸುಧಾರಣೆಗೆ ಸರ್ಕಾರ ಕೈಗೊಂಡಿರುವ ಪ್ರಮುಖ ನಿರ್ಧಾರಗಳನ್ನು ಹಂಚಿಕೊಂಡು. ಶಿಕ್ಷಣ ಎಂಬುದು ಕೇವಲ ಮಗುವಿನ ಭವಿಷ್ಯ ರೂಪಿಸುವುದು ಮಾತ್ರವಲ್ಲ; ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸರ್ಕಾರದ ಮುಖ್ಯ ಧ್ಯೇಯ. ಅಧಿಕಾರಕ್ಕೆ ಬಂದ ತಕ್ಷಣ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದಂತೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ, ಮಕ್ಕಳ ಶಾಲಾ ಬ್ಯಾಗ್ ಹೊರೆಯನ್ನು ತಗ್ಗಿಸಿದ್ದೇವೆ ಎಂದರು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ ಘೋಷಿಸಲಾಗಿದೆ. ಕಷ್ಟಪಡುವ ವಿದ್ಯಾರ್ಥಿಗಳಿಗೆ ಶಿಕ್ಷಕರ ಸಹಕಾರದೊಂದಿಗೆ ಸ್ಪೆಷಲ್ ಕ್ಲಾಸ್ ನಡೆಸಿ ಫಲಿತಾಂಶ ಸುಧಾರಣೆಗೆ ಕ್ರಮವಹಿಸಲಾಗಿದೆ. ಹಿಂದೆ ಶಿಕ್ಷಕರ ಕೊರತೆಯಿಂದ ಮಕ್ಕಳು ಶಾಲೆಗೆ ಬರಲು ಹಿಂಜರಿಯುತ್ತಿದ್ದರು. ಈಗಾಗಲೇ 13,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಬರುವ ಜನವರಿ ವೇಳೆಗೆ ಮತ್ತಷ್ಟು 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಎಲ್‌ಕೆಜಿ, ಯುಕೆಜಿ ಹಾಗೂ ದ್ವಿಭಾಷಾ ಮಾಧ್ಯಮ: ಖಾಸಗಿ ಶಾಲೆಗಳ ವ್ಯಾಮೋಹ ತಪ್ಪಿಸಲು ಸರ್ಕಾರಿ ಶಾಲೆಗಳಲ್ಲೇ 7,500 ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು.
ಇದೇ ವೇಳೆ ನನ್ನ ತಂದೆ (ಮಾಜಿ ಸಿಎಂ ಎಸ್. ಬಂಗಾರಪ್ಪ) ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ಓದಿದ್ದು ಸರ್ಕಾರಿ ಶಾಲೆಯಲ್ಲಿ. ಅಂದು ಸರ್ಕಾರಿ ಶಾಲೆಗಳು ಇಲ್ಲದಿದ್ದರೆ ಅವರಿಬ್ಬರೂ ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲವೇನೋ! ಮಕ್ಕಳ ಭವಿಷ್ಯವೇ ನಮ್ಮ ರಾಜ್ಯದ ನಿಜವಾದ ಸಂಪತ್ತು. ನಾವೆಲ್ಲರೂ ಒಟ್ಟಾಗಿ ಸೇರಿ ಸರ್ಕಾರಿ ಶಾಲೆಗಳನ್ನು ಕಟ್ಟೋಣ ಎಂದು ಖಾಸಗಿ ಸಂಸ್ಥೆಗಳಿಗೆ ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ