
- ಯಾದಗಿರಿ (ನ.9): ಕಳೆದ 6 ತಿಂಗಳಿಂದ ಪಡಿತರ ವಿತರಕರಿಗೆ ರಾಜ್ಯ ಸರ್ಕಾರದಿಂದ ಸಿಗಬೇಕಾದ ಕಮಿಷನ್ ಬರದಿದ್ದರಿಂದ ಸಗಟು ಮಳಿಗೆಗಳಿಂದ ನವೆಂಬರ್ ತಿಂಗಳ ಪಡಿತರ ಸ್ವೀಕರಿಸದೆ, ರಾಜ್ಯಾದ್ಯಂತ ಪಡಿತರ ವಿತರಿಸದಿರಲು ಪಡಿತರ ವಿತರಕರ ಸಂಘ ನಿರ್ಧರಿಸಿದೆ.
ರಾಜ್ಯ ಸರ್ಕಾರದ ನಡೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಲ್ಯಾಣ ಕರ್ನಾಟಕ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ನಿರ್ದೇಶಕ ಆರ್.ಮಹಾದೇವಪ್ಪ ಅವರು, ರಾಜ್ಯಾದ್ಯಂತ ಪಡಿತರ ವಿತರಕರಿಗೆ ಕಮಿಷನ್ ಬರದೆ ಇರುವುದರಿಂದ ತುಂಬಾ ತೊಂದರೆಯಾಗಿದ್ದು, ಈ ಸಮಸ್ಯೆ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಕೃಷ್ಟಪ್ಪ ಅವರು ಸಿಎಂ, ಡಿಸಿಎಂ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನವೆಂಬರ್ ತಿಂಗಳ ಪಡಿತರ ವಿತರಣೆ ಮಾಡದಿರಲು ಸಂಘ ನಿರ್ಧರಿಸಿದೆ ಎಂದರು.
ಕೇಂದ್ರ ಸರ್ಕಾರದ ಎನ್ಎಫ್ಎಸ್ ಅಕ್ಕಿಗೆ ಸಂಬಂಧಪಟ್ಟಂತೆ 2 ತಿಂಗಳ ಕಮಿಷನ್ ಬಂದಿದೆ. ಆದರೆ, ರಾಗಿ ಮತ್ತು ಜೋಳಕ್ಕೆ ಸಂಬಂಧಿಸಿದ ಕಮಿಷನ್ ಇನ್ನೂ ಬಂದಿಲ್ಲ. ನಮ್ಮ ಶ್ರಮಕ್ಕೆ ಬೆಲೆಯೇ ಇಲ್ಲವಾಗಿದೆ ಎಂದು ಅಳಲು ತೊಡಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ