ಎಸ್ಸಿ ಒಳಮೀಸಲಾತಿ ಬಳಿಕ, ಶಿಕ್ಷಣ & ಉದ್ಯೋಗ ನೇಮಕಾತಿಗೆ ರೋಸ್ಟರ್ ಬಿಂದು ಹಂಚಿಕೆ ಮಾಡಿ ಆದೇಶ!

Published : Sep 03, 2025, 09:57 PM IST
Koti Kanta Gayana vidhana soudha 07

ಸಾರಾಂಶ

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಂಚಿಕೆ ಮಾಡಿದ್ದು, ಎಡಗೈ, ಬಲಗೈ ಮತ್ತು ಇತರೆ ಎಸ್ಸಿ ಸಮುದಾಯಗಳಿಗೆ ಮೀಸಲಾತಿ ನೀಡಿದೆ. ಇದೀಗ ಎಸ್ಸಿ, ಎಸ್‌ಟಿ, ಒಬಿಸಿ, ಜನರಲ್ ಕೆಟಗರಿ ಮೀಸಲಾತಿ ಹಂಚಿಕೆ ಪಟ್ಟಿ ಬಿಡುಗಡೆ ಮಾಡಿದ್ದು, ಶಿಕ್ಷಣ ಮತ್ತು ಉದ್ಯೋಗಗಳಿಗೆ ಇದೇ ಮೀಸಲಾತಿ ಅನ್ವಯವಾಗಲಿದೆ

ಬೆಂಗಳೂರು (ಸೆ.03): ರಾಜ್ಯದಲ್ಲಿ ಸರ್ಕಾರದಿಂದ ಇತ್ತೀಚೆಗೆ ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಹಂಚಿಕೆಯನ್ನು ಮಾಡಲಾಗಿದೆ. ಪರಿಶಿಷ್ಟ ಜಾತಿಗೆ ನೀಡಲಾಗಿದ್ದ ಶೇ.17 ಮೀಸಲಾತಿಯನ್ನು ಎಡಗೈ ಸಮುದಾಯ ಶೇ.6, ಬಲಗೈ ಸಮುದಾಯ ಶೇ.6 ಹಾಗೂ ಇತರೆ ಎಸ್ಸಿ ಸಮುದಾಯಕ್ಕೆ ಶೇ.5 ಮೀಸಲಾತಿ ಕೊಟ್ಟಿದೆ. ಹಾಗಾದರೆ ಸಾಮಾನ್ಯ ವರ್ಗ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಮೀಸಲಾತಿ ಎಷ್ಟಿದೆ ಎಂಬುದರ ಆದೇಶ ಹೊರಡಿಸಿದೆ. ಈ ಮೀಸಲಾತಿ ಆಧಾರದಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಮೀಸಲಾತಿ ಕಲ್ಪಿಸಲಾಗುತ್ತದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ಥಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ 100 ಬಿಂದುಗಳ ಪರಿಷ್ಕೃತ ರೋಸ್ಟರನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ. ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಸರ್ಕಾರ ನಿಗದಿಪಡಿಸಿದ 100 ಬಿಂದುಗಳ ಮರು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು, ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇಕಡ 6, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪ್ರವರ್ಗ-ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ಮೀಸಲಾತಿಯನ್ನು ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿ ಆದೇಶಿಸಿರುವ ಹಿನ್ನೆಲೆಯಲ್ಲಿ ದಿನಾಂಕ 28.12.2022 ರ ಸರ್ಕಾರದ ಆದೇಶದ ಅನುಬಂಧದಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಮಾತ್ರ ಈ ಆದೇಶದ ಅನುಬಂಧದಲ್ಲಿರುವಂತೆ ಪುನರ್ ವರ್ಗೀಕರಿಸಿ ಆದೇಶಿಸಲಾಗಿದೆ. ಉಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ.

ಯಾವುದೇ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಯ ಪ್ರಕ್ರಿಯೆಯನ್ನು ದಿನಾಂಕ 28.12.2022 ರ ಸದರಿ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರನ್ನು ಅನುಸರಿಸಿ, ರಿಕ್ತ ಸ್ಥಾನಗಳನ್ನು ವರ್ಗೀಕರಣ ಮಾಡಿ ಈಗಾಗಲೇ ಪ್ರಾರಂಭಿಸಿದ್ದಲ್ಲಿ ರೋಸ್ಟರಿನ ಯಾವ ಬಿಂದುವಿನವರೆಗೆ ಜಾರಿಗೊಳಿಸಲಾಗಿದೆಯೋ, ಆ ನಂತರದ ರೋಸ್ಟರ್ ಬಿಂದುವಿನಿಂದ ಪ್ರಾರಂಭಿಸಿ, ಈ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ ರೋಸ್ಟರ್ ಬಿಂದುಗಳನ್ನು ಅನುಸರಿಸಿ ಮುಂದಿನ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

ಮೀಸಲಾತಿ ಹಂಚಿಕೆಯ ಸ್ಪಷ್ಟಿಕರಣ

ಪ್ರವರ್ಗಗಳುಶೇಕಡವಾರು ಮೀಸಲಾತಿ (%)
ಪ್ರವರ್ಗ-104
ಪ್ರವರ್ಗ-II(ಎ)15
ಪ್ರವರ್ಗ-II(ಬಿ)04
ಪ್ರವರ್ಗ-III(ಎ)04
ಪ್ರವರ್ಗ-III(ಬಿ)05
ಪರಿಶಿಷ್ಟ ಜಾತಿ ಪ್ರವರ್ಗ-ಎ (ಪ.ಜಾ. ಪ್ರ-ಎ)
ಎಡಗೈ ಸಮುದಾಯಗಳು
06
ಪರಿಶಿಷ್ಟ ಜಾತಿ ಪ್ರವರ್ಗ-ಬಿ (ಪ.ಜಾ. ಪ್ರ-ಬಿ
ಬಲಗೈ ಸಮುದಾಯ
06
ಪರಿಶಿಷ್ಟ ಜಾತಿ ಪ್ರವರ್ಗ-ಸಿ (ಪ.ಜಾ. ಪು-ಸಿ)05
ಪರಿಶಿಷ್ಟ ಪಂಗಡ (ಪ.ಪಂ)07
ಸಾಮಾನ್ಯ ಅರ್ಹತೆ (ಸಾ.ಅ)44
ಒಟ್ಟು100

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ
ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!