Published : May 27, 2026, 06:52 AM ISTUpdated : May 27, 2026, 09:45 PM IST

Karnataka CM change Buzz: ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದು ದಾಖಲೆ ಅಲ್ಲ - ಬಿ.ವೈ.ವಿಜಯೇಂದ್ರ ವಾಗ್ದಾಳಿ

ಸಾರಾಂಶ

ಬೆಂಗಳೂರು: ರಾಜ್ಯ ರಾಜಕಾರಣದ ಬದಲಾವಣೆಗಳ ಕುರಿತು ಮಂಗಳವಾರದ ದೆಹಲಿ ಸಭೆಯಲ್ಲಿ ಮಹತ್ವದ ಚರ್ಚೆಯಾಗಿರುವ ಬೆನ್ನಲ್ಲೇ ಬುಧವಾರ ರಾಜ್ಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ. ರಾಜ್ಯ ರಾಜಕೀಯ ವಲಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಪುಟ ಸಹೋದ್ಯೋಗಿಗಳನ್ನು ಉಪಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ.

ಸಂಪುಟದ ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರಕ್ಕೆ ಕರೆದಿದ್ದು, ಬಳಿಕ ಯಾವ ಬೆಳವಣಿಗೆಗಳು ನಡೆಯಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಪರೋಕ್ಷ ಸಂದೇಶ ರವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪಹಾರ ಕೂಟ ಕರೆದಿರುವುದು ಮಹತ್ವ ಪಡೆದುಕೊಂಡಿದ್ದು, ಬಳಿಕ ರಾಜಕೀಯವಾಗಿ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

09:45 PM (IST) May 27

ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದು ದಾಖಲೆ ಅಲ್ಲ - ಬಿ.ವೈ.ವಿಜಯೇಂದ್ರ ವಾಗ್ದಾಳಿ

ಮುಖ್ಯಮಂತ್ರಿಯಾಗಿ ನಾಡಿನ ಜನತೆಯ ಸೇವೆ ಸಲ್ಲಿಸುವ ಅವಕಾಶ ದೊರೆತಾಗ ರೈತರು ಜನಸಾಮಾನ್ಯರ ಕಷ್ಟಕ್ಕೆ, ಸಮಸ್ಯೆಗೆ ಸ್ಪಂದಿಸಿದಲ್ಲಿ, ಕಣ್ಣೀರು ಒರೆಸಿದಲ್ಲಿ ಮಾತ್ರ ಇತಿಹಾಸದಲ್ಲಿ ದಾಖಲಾಗಲಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.

Read Full Story

08:55 PM (IST) May 27

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡ್ತಾರಾ? - ಶಾಸಕ ಜನಾರ್ದನ ರೆಡ್ಡಿ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್‌ ಸರ್ಕಾರ ಹಿಜಾಬ್ ವಿಚಾರದಲ್ಲಿ ರಾಜ್ಯದಲ್ಲಿ ಶಾಂತಿ ಹಾಳು ಮಾಡುತ್ತಿದೆ, ಮುಸ್ಲಿಂರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು. ಸಿಎಂ ಕುರ್ಚಿ ಜಗಳದಿಂದ..

Read Full Story

08:55 PM (IST) May 27

ದೆಹಲಿಯಿಂದ ಬೆಂಗಳೂರಿನತ್ತ ಡಿಕೆಶಿ, ವಿಮಾನನಿಲ್ದಾಣಕ್ಕೆ ಬಂದ ಹಸಿರು ಬಣ್ಣದ ಹೊಸ ಬೆಂಜ್‌ ಕಾರು!

ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗಿನ ಮಾತುಕತೆ ಮುಗಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕೆ ವಿಮಾನ ನಿಲ್ದಾಣದಲ್ಲಿ ಭಾರಿ ಸಿದ್ಧತೆ ನಡೆದಿದ್ದು, ಮುಂದಿನ ಮುಖ್ಯಮಂತ್ರಿಯಾಗುವ ನಿರೀಕ್ಷೆಗಳ ನಡುವೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
Read Full Story

08:27 PM (IST) May 27

ಕಾಂಗ್ರೆಸ್‌ನಲ್ಲಿ ನಿಜವಾದ ಹೈಕಮಾಂಡ್ ಯಾರು? ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?

ಹಿಂದುತ್ವ, ಬಂಧುತ್ವ ಹಾಗೂ ಸಿಂಧುತ್ವ ಇವು ಬಿಜೆಪಿ ಪಕ್ಷದ ಮೂಲಮಂತ್ರಗಳಾಗಿವೆ. ಸರ್ವರನ್ನು ಜೊತೆಗೆ ಕರೆದೊಯ್ಯುವುದೇ ಪಕ್ಷದ ಮಂತ್ರವಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Read Full Story

08:13 PM (IST) May 27

ಗೃಹಲಕ್ಷ್ಮಿ ಯೋಜನೆ - 2 ಸಾವಿರ ಬೇಕಿದ್ರೆ ಮರು ನೋಂದಣಿ ಕಡ್ಡಾಯ- ಮಾಡೋದು ಹೇಗೆ? ಇಲ್ಲಿದೆ ಫುಲ್​ ಡಿಟೇಲ್ಸ್​

ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಯಲು ಮತ್ತು ಅನರ್ಹರನ್ನು ಪಟ್ಟಿಯಿಂದ ತೆಗೆದುಹಾಕಲು ಸರ್ಕಾರವು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಫಲಾನುಭವಿಗಳು ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ತಮ್ಮ ಖಾತೆಯನ್ನು ಮರು-ನೋಂದಣಿ ಮಾಡಿಕೊಳ್ಳದಿದ್ದರೆ, ಮಾಸಿಕ 2000 ರೂ. ಹಣ ಸ್ಥಗಿತಗೊಳ್ಳಲಿದೆ.
Read Full Story

07:24 PM (IST) May 27

ಕರ್ನಾಟಕ ರಾಜಕೀಯದ ಕ್ಲೈಮ್ಯಾಕ್ಸ್ - ನಾಳೆ ಮಧ್ಯಾಹ್ನ 3ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ; ಅಭಿಮಾನಿಗಳ ತೀವ್ರ ಆಕ್ರೋಶ

ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ನಿರ್ಧಾರದಿಂದ ಅವರ ಅಭಿಮಾನಿಗಳು ಆಕ್ರೋಶಗೊಂಡಿದ್ದು, ತೆರೆಮರೆಯಲ್ಲಿ ಮುಂದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.
Read Full Story

06:13 PM (IST) May 27

'ಕರ್ನಾಟಕದ ಹಿತಕ್ಕಾಗಿ ನಿರ್ಧಾರ..' ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಮಾತು

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ್ದಾರೆ. ದೆಹಲಿ ಸಭೆಯು ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ್ದು ಎಂದು ಅವರು ಮತ್ತೊಮ್ಮೆ ಹೇಳಿದ್ದಾರೆ.

Read Full Story

05:52 PM (IST) May 27

'ಪ್ಲೀಸ್ ಹೋಗ್ಬೇಡಿ ಸರ್' ವಿಧಾನಸೌಧದಲ್ಲಿ ಸಿಎಂ ಕಚೇರಿ ಸಿಬ್ಬಂದಿ ಕಣ್ಣೀರು, ಸಂತೈಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ವದಂತಿಯ ಹಿನ್ನೆಲೆಯಲ್ಲಿ, ಅವರ ಕಚೇರಿ ಸಿಬ್ಬಂದಿ ಭಾವೋದ್ವೇಗದಿಂದ ಕಣ್ಣೀರಿಟ್ಟು ರಾಜೀನಾಮೆ ನೀಡದಂತೆ ಮನವಿ ಮಾಡಿದರು. ಇದೇ ವೇಳೆ, ಹಿರಿಯ ಸಚಿವರು ಸಹ ರಾಜೀನಾಮೆ ನಿರ್ಧಾರವನ್ನು ತಡೆಹಿಡಿದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಡ ಹೇರುತ್ತಿದ್ದಾರೆ.
Read Full Story

04:46 PM (IST) May 27

ನಿಗದಿ ಆಯ್ತು ನಿರ್ಗಮನದ ಮುಹೂರ್ತ - ಅಧಿಕೃತವಾಗಿ ಲೋಕಭವನದ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನದ ಭೇಟಿಗೆ ಸಮಯ ಕೋರಿದ್ದು, ಶೀಘ್ರದಲ್ಲೇ ರಾಜೀನಾಮೆ ನೀಡುವ ನಿರೀಕ್ಷೆಯಿದೆ. ರಾಜೀನಾಮೆಗೂ ಮುನ್ನ, ಅವರು ನಿರ್ಣಾಯಕ ಜಾತಿಗಣತಿ ವರದಿಯನ್ನು ಅಧಿಕೃತವಾಗಿ ಸ್ವೀಕರಿಸಲಿದ್ದು, ಇದು ಮಹತ್ವದ ರಾಜಕೀಯ ನಡೆಯೆಂದು ಪರಿಗಣಿಸಲಾಗಿದೆ.
Read Full Story

03:47 PM (IST) May 27

ಮುಖ್ಯಮಂತ್ರಿ ಇಳಿಯೋ ಮಾತು ನಿಜವಾಯ್ತು, ಇಬ್ಭಾಗವಾಗತ್ತಾ ಕಾಂಗ್ರೆಸ್​? ಡಿಕೆಶಿ 8 ವರ್ಷ ಸಿಎಂ?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಸಿದ್ದರಾಮಯ್ಯನವರ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ರಾಜಕೀಯ ಪಲ್ಲಟವು ಈ ಹಿಂದೆ ಜ್ಯೋತಿಷಿಗಳಾದ ಪ್ರಶಾಂತ್ ಕಿಣಿ ಮತ್ತು ಬಿ.ಬಿ.ಆರಾಧ್ಯ ಅವರು ನುಡಿದಿದ್ದ ಭವಿಷ್ಯವಾಣಿಗಳೊಂದಿಗೆ ತಾಳೆಯಾಗುತ್ತಿದ್ದು, ಅವರ ಮಾತುಗಳು ಇದೀಗ ಮತ್ತೆ ಚರ್ಚೆಗೆ ಬಂದಿವೆ.
Read Full Story

03:46 PM (IST) May 27

ಹೌದು..ಸಿಎಂ ರಾಜೀನಾಮೆ ಕೊಡ್ತೀನಿ ಅಂತಾ ಹೇಳಿ ಬಂದಿದ್ದಾರೆ - ಆರ್‌ವಿ ದೇಶಪಾಂಡೆ

ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿ ಬಂದಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಸಚಿವರು ರಾಜೀನಾಮೆ ನೀಡದಂತೆ ಒತ್ತಾಯಿಸಿದರೂ, ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ.

Read Full Story

01:17 PM (IST) May 27

Karnataka Politics - 42 ಶಾಸಕರಿಗೆ ಸಂಪುಟ ದರ್ಜೆ, ಕ್ಯಾಬಿನೆಟ್ ಸ್ಥಾನ ಪ್ರಶ್ನಿಸಿದ್ದ ಅರ್ಜಿ ವಜಾ

ನಿಗಮ-ಮಂಡಳಿಗಳ ಅಧ್ಯಕ್ಷರಾಗಿ ನೇಮಕಗೊಂಡ 42 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಕೂಡ ಇದೇ ರೀತಿಯ ಅರ್ಜಿಯನ್ನು ವಜಾಗೊಳಿಸಿತ್ತು.
Read Full Story

01:09 PM (IST) May 27

ರಾಜೀನಾಮೆ ಸುದ್ದಿ ಬೆನ್ನಲ್ಲೇ CM ಸಿದ್ದರಾಮಯ್ಯ ಟ್ವೀಟ್ - ಸಿಎಂ ನೀಡಿದ ಸುಳಿವು ಏನು?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆನೀಡುವ ಸುದ್ದಿಗಳ ನಡುವೆಯೇ, ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಉಲ್ಲೇಖಿಸಿ, ರಾಜೀನಾಮೆ ಕುರಿತು ನಾಳೆ ಮಾತನಾಡುವುದಾಗಿ ತಿಳಿಸಿದ್ದಾರೆ.

Read Full Story

01:01 PM (IST) May 27

Siddaramaiah - ಸಿಎಂ ಆಗಿ ಇಂದಿನ ಕಾರ್ಯಕ್ರಮಗಳೇ ಕೊನೆ? ಸಿದ್ದರಾಮಯ್ಯ ಹೇಳಿದ ಆ ಮಾತಿನಿಂದ ಮತ್ತಷ್ಟು ಸಸ್ಪೆನ್ಸ್! (Video)

ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ಊಹಾಪೋಹಗಳು ಹೆಚ್ಚಾಗಿವೆ. ಡಿಕೆ ಶಿವಕುಮಾರ್ ದೆಹಲಿಯಲ್ಲೇ ಉಳಿದಿದ್ದು, 'ನಾಳೆ ಮಾತನಾಡುತ್ತೇನೆ' ಎಂಬ ಸಿಎಂ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.
Read Full Story

12:15 PM (IST) May 27

MLA, MPಯಾಗಲು Bigg Boss ಜಾಹ್ನವಿ ಸಿದ್ಧತೆ ಹೇಗೆ ನಡೀತಿದೆ? ನಟಿ ಓಪನ್​ ಮಾತು

ಬಿಗ್​ಬಾಸ್​ ಖ್ಯಾತಿಯ ನಟಿ ಜಾಹ್ನವಿ, ಎಚ್​.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್​ ಪಕ್ಷ ಸೇರಿದ್ದಾರೆ. ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.
Read Full Story

12:08 PM (IST) May 27

ಸಿದ್ದರಾಮಯ್ಯಗೆ ರಾಜ್ಯಸಭಾ ಆಫರ್‌ ಜೊತೆಗೆ ಡಿಕೆಶಿ ಪಟ್ಟಾಭಿಷೇಕದ ಹಿಂದೆ ಪ್ರಿಯಾಂಕಾ ಗಾಂಧಿ ಮಾಸ್ಟರ್ ಮೈಂಡ್!

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯಲ್ಲಿ ಪ್ರಿಯಾಂಕಾ ಗಾಂಧಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ದೆಹಲಿಯಲ್ಲಿ ನಡೆದ ಹೈಡ್ರಾಮಾದ ಬಳಿಕ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದ್ದು, ಸಿದ್ದರಾಮಯ್ಯ ಗೆ ರಾಜ್ಯಸಭಾ ಆಫರ್ ನೀಡಲಾಗಿದೆ. 

Read Full Story

10:51 AM (IST) May 27

ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ನಾಳೆ ಬೆಳಗ್ಗೆ 10 - 30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ಶಾಸಕರ ಸುಳಿವು

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ದಟ್ಟ ವದಂತಿಗಳಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಮಧ್ಯಪ್ರವೇಶಿಸುತ್ತಿದ್ದು, ನೂತನ ನಾಯಕನ ಆಯ್ಕೆಗಾಗಿ ಶಾಸಕಾಂಗ ಪಕ್ಷದ ಸಭೆ ಕರೆಯುವ ಸಾಧ್ಯತೆಯಿದೆ.
Read Full Story

10:08 AM (IST) May 27

Karnataka Politics - ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್​? ಸಿದ್ದು ಮುಂದಿನ ನಡೆ ಏನು

ಮೂರು ವರ್ಷಗಳ ಮುಖ್ಯಮಂತ್ರಿ ಖುರ್ಚಿಯ ಗುದ್ದಾಟಕ್ಕೆ ತೆರೆಬಿದ್ದಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಈ ಮಹತ್ವದ ನಿರ್ಧಾರವನ್ನು ಹೈಕಮಾಂಡ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
Read Full Story

07:35 AM (IST) May 27

DK Shivakumar - ದೆಹಲಿ ಹೈವೋಲ್ಟೇಜ್ ಸಭೆ ಬಳಿಕ ಎಲ್ಲವೂ ಸಸ್ಪೆನ್ಸ್! ಸಿದ್ದು ರಾತ್ರಿಯೇ ವಾಪಸಾದ್ರೂ ಡಿಕೆಶಿ ದೆಹಲಿಯಲ್ಲೇ ಉಳಿದಿರುವುದೇಕೆ?

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಹೈವೋಲ್ಟೇಜ್‌ ಸಭೆಯ ನಂತರ, ಸಿಎಂ ಸಿದ್ದರಾಮಯ್ಯ ರಹಸ್ಯ ಚರ್ಚೆ ನಡೆಸಿ ಬೆಂಗಳೂರಿಗೆ ಮರಳಿದ್ದಾರೆ. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲೇ ಉಳಿದುಕೊಂಡಿದ್ದು, ಬುಧವಾರ ನಡೆಯಲಿರುವ ಮಹತ್ವದ ಉಪಹಾರ ಕೂಟಕ್ಕೆ ಹಾಜರಾಗಲಿದ್ದಾರೆ. ಕುತೂಹಲಕರ ಮಾಹಿತಿ ಇಲ್ಲಿದೆ ನೋಡಿ

Read Full Story

07:08 AM (IST) May 27

ಸಿದ್ದುಗೆ ರಾಜ್ಯಸಭೆ ಆಫರ್; ಸಿಎಂ ಸ್ಥಾನಕ್ಕೆ ರಾಜೀನಾಮೆ ಗ್ಯಾರಂಟಿ, ಯತೀಂದ್ರ, ಖರ್ಗೆ ಸೇರಿ ನಾಲ್ವರಿಗೆ ಡಿಸಿಎಂ ಪಟ್ಟ?

ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು ಖುದ್ದು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಸದಸ್ಯರಾಗುವ ಆಹ್ವಾನ ನೀಡಿದ್ದು, ತನ್ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವಂತೆ ಪರೋಕ್ಷ ಸೂಚನೆ ನೀಡಿದ್ದಾರೆ.

 

https://kannada.asianetnews.com/politics/rajya-sabha-offer-for-siddaramaiah-cm-decision-likely-on-may-28-after-rahul-gandhi-s-high-voltage-delhi-meet-rav/articleshow-087n5l4


More Trending News