
ಬೆಂಗಳೂರು (ಆ.02): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಸರ್ಕಾರ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳಿಂದ ಗಂಭೀರ ಟೀಕೆಗೆ ಒಳಗಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ರಾಜ್ಯದ 211 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದ್ದ ಸರ್ಕಾರ, ಈಗ 19 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ತಡೆಹಿಡಿದ ಆದೇಶ ವಿಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡಿದಂತಾಗಿದೆ.
ಹೊಸ ಸರ್ಕಾರದಲ್ಲಿ ವರ್ಗಾವಣೆಗೊಂಡ ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ ತಡೆ ಭಾಗ್ಯ ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ರಾನ್ಸ್ ಫರ್ ದಂಧೆ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ ಪುಷ್ಟಿಯನ್ನು ನೀಡಿದೆ. ನಿನ್ನೆ ರಾಜ್ಯಾದ್ಯಂತ 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ, ವರ್ಗಾವಣೆ ಆದೇಶ ಬರ್ತಿದ್ದಂತೆ ಹಲವು ಬೆಳಗಾಗುವುದರೊಳಗೆ 11 ಇನ್ಸ್ ಪೆಕ್ಟರ್‌ಗಳು ಹಾಗೂ ಮಧ್ಯಾಹ್ನದ ವೇಳೆ ಪುನಃ 8 ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು 19 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಸರ್ಕಾರದ ಬಜೆಟ್‌ನ ಅನುದಾನ ಬಳಕೆ ಆರಂಭ: ತುರ್ತು ಜಾರಿಯಾಗುವ 8 ಯೋಜನೆಗಳು ಇಲ್ಲಿವೆ ನೋಡಿ
ಶಾಸಕರು, ಸಚಿವರ ಅಸಮಾಧಾನಕ್ಕೆ ಮುಲಾಮು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಹಸೀಲ್ದಾರ್, ಬಳಿಕ ಡಿವೈಎಸ್‌ಪಿಗಳ ವರ್ಗಾವಣೆ ನಡೆಸಿದ್ದ ರಾಜ್ಯ ಸರ್ಕಾರ ಇದೀಗ 211 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಪೊಲೀಸ್ ವರ್ಗಾವಣೆ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಗೃಹ ಸಚಿವರ ಜತೆ ಮುಖ್ಯಮಂತ್ರಿಗಳು ರಹಸ್ಯ ಸಭೆ ನಡೆಸಿದ ಬಳಿಕ ಮಂಗಳವಾರ ಸಾಮೂಹಿಕ ವರ್ಗಾವಣೆ ಮಾಡಲಾಗಿತ್ತು.
ವರ್ಗಾವಣೆ ಆದೇಶ ಹೊರಡಿಸಿ, ತಡೆ ನೀಡೋದ್ಯಾಕೆ?: ಸರ್ಕಾರ ಆದೇಶ ಮಾಡೋದೇಕೆ ಮತ್ತೆ ತಡೆ ಒಡ್ಡೋದ್ಯಾಕೆ? ಸ್ವಕ್ಷೇತ್ರದ ನಿರ್ವಹಣೆಗೆ ಪೈಪೋಟಿಗಿಳಿದರೇ ಸಚಿವರು ಎಂಬ ಅನುಮಾನ ಕಂಡುಬರುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಭಾಗ್ಯಗಳ ಸರ್ಕಾರದಲ್ಲಿ ವರ್ಗಾವಣೆಯಾದ ಇನ್ಸ್ ಪೆಕ್ಟರ್ ಗಳಿಗೆ ತಡೆ ಭಾಗ್ಯವನ್ನು ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಾಸಭಾ ಕ್ಷೇತ್ರದ ಹಲವು ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಡೆ ನೀಡಲಾಗಿದೆ. ಇದಲ್ಲದೆ ಹಲವು ಕಡೆ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ಬೆಳ್ಳಂ ಬೆಳಗ್ಗೆ ತಡೆ ನೀಡಿದ್ದು, ವರ್ಗಾವಣೆಯಲ್ಲೂ ಎರಡು ಬಣಗಳ ನಡುವಿನ ಗುದ್ದಾಟ ಮತ್ತು ದಂಧೆಯು ನಡೆಯುತ್ತಿದೆಯಾ ಎಂಬ ಅನುಮಾನ ಕಂಡುಬಂದಿದೆ.
ತಹಸೀಲ್ದಾರ್, ಡಿವೈಎಸ್‌ಪಿ ಬಳಿಕ 211 ಇನ್ಸ್‌ಪೆಕ್ಟರ್ ವರ್ಗ: ಶಾಸಕರ ಬೇಸರಕ್ಕೆ ಸಿದ್ದು ಮುಲಾಮು..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ