ಸರ್ಕಾರದ ಜನತಾ ದರ್ಶನಕ್ಕೆ ಸಾಥ್‌ ಕೊಟ್ಟ ಜನರು: ಕಂದಾಯ ಇಲಾಖೆ ಸಮಸ್ಯೆಗಳದ್ದೇ ಕಾರುಬಾರು

By Sathish Kumar KHFirst Published Sep 25, 2023, 7:31 PM IST
Highlights

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಏಕಕಾಲದಲ್ಲಿ ಸೆ.25ರಂದು ನಡೆಸಿದ ಜನತಾ ದರ್ಶನ ಕಾರ್ಯಕ್ರಮಕ್ಕೆ ಜನರಿಂದ ಉತ್ತ, ಸ್ಪಂದನೆ ವ್ಯಕ್ತವಾಗಿದೆ.

ಬೆಂಗಳೂರು (ಸೆ.25): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾದರ್ಶನ ನಡೆದಿದೆ. 

ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21 ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಯಾಗಿವೆ (ಇದರಲ್ಲಿ ಮೌಖಿಕ ದೂರುಗಳು ಮತ್ತು ಪರಿಹಾರಗಳು ದಾಖಲಾಗಿಲ್ಲ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6 ಗಂಟೆವರೆಗೂ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ.

ಕೋಲಾರದಲ್ಲಿ ಗೂಂಡಾ ವರ್ತನೆ ಪ್ರದರ್ಶಿಸಿದ ಜನಪ್ರತಿನಿಧಿಗಳು: ವೇದಿಕೆಯಲ್ಲಿ ಬೋ... ಮಗನೆ ಎಂದು ಬೈಯೋದಾ!

ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ್ದಾಗಿದ್ದ ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಡಳಿತಕ್ಕೆ ಸಂಬಂಧಿಸಿದ್ದಾಗಿವೆ.  ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯಕರ ಸಂಗತಿಯಾಗಿದೆ. 

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ಬರೋಬ್ಬರಿ 774 ಅಹವಾಲುಗಳ ಮೂಲಕ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಇನ್ನು 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.

ದರ್ಶನ್, ಸುದೀಪ್, ಶಿವಣ್ಣ, ಯಶ್ ಮಾತ್ರ ಕಾಣೋದಾ? ಮೊದಲು ತಮಿಳು ಸಿನಿಮಾ ನೋಡೋದು ಬಿಡಿ: ಕನ್ನಡಿಗರಿಗೆ ದರ್ಶನ್ ಛಾಟಿ!

ಜಿಲ್ಲಾವಾರು ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅಹವಾಲುಗಳ ವಿವರ:

click me!