ಪ್ರಶ್ನೆ ಪತ್ರಿಕೆ ಸೋರಿಕೆ: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಮುಂದೂಡಿಕೆ

By Web DeskFirst Published Nov 24, 2018, 7:07 PM IST
Highlights

ಪೊಲೀಸ್  ಕಾನ್ಸ್ ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಇದ್ರಿಂದ ಪರೀಕ್ಷೆಯನ್ನ ಮುಂದೂಡಲಾಗಿದೆ.

ಬೆಂಗಳೂರು, [ನ.24]:  ಪೊಲೀಸ್  ಕಾನ್ಸ್ ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣದಲ್ಲಿ ಸಿಸಿಬಿ ಹಾಗು ಹಾಸನ ಜಿಲ್ಲಾ ಪೊಲೀಸರ ತಂಡ ಬರೊಬ್ಬರಿ 115 ಜನರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. 

ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆ ಪ್ರಕ್ರಿಯೆ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ.  ಹೀಗಾಗಿ ನಾಳೆ  [ಭಾನುವಾರ] ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪರೀಕ್ಷೆ ರದ್ದುಗೊಂಡಿದೆ. ಆದ್ರೆ ಯಾವಾಗ ಪರೀಕ್ಷೆ ಎನ್ನುವುದನ್ನ ಗೃಹ ಇಲಾಖೆ ಇನ್ನು ತಿಳಿಸಿಲ್ಲ.
 
ಪರೀಕ್ಷೆ ಮುಂದೂಡಿದ್ದರಿಂದ ಪರಿಕ್ಷಾರ್ಥಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು,  ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ ಬಳಿ 150ಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

 ದಾವಣಗೆರೆ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಸೇರಿದಂತೆ ಹಲವು ಜಿಲ್ಲೆಗಳಿಂದ ಬಂದಿರುವ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಆಗಿದೆ. 
 

click me!