
ಬೆಂಗಳೂರು (ಸೆ.17): ರಾಜ್ಯದಲ್ಲಿ ಒಂದೂವರೆ ತಿಂಗಳ ಬಳಿಕ ಮತ್ತೆ ಮಳೆ ಚುರುಕಾಗಿದ್ದು ಸೆ.17 ಗುರುವಾರವೂ ಕೂಡ ಮುಂದುವರಿಯುವ ಸಾಧ್ಯತೆಯಿದೆ. ನೈರುತ್ಯ ಮುಂಗಾರು ಚುರುಕಾಗಿರುವುದ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯಾಗಲಿದೆ ಬೆಂಗಳೂರಿನಲ್ಲಿ ಇಂದು ಮೋಡ ಮುಸುಕಿದ ವಾತಾವರಣ ಇರಲಿದ್ದು, ರಾತ್ರಿ ವೇಳೆಯಾಗುವ ಸಾಧ್ಯತೆಯಿದೆ.
ರಾಜ್ಯದ 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳು ಇದರಲ್ಲಿ ಸೇರಿವೆ. ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು. ಮಳೆಯ ಜೊತೆಗೆ ಗುಡುಗು, ಮಿಂಚು ಹಾಗೂ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇದು ಇಂದು ಕೂಡ ಮುಂದುವರಿಯಲಿದ್ದು. ಬೆಳಗಿನ ಜಾವ ಎಳೆ ಬಿಸಿಲಿನೊಂದಿಗೆ ಮತ್ತೆ ಮೋಡ ಕವಿದಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗಲಿದ್ದು ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ವೇಳೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.
ಬೆಂಗಳೂರು ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಕಳೆದೆರಡು ದಿನಗಳಲ್ಲಿ ಭಾರಿ ಮಳೆಯಾಗಿದೆ. ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆ 100 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದೆ. ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರಿ ಮಳೆಯಯಾಗಿ್ದು, ಗುಡುಗು, ಮಿಂಚು ಮತ್ತು ವೇಗದ ಗಾಳಿ ಇರುವ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ವಿಶೇಷವಾಗಿ ಪ್ರಯಾಣ ಮಾಡುವವರು ಹವಾಮಾನ ಮುನ್ಸೂಚನೆ ಗಮನಿಸಿ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ