ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಕೂಡ ಏರಿಕೆ ರಾಜ್ಯದ ಜನರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಇದೀಗ ಪೆಟ್ರೋಲ್ 3ರೂ. ಡೀಸೆಲ್ 3.50 ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು (ಜೂ.15): ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಕೂಡ ಏರಿಕೆ ರಾಜ್ಯದ ಜನರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಇದೀಗ ಪೆಟ್ರೋಲ್ 3ರೂ. ಡೀಸೆಲ್ 3.50 ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಡೀಸೆಲ್ ಏರಿಕೆ ವಿಚಾರವಾಗಿ ಸರ್ಕಾರದ ಮುಗಿಬಿದ್ದಿದ್ದ ಕಾಂಗ್ರೆಸ್ ನಾಯಕರು ಇದೀಗ ತಮ್ಮದೇ ಸರ್ಕಾರದಲ್ಲಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿದ್ದು ಏಕೆಂದು ಆರ್ ಅಶೋಕ್ ಸಿಟಿ ರವಿ ಸೇರಿದಂತೆ ಬಿಜೆಪಿ ನಾಯಕರು ರಾಜ್ಯ ಸರಕಾರದ ವಿರುದ್ಧ ಆಕ್ರೋಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: 'ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ?' ಎಂದ ಸಚಿವ ಎಂಬಿ ಪಾಟೀಲ್!
ಬಿಜೆಪಿಗೆ ಮತ ನೀಡಿದ್ದಕ್ಕೆ ಹೆಚ್ಚಳ?
ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ನಿರ್ಧಾರವನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ವಿದ್ಯುತ್ ತಗುಲಿ ಕೂಲಿ ಕಾರ್ಮಿಕ ದುರ್ಮರಣ!
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಸೇಡು ತೀರಿಸಿಕೊಳ್ಳಲು ಹೊರಟಿದೆ. ಇದು ಜನ ವಿರೋಧಿ ಸರ್ಕಾರ. ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ, ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ಪೆಟ್ರೋಲ್ ಬೆಲೆ 3 ರೂ. ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ರಾಜ್ಯದ ಜನರ ಜೇಬಿಗೆ ಕತ್ತರಿ ಹಾಕಿದೆ ಎಂದು ಕಿಡಿಕಾರಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ.
ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ… pic.twitter.com/JKUwZZcGKb