ಕನ್ನಡಿಗರಿಗೆ ರಾಜ್ಯದ ಎಲ್ಲ ಉದ್ಯಮಗಳಲ್ಲಿ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ನಾಳೆ ಕರವೇ ಪ್ರತಿಭಟನೆ ಹಮ್ಮಿಕೊಂಡಿದ್ದು, ಹಲವು ಸಿನಿಮಾ ತಾರೆಯರು ಸಾಥ್ ನೀಡಿದ್ದಾರೆ.
ಬೆಂಗಳೂರು (ಜೂ.30): ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಶೇ.80 ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.100 ಉದ್ಯೋಗ ಮೀಸಲಾತಿ ಒದಗಿಸುವುದು ಸೇರಿದಂತೆ ವಿವಿಧ 10 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ (ಜು.1ರಂದು) ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರವೇ ಪ್ರತಿಭಟನೆಗೆ ಹಲವು ಸಿನಿಮಾ ತಾರೆಯರೂ ಸಾಥ್ ನೀಡಲಿದ್ದಾರೆ.
ನಾಳೆ ಕರುನಾಡಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಣ ಕಹಳೆ ಮೊಳಗಲಿದೆ. ಬೃಹತ್ ಪ್ರತಿಭಟನೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಾಕ್ಷಿಯಾಗಲಿದೆ. ಕನ್ನಡಿಗರ ಉದ್ಯೋಗಕ್ಕಾಗಿ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದಾದ್ಯಂತ ಚಳವಳಿ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆಯಿಂದ ದಿನಾಂಕ ಘೋಷಣೆ ಮಾಡಲಾಗುತ್ತದೆ. ನಾಳೆ ಬೆಳಿಗ್ಗೆ 11 ಗಂಟೆಯಿಂದ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ. ಇದರೊಂದಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆಗೆ ಆಯೋಜನೆ ಮಾಡಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ವಿರುದ್ಧವೇ ಹೇಳಿಕೆ ನೀಡಿದ ನಟಿ ಪವಿತ್ರಾಗೌಡ
ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಪ್ರಮುಖ ಬೇಡಿಕೆಗಳು
ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗದ ಸಮಗ್ರ ಕಾಯ್ದೆ ರೂಪಿಸಲು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹಕ್ಕೆ ಕರೆಕೊಟ್ಟಿರುವುದನ್ನು ಕನ್ನಡ ಚಲನಚಿತ್ರ ನಟಿಯಾದ ಪೂಜಾ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನಾವಿರುವ ನೆಲ, ಜಲ, ಭಾಷೆಯನ್ನು ಗೌರವಿಸಿ ನಾವು ಆ ಭಾಷೆಯನ್ನು ಕಲಿತು ನಮ್ಮದಾಗಿಸಿಕೊಳ್ಳಬೇಕು. ಜೊತೆಗೆ, ಸ್ಥಳೀಯ ಜನರು ಅಭಿವೃದ್ಧಿ ಹೊಂದಬೇಕೆಂದರೆ ರಾಜ್ಯದಲ್ಲಿರುವ ಎಲ್ಲ ಕೈಗಾರಿಕೆಗಳು, ಖಾಸಗಿ ಕಂಪನಿಗಳು, ಉದ್ಯಮಗಳಲ್ಲಿ ಕನ್ನಡಿಗರಿಗೆ ಅಗ್ರಗಣ್ಯ ಉದ್ಯೋಮ ಮೀಸಲಾತಿ ಸಿಗಬೇಕು ಎಂದು ನಟಿ ಪೂಜಾಗಾಂಧಿ ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಕರವೇ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ನಟ ದರ್ಶನ್‌ಗಾಗಿ ಜೈಲು ಸೇರಿದ ಅಭಿಮಾನಿ ಜಗದೀಶನ ಕುಟುಂಬಕ್ಕೆ ತುತ್ತು ಅನ್ನಕ್ಕೂ ತತ್ವಾರ!
ಕನ್ನಡಿಗರಿಗೆ ಸಾರ್ವಜನಿಕ ವಲಯ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.80ಕ್ಕಿಂತ ಅಧಿಕ ಉದ್ಯೋಗ ಮೀಸಲಾತಿ ಸಿಗಬೇಕೆಂಬ ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಮಾಡುತ್ತಿರುವ ನಾರಾಯಣಗೌಡ ನೇತೃತ್ವದ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುತ್ತೇನೆ ಎಂದು ನಟ ನೆನಪಿರಲಿ ಪ್ರೇಮ್ ಹೇಳಿದ್ದಾರೆ.