ಬಡ್ತಿ ಮತ್ತು ವರ್ಗಾವಣೆಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ‘ಬೆಂಗಳೂರು ಚಲೋ’ ಮೂಲಕ ಸೋಮವಾರ(ಆ.12) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಂಗಳೂರು (ಆ.12): ಬಡ್ತಿ ಮತ್ತು ವರ್ಗಾವಣೆಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ‘ಬೆಂಗಳೂರು ಚಲೋ’ ಮೂಲಕ ಸೋಮವಾರ(ಆ.12) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಶಿಕ್ಷಕರ ಪ್ರತಿಭಟನೆ ನಡುವೆಯು ಸೋಮವಾರ ರಾಜ್ಯಾದ್ಯಂತ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
1ರಿಂದ 5ನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರು ಪದವೀಧರರಾಗಿದ್ದಲ್ಲಿ ಅವರನ್ನು 6-8ನೇ ತರಗತಿವರೆಗೆ ಪಾಠ ಮಾಡುವ ‘ಜಿಪಿಟಿ ಶಿಕ್ಷಕರು’ ಹುದ್ದೆಗಳಿಗೆ ಬಡ್ತಿ ನೀಡಬೇಕು. ಈ ಬಡ್ತಿಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ತರಬೇಕು. ಸೇವಾ ಜ್ಯೇಷ್ಠತೆ, ಬಡ್ತಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು. ಮುಖ್ಯ ಶಿಕ್ಷಕರ ಹುದ್ದೆಗೆ ಸೇವಾ ಹಿರಿತನ ಪರಿಗಣನೆ, ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿದವರಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಪರಿಗಣನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ.
undefined
ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣ ಸಚಿವರು ಬರೋದು ಬಹುತೇಕ ಡೌಟ್, ಶಿಕ್ಷಕರಿಗೆ ಶಿಷ್ಯಂದಿರ ಭಾಗ್ಯ ಯಾವಾಗ?
ಪಾಠಕ್ಕೂ ಸೈ, ಹೋರಾಟಕ್ಕೂ ಜೈ ಎಂದು ಶಾಲಾ ಶಿಕ್ಷಕರು ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪ್ರತಿಭಟನೆ. ಈಗಾಲಗೇ ರಾಜ್ಯದ ಮೂಲೆಮೂಲೆಗಳಿಮದ ನಗರಕ್ಕೆ ಬಂದಿಳಿದಿರುವ ಸಾವಿರಾರು ಶಿಕ್ಷಕರು. ಹಿಂದೆ ಅನೇಕ ಬಾರಿ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದ್ದರೂ ಕ್ಯಾರೇ ಅನ್ನ ಸರ್ಕಾರ. ಹೀಗಾಗಿ ಈ ಬಾರಿ ಬೇಡಿಕೆ ಈಡೇರಿಸುವವರೆಗೂ ಹೋರಾಟ ಕೈಬಿಡುವುದಿಲ್ಲ ಎನ್ನುತ್ತಿರುವ ಸಂಘಟನೆ. ಸಚಿವರ ಭೇಟಿಯಿಂದಲೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಇಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಪ್ರತಿಭಟನೆಗೆ ಸರ್ಕಾರ ಸ್ಪಂದಿಸದೆ ಹೋದ್ರೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ಚಿಂತನೆ ನಡೆಸಲಾಗಿದೆ. ಇಂದು ಸುಮಾರು 50 ಸಾವಿರಕ್ಕೂ ಅಧಿಕ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿರುವ ಸಾಧ್ಯತೆಯಿದೆ.
ಬೇಡಿಕೆಗಳೇನು?
ಈ ಬೇಡಿಕೆ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಶಿಕ್ಷಕರ ಸಂಘದ ನಡುವೆ ಇತ್ತೀಚೆಗೆ ನಡೆದ ಸಭೆ ವಿಫಲವಾಗಿರುವ ಹಿನ್ನೆಲೆ ಪ್ರತಿಭಟನೆಗೆ ಮುಂದಾಗಿರುವ ಶಿಕ್ಷಕರು.