ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಡಾ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ.
ಬೆಂಗಳೂರು (ಜು.01): ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಡಾ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಸಂಬಂಧಿಸಿದಂತೆ ಕರ್ನಾಟ ರಕ್ಷಣಾ ವೇದಿಕೆ (ಕರವೇ)ಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗಿದೆ.
ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕರವೇ ಪ್ರತಿಭಟನೆಯ ನೇತೃತ್ವದ ವಹಿಸಿಕೊಂಡಿದ್ದ ಟಿ.ಎ. ನಾರಾಯಣಗೌಡ ಅವರು ರಾಜ್ಯದಲ್ಲಿ ಡಾ. ಸರೋಜಿನಿ ಮಹಿಷಿ ವರದಿಯನ್ನು ಮುಂದಿನ 1 ತಿಂಗಳ ಒಳಗಾಗಿ ಜಾರಿಗೆ ತರಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕರವೇ ನಿಯೋಗದಿಂದ ಮನವಿ ಸಲ್ಲಿಸಲಾಗುವುದು. ಈ ಮೂಲಕ ರಾಜ್ಯ ಸರ್ಕಾರಕ್ಕೆ ಸರೋಜಿನಿ ಮಹಿಷಿ ವರದಿ ಜಾರಿಗೆ ಒಂದು ತಿಂಗಳ ಗಡುವು ನೀಡಲಾಗುವುದು. ಒಂದೊಮ್ಮೆ ಗಡುವಿನೊಳಗೆ ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ಉಗ್ರ ಹೋರಾಟದ ಮಾಡಲಾಗುವುದು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರ ಜಾತಿವಾದಿತನ ಬಜಾರದಲ್ಲಿ ಬೆತ್ತಲಾಗಿದೆ; ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ
ಇನ್ನು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಭೇಟಿ ಆಗಬೇಕು ಅಂತ ಕೇಳಿದ್ದೇನೆ. ಸಿಎಂ ಭೇಟಿ ಮಾಡಿ ಚರ್ಚೆ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಷ್ಟು ಬೇಗ ಸಿಎಂ ಸಿದ್ದರಾಮಯ್ಯ ನಮ್ಮ ಹೋರಾಟದ ಕುರಿತು ಸ್ಪಂದಿಸಬೇಕು. ನಾವು ಒಂದು ತಿಂಗಳ ಗಡುವನ್ನು ಸರ್ಕಾರಕ್ಕೆ ನೀಡುತ್ತಿದ್ದೇವೆ. ಇದು ನಾರಾಯಣಗೌಡರ ಬೇಡಿಕೆ ಅಲ್ಲ ಸಮಸ್ತ ಕನ್ನಡಿಗರ ಬೇಡಿಕೆ ಎಂದು ಹೇಳಿದರು.
ರಾಜ್ಯದಲ್ಲಿ ಕನ್ನಡಿಗರಿಗೆ ಪೂರ್ಣ ಪ್ರಮಾಣದಲ್ಲಿ ಉದ್ಯೋಗ ಸಿಗಬೇಕೆಂದರೆ ಸರ್ಕಾರ ಸರೋಜಿನಿ ಮಹಿಷಿ ವರದಿಯನ್ನು ಅದಷ್ಟು ಬೇಗ ಅನುಷ್ಠಾನ ಮಾಡಬೇಕು. ಇನ್ನು ಕನ್ನಡ ಚಿತ್ರರಂಗದ ಬೆಂಬಲ ಸಿಗದ ವಿಚಾರದ ಬಗ್ಗೆ ನಾನು ಏನೂ ಹೇಳಲ್ಲ. ಬೇರೆಯವರ ಬಗ್ಗೆ ಮಾತನಾಡೋಕೆ ಆಗಲ್ಲ. ಆ ಬಗ್ಗೆ ನಾನು ಕಾಮೆಂಟ್ ಮಾಡಲ್ಲ. ಮೀಸಲಾತಿ ಕಾಯ್ದೆಯಾದರೆ ನಿಜಕ್ಕೂ ಕನ್ನಡಿಗರಿಗೆ ಒಳ್ಳೆಯದು ಆಗಲಿದೆ.
- ಪೂಜಾ ಗಾಂಧಿ, ನಟಿ