ಸೋಮವಾರ ತ್ರಿಶತಕ ಬಾರಿಸಿದ ಕೊರೋನಾ, ಆದ್ರೂ ಗುಣಮುಖರ ಸಂಖ್ಯೆಯೇ ಹೆಚ್ಚು

By Suvarna NewsFirst Published Jun 8, 2020, 6:33 PM IST
Highlights

ಕರ್ನಾಟಕದಲ್ಲಿ ಕೊರೋನಾ ಅಬ್ಬರ ಶುರುವಾಗಿನಿಂದಲೂ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಆದ್ರೆ, ರಾಜ್ಯದಲ್ಲಿಂದ ಸೋಂಕಿತರಿಗಿಂತೂ ಗುಣಮುಖರ ಸಂಖ್ಯೆಯೇ ಹೆಚ್ಚಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

ಬೆಂಗಳೂರು, (ಜೂನ್.08): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ.

ಆದ್ರೆ ಒಂದೇ ದಿನ ಸೋಂಕಿತರ ಸಂಖ್ಯೆಯನ್ನು ಗುಣಮುಖರಾದವರ ಸಂಖ್ಯೆ ಮೀರಿಸಿದೆ. ಇಂದು ಸ(ಸೋಮವಾರ) ಆರೋಗ್ಯ ಇಲಾಖೆ ರಿಲೀಸ್ ಮಾಡಿದ ಬುಲೆಟಿನಲ್ಲಿ ಸೋಂಕಿತರಿಗಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಹೆಚ್ಚಿದೆ.

ಪೆಟ್ರೋಲ್, ಡೀಸೆಲ್ ದುಬಾರಿ, ರಿವರ್ಸ್ ಕ್ವಾರಂಟೈನ್‌ಗೆ ತಯಾರಿ; ಜೂ.8ರ ಟಾಪ್ 10 ಸುದ್ದಿ!

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ 24 ಗಂಟೆಗಳಲ್ಲಿ 387 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಿರುವುದರ ಮಧ್ಯೆ ಗುಣಮುಖರಾಗಿ ಆಸ್ಪತ್ರೆಯಿಮದ ಡಿಸ್ಚಾರ್ಜ್ ಆದವರ ಸಂಖ್ಯೆಯಲ್ಲೂ ಹೆಚ್ಚಾಗಿರುವುದು ಕೊಂಚ ಮಟ್ಟಿಗೆ ಸಮಧಾನದ ಸಂಗತಿಯಾಗಿದೆ.

ಸೋಮವಾರ 308 ಕೇಸ್

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 99 ಜನರಿಗೆ ಸೋಂಕು ಕಾಣಿಸಿಕೊಂಡರೆ, ಯಾದಗಿರಿ ಜಿಲ್ಲೆಯಲ್ಲಿ 66 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.

ಇನ್ನು ಇವತ್ತು  (ಸೋಮವಾರ) ಒಂದೇ ದಿನ ಮೂವರು ಮೃತಪಟ್ಟಿದ್ದು ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ. 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ 277 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು, ಒಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.

387 ಮಂದಿ ಇವತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 2519 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 45 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಬೀದರ್ ಜಿಲ್ಲೆಯಲ್ಲಿ 48 ಜನರಿಗೆ ಸೋಂಕು ತಾಗಿದೆ. ಬೆಂಗಳೂರು ನಗರದಲ್ಲಿ 18 ಮಂದಿಗೆ, ಬಳ್ಳಾರಿಯಲ್ಲಿ ಎಂಟು ಜನರಿಗೆ, ಗದಗದಲ್ಲಿ ಆರು, ಶಿವಮೊಗ್ಗ ಮತ್ತು ಧಾರವಾಡದಲ್ಲಿ ತಲಾ ನಾಲ್ವರಿಗೆ ಸೋಂಕು ತಾಗಿದೆ.

Evening Media Bulletin 08/06/2020.
Please click on the link below to view bulletin.https://t.co/AebFNFprnc pic.twitter.com/KMx0kd1fTW

— K'taka Health Dept (@DHFWKA)
click me!