ಬೆಂಗಳೂರಲ್ಲಿ ಭಾರೀ ಮಳೆ; ಆಟೋ ಮೇಲೆ ಬಿದ್ದ ಬೃಹತ್ ಮರ! ಚಾಲಕ, ಪ್ರಯಾಣಿಕರಿಗೆ ಗಾಯ!

Published : Aug 16, 2024, 08:25 PM ISTUpdated : Aug 16, 2024, 08:38 PM IST
ಬೆಂಗಳೂರಲ್ಲಿ ಭಾರೀ ಮಳೆ; ಆಟೋ ಮೇಲೆ ಬಿದ್ದ ಬೃಹತ್ ಮರ! ಚಾಲಕ, ಪ್ರಯಾಣಿಕರಿಗೆ ಗಾಯ!

ಸಾರಾಂಶ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆ ಮುಂದವರಿದಿದ್ದು, ಇಂದು ಸಂಜೆ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಆಟೋ ಮೇಲೆ ಬೃಹತ್ ಮರವೊಂದು ಉರುಳಿಬಿದ್ದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (ಆ.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆ ಮುಂದವರಿದಿದ್ದು, ಇಂದು ಸಂಜೆ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಆಟೋ ಮೇಲೆ ಬೃಹತ್ ಮರವೊಂದು ಉರುಳಿಬಿದ್ದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನಗರದ ಎಂಸಿ ಲೇಔಟ್‌ನಲ್ಲಿ ನಡೆದ ಘಟನೆ.  ಇಬ್ಬರು ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ಮೇಲೆ ಬಿದ್ದ ಮರ. ಮರ ಬಿದ್ದಿರೋ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ.  ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.  ಚಾಲಕ, ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ

ಘಟನಾ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಗೆ ಬಿದ್ದಿರುವ ಬೃಹತ್ ಮರ ತೆರವುಗೊಳಿಸುತ್ತಿರುವ ಸಿಬ್ಬಂದಿ.

ಬೆಂಗಳೂರು: ನೀರು ನುಗ್ಗಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಸುಟ್ಟು ಭಸ್ಮ..! 

ಕಳೆದೆರಡು ದಿನಗಳಿಂದ ಹೊರಪು ಆಗಿದ್ದ ಮತ್ತೆ ಇಂದಿನಿಂದ ಮುಂದುವರಿದಿರುವ ಮಳೆ. ಮೆಜೆಸ್ಟಿಕ್, ವಿಜಯನಗರ, ಯಶವಂತಪುರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಮಳೆಯಿಂದಾಗ ಹಲವೆಡೆ ಬೃಹತ್ ಮರಗಳು ಉರುಳಿಬಿದ್ದಿವೆ. ಏಕಾಏಕಿ ಸುರಿದ ಭಾರೀ ಮಳೆ ವಾಹನ ಪ್ರಯಾಣಿಕರು ಪರದಾಡಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್