PUC Result ವಾರಾಂತ್ಯದಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ!

Published : May 10, 2022, 11:49 PM IST
PUC Result  ವಾರಾಂತ್ಯದಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ!

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ತಯಾರಿ ಮೇ ತಿಂಗಳ 2ನೇ ವಾರದಲ್ಲಿ ಫಲಿತಾಂಶ ಪ್ರಕಟ ಏಪ್ರಿಲ್ 22 ರಿಂದ ಆರಂಭಗೊಂಡಿದ್ದ ಪರೀಕ್ಷೆ

ಬೆಂಗಳೂರು(ಮೇ.10): ಕರ್ನಾಟಕ ಪದಪೂರ್ವ ಶಿಕ್ಷಣ(PUC Board) ಇಲಾಖೆ ಶೀಘ್ರದಲ್ಲೇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ(Exam Result) ಪ್ರಕಟಿಸಲು ಸಜ್ಜಾಗಿದೆ. ಮೂಲಗಳ ಪ್ರಕಾರ ಮೇ ತಿಂಗಳ ಎರಡನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ. ಶೀಘ್ರದಲ್ಲೇ ದಿನಾಂಕ ಘೋಷಿಸಲಿದೆ. ಮೇ ಎರಡನೇ ವಾರದೊಳಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಇದರ ಬೆನ್ನಲ್ಲೇ ಪದವಿ ಸೇರಿದಂತೆ ಇನ್ನಿತರ ಕೋರ್ಸ್‌ಗಳ ಅಡ್ಮಿಷನ್ ಕೂಡ ಆರಂಭಗೊಳ್ಳಲಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಅನುವು ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಮತ್ತೆ ಪರೀಕ್ಷೆಗೆ ಗೈರಾದ ಹಿಜಾಬ್ ಹೋರಾಟಗಾರ್ತಿಯರು

ಹಿಜಾಬ್ ಗದ್ದಲ, ಪರೀಕ್ಷೆ ಗೈರು ಸೇರಿದಂತೆ ಹಲವು ಕಾರಣಗಳಿಂದ ಭಾರಿ ಸದ್ದು ಮಾಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಭಾರಿ ಸದ್ದು ಮಾಡಿತ್ತು. ಇದೀಗ ಇಡೀ ರಾಜ್ಯವೇ ಪರೀಕ್ಷಾ ಫಲಿತಾಂಶದ ಮೇಲೆ ಕಣ್ಣಿಟ್ಟಿದೆ. ಕಳೆದ ತಿಂಗಳು ಎಪ್ರಿಲ್ 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿತ್ತು. ಈ ಬಾರಿ ಪರೀಕ್ಷೆಗೆ ಗೈರಾದವರ ಸಂಖ್ಯೆ ಕೂಡ ಹೆಚ್ಚಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗಳ ಪೈಕಿ ಗರಿಷ್ಠ ವಿದ್ಯಾರ್ಥಿಗಳು ಗೈರಾದ ವಿಷಯ ಎಂದರೆ ಅರ್ಥಶಾಸ್ತ್ರ. ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 28,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿಲ್ಲ. ಇದರಲ್ಲಿ ನಿತ್ಯ ಕಾಲೇಜಿಗೆ ಬಂದು ತರಗತಿ ಬೋಧನೆಯಲ್ಲಿ ಪಾಲ್ಗೊಂಡ ಮಕ್ಕಳ ಸಂಖ್ಯೆಯೇ 20 ಸಾವಿರಕ್ಕೂ ಹೆಚ್ಚಿದೆ. ಉಳಿದವರು ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು. ತರಗತಿ ಮಕ್ಕಳೇ ಇಷ್ಟುದೊಡ್ಡ ಸಂಖ್ಯೆಯಲ್ಲಿ ಗೈರು ಹಾಜರಾಗಲು ಕಾರಣವೇನು ಎಂಬುದಕ್ಕೆ ಪಿಯು ಇಲಾಖೆಯಲ್ಲಿ ಉತ್ತರ ಇಲ್ಲ. ಇನ್ನು, ಕಳೆದ ವರ್ಷ ಕೋವಿಡ್‌ನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿರಲಿಲ್ಲ. 2020ರ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯಕ್ಕೆ ಮಕ್ಕಳ ಗೈರು ಹಾಜರಾತಿ ಗಮನಿಸಿದರೆ ಈ ಬಾರಿ 8,000 ದಷ್ಟುಹೆಚ್ಚಳವಾಗಿದೆ. 2020ರ ಪಿಯು ಪರೀಕ್ಷೆಗಳಲ್ಲಿ 3,87,975 ನೋಂದಾಯಿತ ಅಭ್ಯರ್ಥಿಗಳಲ್ಲಿ 20,230 ಗೈರು ಹಾಜರಾಗಿದ್ದರು. ಈ ವರ್ಷ ಒಟ್ಟು 4,12,593 ನೋಂದಾಯಿತ ಅಭ್ಯರ್ಥಿಗಳಲ್ಲಿ 28 ಸಾವಿರ ಮಂದಿ ಗೈರು ಹಾಜರಾಗಿದ್ದಾರೆ. ಹೊಸಬರ ಪೈಕಿ ತುಮಕೂರು ಜಿಲ್ಲೆಯಲ್ಲಿ 1642, ಮೈಸೂರು 1115, ಚಿತ್ರದುರ್ಗ 1076 ಮತ್ತು ಬೆಂಗಳೂರು ದಕ್ಷಿಣ 1001 ಗೈರುಹಾಜರಾದವರು ಹೆಚ್ಚು ದಾಖಲಾಗಿದ್ದಾರೆ.

ಪ್ರಥಮ PUC ಫಲಿತಾಂಶ ಪ್ರಕಟ, ಆನ್‌ಲೈನ್‌ನಲ್ಲಿ ಫಲಿತಾಂಶ ಚೆಕ್‌ ಮಾಡಲು ಇಲ್ಲಿದೆ ವಿಧಾನ

ಸಮವಸ್ತ್ರ ಕಡ್ಡಾಯಗೊಳಿಸಿದ ಕಾರಣ ಹಿಜಾಬ್ ಹೋರಾಟ ಮಾಡಿದ್ದ ಹಲವು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಇತ್ತ ಕೆಲ ವಿದ್ಯಾರ್ಥಿಗಳಿಗೆ ಕೊರೋನಾ ಕೂಡ ತೀವ್ರ ಹಿನ್ನಡೆ ತಂದಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6.84 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಕರ್ನಾಟಕದ 1,000ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ.

 ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯಲ್ಲಿನ ಝರಾಕ್ಸ್‌್ಸ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌, ಸೈಬರ್‌ ಕೆಫೆಗಳು, ಕೋಚಿಂಗ್‌ ಕೇಂದ್ರಗಳು ಬೆಳಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್‌ ಫೋನ್‌ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್‌ ಮೊಬೈಲ್‌ ಸೆಟ್‌ ಬಳಸಬಹುದಾಗಿದೆ ಎಂದು ಆದೇಶ ಹೊರಡಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!