ಸವದತ್ತಿಯಲ್ಲಿ ಭಾರೀ ಮಳೆ; ದೇವಸ್ಥಾನದೊಳಗೆ ನೀರು ನುಗ್ಗಿ ಯಲ್ಲಮ್ಮನ ಹುಂಡಿ ಹಣ ಒದ್ದೆ!

Kannadaprabha News   | Kannada Prabha
Published : Aug 13, 2025, 08:05 AM IST
Karnataka rains

ಸಾರಾಂಶ

ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಭಾರೀ ಮಳೆಯಿಂದಾಗಿ ದೇವಸ್ಥಾನದ ಹುಂಡಿ ನೀರಿನಲ್ಲಿ ಮುಳುಗಿ, ನೋಟುಗಳು ನೆನೆದಿವೆ. ಧಾರ್ಮಿಕ ದತ್ತಿ ಇಲಾಖೆ ಸಿಬ್ಬಂದಿ ಹುಂಡಿಯಿಂದ ನೋಟುಗಳನ್ನು ತೆಗೆದು ಒಣಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸವದತ್ತಿ (ಆ.13): ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳ, ಕೊಳ್ಳ ಉಕ್ಕಿ ಹರಿದು ಯಲ್ಲಮ್ಮನ ದೇವಸ್ಥಾನದಲ್ಲಿದ್ದ ಹುಂಡಿಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದರಿಂದ ಹುಂಡಿಯಲ್ಲಿದ್ದ ನೋಟುಗಳೆಲ್ಲಾ ನೆನೆದಿದ್ದು, ಅದನ್ನು ದೇವಸ್ಥಾನದ ಪ್ರಾಂಗಣದಲ್ಲಿ ಹಾಕಿ ಒಣಗಿಸಲಾಗುತ್ತಿದೆ.

ಮಳೆ ನೀರು ಸಂಗ್ರಹಗೊಂಡ ಹುಂಡಿಗಳನ್ನು ಧಾರ್ಮಿಕದತ್ತಿ ಇಲಾಖೆ, ಸವದತ್ತಿ ತಹಸೀಲ್ದಾರ್ ಕಚೇರಿಯ ಸಿಬ್ಬಂದಿ, ಬೈಲ್‌ಹೊಂಗಲ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿ ಸೇರಿದಂತೆ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿಯಲ್ಲಿದ್ದ ಹಣವನ್ನೆಲ್ಲ ಹೊರ ತೆಗೆದು ಒಣಗಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಯಲ್ಲಮ್ಮನ ಗುಡ್ಡಕ್ಕೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುತ್ತಾರೆ. ದೇವಸ್ಥಾನದಲ್ಲಿರುವ ಹುಂಡಿಯಲ್ಲಿ ನಗದು, ಚಿನ್ನ, ಬೆಳ್ಳಿ ಆಭರಣ ಹಾಕಿ ಭಕ್ತಿ ಸಮರ್ಪಿಸುವದು ವಾಡಿಕೆಯಾಗಿದೆ. ಇತ್ತೀಚೆಗೆ ಹುಂಡಿಗಳ ಎಣಿಕೆ ನಡೆದಾಗ ೨೦೨೫ ಏ.೧ ರಿಂದ ಜೂ.೩೦ರ ಅವಧಿಯಲ್ಲಿ ₹೩.೩೯ ಕೋಟಿ ನಗದು, ₹೩೨.೯೪ ಲಕ್ಷ ಮೌಲ್ಯದ ಚಿನ್ನಾಭರಣ, ₹೯.೭೯ ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸೇರಿದಂತೆ ₹೩.೮೧ ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್