ಎಸ್‌ಐ ಕೇಸ್‌ನಲ್ಲಿ ಶಿರಸಿ ವ್ಯಕ್ತಿ ವಿಚಾರಣೆ: ಗಣಪತಿ ಭಟ್‌ ವಶ, ಬಳಿಕ ಬಿಡುಗಡೆ

Published : Jul 13, 2022, 05:00 AM IST
ಎಸ್‌ಐ ಕೇಸ್‌ನಲ್ಲಿ ಶಿರಸಿ ವ್ಯಕ್ತಿ ವಿಚಾರಣೆ: ಗಣಪತಿ ಭಟ್‌ ವಶ, ಬಳಿಕ ಬಿಡುಗಡೆ

ಸಾರಾಂಶ

ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳು ಹಾಗೂ ನೇಮಕಾತಿ ವಿಭಾಗದ ಪೊಲೀಸರ ನಡುವೆ ಮಧ್ಯವರ್ತಿಯಾಗಿದ್ದ ಎಂಬ ಶಂಕೆ ಮೇರೆಗೆ ಶಿರಸಿ ತಾಲೂಕಿನ ಸಾಮಾಜಿಕ ಕಾರ್ಯಕರ್ತರೊಬ್ಬನನ್ನು ವಿಚಾರಣೆ ನಡೆಸಿ ಸಿಐಡಿ ಬಿಡುಗಡೆಗೊಳಿಸಿದೆ. 

ಶಿರಸಿ/ಬೆಂಗಳೂರು (ಜು.13): ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳು ಹಾಗೂ ನೇಮಕಾತಿ ವಿಭಾಗದ ಪೊಲೀಸರ ನಡುವೆ ಮಧ್ಯವರ್ತಿಯಾಗಿದ್ದ ಎಂಬ ಶಂಕೆ ಮೇರೆಗೆ ಶಿರಸಿ ತಾಲೂಕಿನ ಸಾಮಾಜಿಕ ಕಾರ್ಯಕರ್ತರೊಬ್ಬನನ್ನು ವಿಚಾರಣೆ ನಡೆಸಿ ಸಿಐಡಿ ಬಿಡುಗಡೆಗೊಳಿಸಿದೆ. ಶಿರಸಿ ತಾಲೂಕಿನ ಸಾಮಾಜಿಕ ಕಾರ್ಯಕರ್ತ ಗಣಪತಿ ಭಟ್‌ ವಿಚಾರಣೆಗೊಳಪಟ್ಟಿದ್ದು, ಸಿದ್ದಾಪುರ ಸಮೀಪದ ಹೇರೂರು ಗ್ರಾಮದಲ್ಲಿರುವ ಅವರ ಮನೆಯಲ್ಲಿ ಸಿಐಡಿ ವಶಕ್ಕೆ ಪಡೆದಿತ್ತು. ಬಳಿಕ ನಗರಕ್ಕೆ ಕರೆತಂದು ಗಣಪತಿ ಭಟ್‌ರನ್ನು ವಿಚಾರಣೆಗೊಳಪಡಿಸಿದ ತನಿಖಾ ತಂಡ ಮಂಗಳವಾರ ಬಿಡುಗಡೆಗೊಳಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಗಣಪತಿ ಭಟ್‌ ರಾಜಕೀಯ ಹಿನ್ನೆಲೆವುಳ್ಳವರಾಗಿದ್ದು, ಸ್ಥಳೀಯವಾಗಿ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಿದ್ದಾಪುರ ತಾಲೂಕಿನ ಕೆಲ ರಾಜಕೀಯ ನಾಯಕರ ಆಪ್ತ ಒಡನಾಟ ಸಹ ಇದೆ.  ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಬಂಧಿತನಾಗಿರುವ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್‌ ಜತೆ ಗಣಪತಿ ಭಟ್‌ ಸಂಪರ್ಕದಲ್ಲಿದ್ದು, ಕೆಲ ಅಭ್ಯರ್ಥಿಗಳ ಮತ್ತು ಡಿವೈಎಸ್ಪಿ ನಡುವೆ ಮಧ್ಯವರ್ತಿಯಾಗಿ ಡೀಲ್‌ ಕುದುರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. 

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕನ ಪುತ್ರನ ಹೆಸರು..!

ಈ ಮಾಹಿತಿ ಮೇರೆಗೆ ಶಿರಸಿಗೆ ತೆರಳಿದ ಸಿಐಡಿ ಪೊಲೀಸರು, ಹೇರೂರು ಸಮೀಪದ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದರು. ವಿಚಾರಣೆ ವೇಳೆ ‘ಪಿಎಸ್‌ಐ ನೇಮಕಾತಿ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನಾನೂ ಯಾವ ಅಭ್ಯರ್ಥಿಗೂ ಅನುಕೂಲ ಮಾಡಿಕೊಟ್ಟಿಲ್ಲ. ಯಾರಿಂದೂ ಹಣ ಪಡೆದಿಲ್ಲ’ ಎಂದು ಗಣಪತಿ ಭಟ್‌ ಹೇಳಿದ್ದಾರೆ ಎನ್ನಲಾಗಿದೆ.

ಇಂದು ಕೋರ್ಟ್‌ಗೆ ಅಮೃತ್‌ ಪಾಲ್‌: ಪೊಲೀಸ್‌ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬುಧವಾರ ನ್ಯಾಯಾಲಯಕ್ಕೆ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ ಎಡಿಜಿಪಿ ಅಮೃತ್‌ ಪಾಲ್‌ ಅವರನ್ನು ಸಿಐಡಿ ಹಾಜರುಪಡಿಸಲಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳ ಒಎಂಆರ್‌ಶೀಟ್‌ ತಿದ್ದಿದ ಆರೋಪಕ್ಕೆ ಎಡಿಜಿಪಿ ತುತ್ತಾಗಿದ್ದರು. 

ಪುಕ್ಸಟ್ಟೆ ಗಂಡ ಹೊಟ್ಟೆ ತುಂಬ ಉಂಡ: ಬಿಟ್ಟಿ ಇಟ್ಟಿಗೆ, ಕಬ್ಬಿಣಕ್ಕಾಗಿ ಎಸ್‌ಐ ಅಕ್ರಮದಲ್ಲಿ ಡಿವೈಎಸ್ಪಿ ಭಾಗಿ..!

ಈ ಸಂಬಂಧ ಅಮೃತ್‌ ಪಾಲ್‌ ಅವರನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನಗಳು ಸಿಐಡಿ ವಶಕ್ಕೆ ಪಡೆದಿತ್ತು. ವಿಚಾರಣೆ ವೇಳೆ ತನಿಖೆಗೆ ಎಡಿಜಿಪಿ ಸಕಾರಾತಾತ್ಮಕವಾಗಿ ಸ್ಪಂದಿಸಿಲ್ಲ. ತಾನು ಯಾವುದೇ ತಪ್ಪು ಮಾಡಿಲ್ಲ ಎನ್ನುತ್ತಾರೆ ಹೊರತು ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಅಕ್ರಮ ಹೇಗೆ ನಡೆಯಿತು ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿಲ್ಲ ಎಂದು ಸಿಐಡಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!