
ಬೆಂಗಳೂರು(ನ.20) ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರ ತಂಡ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸುವ ಕರಸತ್ತು ನಡೆಯುತ್ತಿದೆ. ಡಿಕೆ ಶಿವಕುಮಾರ್ ಬೆಂಬಿಲತ ಶಾಸಕರ ನಿಯೋಗ ದೆಹಲಿಯಲ್ಲಿ ದಾಳ ಉರುಳಿಸಲು ಪ್ಲಾನ್ ಮಾಡುತ್ತಿದ್ದಂತೆ ಇತ್ತ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ದಲಿತ ಶಾಸಕರ ಡಿನ್ನರ್ ಮೀಟಿಂಗ್ ನಡೆಯುತ್ತಿದೆ. ದಲಿತ ಶಾಸಕರು ಮಹತ್ವದ ಸಭೆ ಸೇರಿದ್ದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗಾಳಿ ಬೀಸುತ್ತಿದೆ ಅನ್ನೋ ಮಾತುಗಳಿಗೆ ಪುಷ್ಠಿ ನೀಡುವಂತಿದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡ ಸಚಿವರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ಮಾಡಲಾಗಿದೆ. ಸಚಿವರಾದ ಸತೀಶ್ ಜಾರಕಿಹೊಳಿ, ಮಹಾದೇವಪ್ಪ, ಮಾಜಿ ಸಚಿವ ಕೆ ಎನ್ ರಾಜಣ್ಣ, ಸಚಿವ ಮುನಿಯಪ್ಪ, ಸಚಿವ ದಿನೇಶ್ ಗುಂಡೂರಾವ್,ಎಸ್‌ಟಿ ಸಮುದಾಯ ಎನ್.ಟಿ ಶ್ರೀನಿವಾಸ್ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ಒಂದುಗಂಟೆಯಿಂದ ದಲಿತ ನಾಯಕರು ಭಾರಿ ಚರ್ಚೆ ನಡೆಸಿದ್ದಾರೆ. ಊಟದ ಜೊತೆಗೆ ನಾಯಕರು ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟ ಮಾಡಿ ಬಂದ ಸತೀಶ್ ಜಾರಕಿಹೊಳಿ, ರಾಜಣ್ಣ, ಮಹದೇಪ್ಪ ನೇರವಾಗಿ ಸತೀಶ್ ಜಾರಕಿಹೊಳಿ ಮನೆಗೆ ಆಗಮಿಸಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ನಾಯಕರು ದೆಹಲಿಯಲ್ಲಿ ಸೇರುತ್ತಿದ್ದಂತೆ ಇತ್ತ ಸಿದ್ದರಾಮಯ್ಯ ಬೆಂಬಲಿತ ನಾಯಕರು ಇತ್ತ ಸಭೆ ಮೂಲಕ ಪ್ರತಿತಂತ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ದೆಹೆಲಿಯಲ್ಲಿ ಮಲ್ಲಿಕಾರ್ಜುನ ಭೇಟಿಗೆ ಆಗಮಿಸಿದ್ದ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರಾದ ಆನೇಕಲ್ ಶಿವಣ್ಣ, ರಾಜೇಗೌಡ, ವಾಸು, ರಂಗನಾಥ್, ನೆಲಮಂಗಲ ಶಾಸಕ ಶ್ರೀನಿವಾಸ್, ಗುಬ್ಬಿ ಶಾಸಕ ಶ್ರೀನಿವಾಸ್, ಎಮ್ ಎಲ್ ಸಿ ರವಿ ಸೇರಿದಂತೆ ನಾಯಕರು ಮಲ್ಲಿಕಾರ್ಜುನ ಖರ್ಗೆಗೆ ಬೇಟಿ ಮಾಡಿ ಮಾತನಾಡಲು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಪ್ರಮುಖ ಭೇಟಿ, ಕಾರ್ಯಕ್ರಮ ಮುಗಿಸಿದ ಮಲ್ಲಿಕಾರ್ಜುನ ಖರ್ಗೆಯನ್ನು ಡಿಕೆ ಶಿವಕುಮಾರ್ ಬೆಂಬಲಿಗರು ಭೇಟಿಯಾಗಿದ್ದಾರೆ. ಆದರೆ ಕೇವಲ 10 ನಿಮಿಷ ಮಾತ್ರ ಚರ್ಚೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ