ರಾಜಭವನ ವೀಕ್ಷಣೆಗೆ ಆ.16ರಿಂದ 3 ದಿನ ಸಾರ್ವಜನಿಕರಿಗೆ ಮುಕ್ತ ಪ್ರವೇಶ, ನಿಯಮಗಳೇನು?

Published : Aug 12, 2025, 08:01 PM IST
karnataka raj bhavan

ಸಾರಾಂಶ

79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 16 ರಿಂದ 18 ರವರೆಗೆ ಸಾರ್ವಜನಿಕರಿಗೆ ರಾಜಭವನ ವೀಕ್ಷಣೆಗೆ ಅವಕಾಶ. ಸಂಜೆ 6 ರಿಂದ 7.30 ರವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಭದ್ರತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಬೆಂಗಳೂರು : 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ದಿನಾಂಕ: 16, 17 ಮತ್ತು 18, ಆಗಸ್ಟ್ 2025 ರಂದು ಒಟ್ಟು ಮೂರು ದಿನಗಳು ರಾಜಭವನ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸದರಿ ಮೂರು ದಿನಗಳು ಸಂಜೆ 6 ರಿಂದ 7.30 ಗಂಟೆಯವರೆಗೆ ವೀಕ್ಷಣೆ ಮಾಡಬಹುದಾಗಿದೆ.

ರಾಜಭವನದ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಸರ್ಕಾರದಿಂದ ವಿತರಿಸಿರುವ ಸ್ಪಷ್ಟವಾಗಿ ಭಾವಚಿತ್ರವಿರುವ ಐ.ಡಿ. ಕಾರ್ಡ್‌ ನ್ನು ಕಡ್ಡಾಯವಾಗಿ ತರುವುದು. ರಾಜಭವನದ ಪ್ರವೇಶದ ಸಂದರ್ಭದಲ್ಲಿ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡುವುದು. ರಾಜಭವನದ ಆವರಣದೊಳಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವ ಸ್ಥಳಗಳನ್ನು ಬಿಟ್ಟು ಬೇರೆಡೆಗೆ ಪ್ರವೇಶಿಸಬಾರದು. ಸಾರ್ವಜನಿಕರು ಪ್ರವೇಶದ ಸಂದರ್ಭದಲ್ಲಿ ಮತ್ತು ಪ್ರವೇಶಿಸಿದ ನಂತರ ಭದ್ರತೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು. ಸಾರ್ವಜನಿಕರು ರಾಜಭವನದ ಆವರಣದೊಳಗೆ ಶಾಂತಿ ಮತ್ತು ನಿಶಬ್ಧ ಕಾಪಾಡುವ ಮೂಲಕ ಸಹಕರಿಸಬೇಕು.

ವಿಶೇಷ ಸೂಚನೆಗಳು: ಸಾರ್ವಜನಿಕರು ರಾಜಭವನದ ಪ್ರವೇಶದ ಸಂದರ್ಭದಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕ್ಯಾಮೆರಾಗಳು ಮತ್ತು ಎಲ್ಲಾ ರೀತಿಯ ಎಲೆಕ್ಟಿಕಲ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚೂಪಾದ ವಸ್ತುಗಳು ಮತ್ತು ಎಲ್ಲ ರೀತಿಯ ಮೆಟಲ್ ವಸ್ತುಗಳು, ತಿಂಡಿ-ತಿನಿಸುಗಳು, ಪ್ಲಾಸ್ಟಿಕ್ ವಸ್ತುಗಳನ್ನು, ಬೆಂಕಿಪೊಟ್ಟಣ, ಲೈಟರ್‌ಗಳು, ಎಲ್ಲಾ ರೀತಿಯ ಬ್ಯಾಗ್ ಮತ್ತು ಕೈ ಚೀಲಗಳನ್ನು, ತಂಬಾಕು ಮತ್ತು ಮಧ್ಯಪಾನ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಸಾರ್ವಜನಿಕರ ಎಲ್ಲಾ ರೀತಿಯ ವಾಹನಗಳನ್ನು ರಾಜಭವನದ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಸಾರ್ವಜನಿಕರು ಭದ್ರತಾ ಸಿಬ್ಬಂದಿಗಳು ನೀಡುವ ಸೂಚನೆಗಳನ್ನು ಪಾಲಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!
Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!