ಮೈಸೂರು ಶಾಂತಿ ಕಾಪಾಡಿದ ಚಾಮುಂಡೇಶ್ವರಿ ದೇವಿ: ಮಹಿಷ ದಸರವೂ ಇಲ್ಲ, ಚಾಮುಂಡಿ ಬೆಟ್ಟ ಚಲೋನೂ ಇಲ್ಲ!

By Sathish Kumar KH  |  First Published Oct 10, 2023, 6:54 PM IST

ಮೈಸೂರು ದಸರಾ ಮಹೋತ್ಸವಕ್ಕೂ ಮುನ್ನ ವಿವಾದಕ್ಕೆ ಕಾರಣವಾಗಿದ್ದ ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಲಾಗಿದೆ.


ಮೈಸೂರು (ಅ.10): ರಾಜ್ಯದಲ್ಲಿ ಮೈಸೂರು ದಸರಾ ಮಹೋತ್ಸವ 2023ಕ್ಕೂ ಮುಂಚಿತವಾಗಿ ಮಹಿಷ ದಸರಾ ಹಾಗೂ ಅದನ್ನು ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಎರಡೂ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ನಿರಾಕರಿಸಲಾಗಿದೆ.

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಮಹಿಷ ದಸರಾ ಹಾಗೂ ಇದನ್ನು ವಿರೋಧಿಸಿ ಸಂಸದ ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಅನುಮತಿಯನ್ನು ಕೇಳಲಾಗಿತ್ತು. ಆದರೆ, ಇವರೆಡೂ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಕುಂದು ತರಬಹುದೆಂಬ ಲೆಕ್ಕಾಚಾರದಿಂದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಎರಡೂ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನಿರಾಕರಣೆ ಮಾಡಿದ್ದಾರೆ. 

Latest Videos

undefined

ಬೆಂಗಳೂರು ಹಿಂದೂಗಳಿಗೆ ಶಾಕಿಂಗ್‌ ನ್ಯೂಸ್‌: ಗಣೇಶ ಮೆರವಣಿಗೆ ನಿಷೇಧಿಸಿದ ಪೊಲೀಸ್‌ ಇಲಾಖೆ

ಈ ಮೂಲಕ ಮಹಿಷ ದಸರಾ ಆಚರಣಾ ಸಮಿತಿಗೆ ಹಾಗೂ ಚಾಮುಂಡಿ ಚಲೋಗೂ ಅನುಮತಿ ಇಲ್ಲ. ಅ.13 ರಂದು ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9-30 ಗಂಟೆಗೆ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ತೀರ್ಮಾನ ಮಾಡಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯದ್ವಾರ ತಾವರೆಕಟ್ಟೆ ಬಳಿಯಿಂದ ಜಾಥ ಹೊರಡಲಾಗುತ್ತದೆ. ಮೃಗಾಲಯ ರಸ್ತೆ ಮೂಲಕ ಮೆರವಣಿಗೆ ಪುರಭವನದ ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಲು ತೀರ್ಮಾನಿಸಲಾಗಿತ್ತು.ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸ್ ಅನುಮತಿ ನೀಡುವಂತೆ ಮಹಿಷ ದಸರಾ ಸಮಿತಿ ಮನವಿ ಮಾಡಿತ್ತು.

ಮತ್ತೊಂದೆಡೆ ಬಿಜೆಪಿ ಮಹಿಷ ದಸರಾ ಆಚರಣೆ ವಿರೋಧಿಸಿತ್ತು. ಅ.13 ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತುವುದು. ವಾಹನಗಳಲ್ಲಿ ರಸ್ತೆಯ ಮುಖಾಂತರ ಚಾಮುಂಡಿ ಬೆಟ್ಟಕ್ಕೆ ತೆರಳುವುದು. ಚಾಮುಂಡಿ ಬೆಟ್ಟದಲ್ಲಿ ಚಲೋ‌ ನಡೆಸಲು ತೀರ್ಮಾನಿಸಿತ್ತು. ಇಲ್ಲಿ ಗಲಭೆಗಳಾಗುವ ಮುನ್ಸೂಚನೆಯಿಂದ ಎರಡು ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ. ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಮಹಿಷ ದಸರಾ- ಚಾಮುಂಡಿಚಲೋಗೆ ಬ್ರೇಕ್ ಹಾಕಲಾಗಿದೆ.

Breaking: ಮದುವೆ, ಗಣೇಶ ಉತ್ಸವ, ರಾಜಕೀಯ ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್!

ಪತ್ರಿಕಾ ಆದೇಶ ಹೊರಡಿಸಿದ ಪೊಲೀಸ್‌ ಆಯುಕ್ತರು: ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶ‌ ಹೊರಡಿಸಿದ್ದಾರೆ. ಅಕ್ಟೋಬರ್ 13 ರಂದು ಮಹಿಷಾ ಜಯಂತಿಗೆ ಮಹಿಷಾ ದಸರಾ ಆಚರಣೆ ಸಮಿತಿ ಅನುಮತಿ ಕೋರಿತ್ತು. ಅದೇ ದಿನ ಮಹಿಷಾ ದಸರಾ ವಿರೋಧಿಸಿ ಬಿಜೆಪಿಯಿಂದ ಚಾಮುಂಡಿ ಬೆಟ್ಟ ಚಲೋ ಗೆ ಅನುಮತಿ ಕೋರಲಾಗಿತ್ತು. ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆ ಹಿನ್ನಲೆಯಲ್ಲಿ ಎರಡೂ ಕಾರ್ಯಕ್ರಮಗಳ ಅನುಮತಿ ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

click me!