ಹನಿಟ್ರ್ಯಾಪ್‌ನಲ್ಲಿ ಸಿಲುಕಿದ ಮತ್ತೊಬ್ಬ ರಾಜಕಾರಣಿ!: ಮರ್ಯಾದೆಗೆ ಹೆದರಿ ದೂರು ನೀಡಿಲ್ಲ!

Published : Dec 02, 2019, 09:03 AM IST
ಹನಿಟ್ರ್ಯಾಪ್‌ನಲ್ಲಿ ಸಿಲುಕಿದ ಮತ್ತೊಬ್ಬ ರಾಜಕಾರಣಿ!: ಮರ್ಯಾದೆಗೆ ಹೆದರಿ ದೂರು ನೀಡಿಲ್ಲ!

ಸಾರಾಂಶ

ಮತ್ತೊಬ್ಬ ಜನಪ್ರತಿನಿಧಿ ಹನಿಟ್ರ್ಯಾಪ್‌!| ಸಿಸಿಬಿ ತನಿಖೆಯಲ್ಲಿ ಪತ್ತೆ| ದೂರು ನೀಡಲು ಪೊಲೀಸರಿಂದಲೇ ಕೋರಿಕೆ| ಮರ್ಯಾದೆಗೆ ಹೆದರಿ ದೂರು ನೀಡಲು ಮುಂದೆ ಬಾರದ ರಾಜಕಾರಣಿ

ಬೆಂಗಳೂರು[ಡಿ.02]: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್‌ ಜಾಲದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೊಬ್ಬ ಜನಪ್ರತಿನಿಧಿ ಈ ಜಾಲದಲ್ಲಿ ಸಿಲುಕಿದ್ದನ್ನು ಪತ್ತೆ ಹಚ್ಚಿದ್ದಾರೆ.

ಜಾಲಕ್ಕೆ ಸಿಲುಕಿದ್ದ ಜನಪ್ರತಿನಿಧಿಗೆ ದೂರು ನೀಡುವಂತೆ ಸಿಸಿಬಿ ಪೊಲೀಸರು ಸಂಪರ್ಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಜಾಲದ ಪ್ರಮುಖ ಆರೋಪಿಯನ್ನು ಸಿಸಿಬಿ ಬಲೆಗೆ ಕೆಡವಿದೆ. ಆರೋಪಿಗಳು ಕೊಟ್ಟಮಾಹಿತಿ ಮೇರೆಗೆ ಮತ್ತೊಬ್ಬ ಜನಪ್ರತಿನಿಧಿ ಈ ಜಾಲದಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿದ್ದರು ಎಂಬುದು ತಿಳಿದು ಬಂದಿದೆ. ಇದೇ ರೀತಿ ಹಲವು ಮಂದಿ ಲಕ್ಷಾಂತರ ರುಪಾಯಿ ಕಳೆದುಕೊಂಡಿದ್ದಾರೆ. ಆದರೆ ದೂರು ನೀಡುವ ಬಗ್ಗೆ ಜನಪ್ರತಿನಿಧಿ ಏನನ್ನೂ ಹೇಳಿಲ್ಲ.

ಮರ್ಯಾದೆಗೆ ಅಂಜಿ ಎಲ್ಲರೂ ದೂರು ನೀಡಲು ಹೆದರುತ್ತಿದ್ದಾರೆ. ಜಾಲದಿಂದ ತೊಂದರೆಗೆ ಒಳಗಾದವರು ದೂರು ನೀಡಿದರೆ, ಅಂತಹವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ತನಿಖೆಗಾಗಿ ಪ್ರತಿಯೊಬ್ಬರಿಂದ ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ಸಿಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಅವಧಿಗೆ ಮುನ್ನ ನ್ಯಾಯಾಂಗ ಬಂಧನ:

ಇನ್ನು ಬಂಧಿತ ಆರೋಪಿ ರಾಘವೇಂದ್ರನನ್ನು ಪೊಲೀಸ್‌ ಕಸ್ಟಡಿ ಅವಧಿ ಮುಗಿಯುವ ಮುನ್ನವೇ ಸಿಸಿಬಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣದಲ್ಲಿ ಆರೋಪಿಗಳಾದ ರಾಘವೇಂದ್ರ, ಪುಷ್ಪ, ಮಂಜುನಾಥ ಹಾಗೂ ಕಲ್ಪನಾ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ನ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ರಾಘವೇಂದ್ರನನ್ನು 10 ದಿನಗಳ (ಡಿ.4ರವರೆಗೆ) ವಶಕ್ಕೆ ಪಡೆದಿದ್ದರು. ಆರು ದಿನಗಳವರೆಗೆ ವಿಚಾರಣೆ ನಡೆಸಿರುವ ಪೊಲೀಸರು, ಶನಿವಾರ (ನ.30) ರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!