1000 ಇಂಗ್ಲಿಷ್‌ ಶಾಲೆ ನಿರ್ಧಾರ ಕೈಬಿಡಿ: ಸರ್ಕಾರಕ್ಕೆ ಕಸಾಪ ಪತ್ರ

Kannadaprabha News   | Asianet News
Published : Apr 21, 2020, 10:39 AM IST
1000 ಇಂಗ್ಲಿಷ್‌ ಶಾಲೆ ನಿರ್ಧಾರ  ಕೈಬಿಡಿ: ಸರ್ಕಾರಕ್ಕೆ ಕಸಾಪ ಪತ್ರ

ಸಾರಾಂಶ

ಹಿಂದಿನ ಸರ್ಕಾರ ಪ್ರಾರಂಭಿಸಿದ್ದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆದೇಶವನ್ನು ಕೈಬಿಡಬೇಕು ಹಾಗೂ ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಎಲ್ಲ ಪ್ರಸ್ತಾವನೆಗಳನ್ನು ಪುನರ್‌ ಪರಿಶೀಲಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸರ್ಕಾರವನ್ನು ಒತ್ತಾಯಿಸಿದೆ.

ಬೆಂಗಳೂರು (ಏ. 21): ಹಿಂದಿನ ಸರ್ಕಾರ ಪ್ರಾರಂಭಿಸಿದ್ದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆದೇಶವನ್ನು ಕೈಬಿಡಬೇಕು ಹಾಗೂ ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಎಲ್ಲ ಪ್ರಸ್ತಾವನೆಗಳನ್ನು ಪುನರ್‌ ಪರಿಶೀಲಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸರ್ಕಾರವನ್ನು ಒತ್ತಾಯಿಸಿದೆ.

ಸೋಮವಾರ ಈ ಕುರಿತು ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಮಾತೃಭಾಷೆ ಬೋಧನೆ ಕುರಿತು ಆಂಧ್ರಪ್ರದೇಶ ಹೈಕೋರ್ಟ್‌ ನೀಡಿರುವ ತೀರ್ಪಿನ ಕುರಿತು ಉಲ್ಲೇಖಿಸಿ ರಾಜ್ಯದಲ್ಲಿಯೂ ಕನ್ನಡ ಭಾಷೆ ಶಾಲೆಗಳ ಬಲವರ್ಧನೆಗೆ ಸರ್ಕಾರ ಕ್ರಮ ವಹಿಸಬೇಕು. ಹೆಚ್ಚುತ್ತಿರುವ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡುವ ಬಗ್ಗೆಯೂ ಸರ್ಕಾರ ಪುನರ್‌ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ಸಡಿಲ ಇಲ್ಲ: ರಾಜ್ಯ ಸರ್ಕಾರದಿಂದ ಕಠಿಣ ತೀರ್ಮಾನ!

2019ರಲ್ಲಿ ಆಂಧ್ರ ಸರ್ಕಾರ ರಾಜ್ಯದ ಎಲ್ಲ ತೆಲುಗು ಮಾಧ್ಯಮ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳಾಗಿ ಪರಿವರ್ತಿಸುವ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ ಅಲ್ಲಿನ ಹೈಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಕೋರ್ಟ್‌ ನೀಡಿರುವ ತೀರ್ಪಿನಲ್ಲಿ 1ರಿಂದ 8ನೇ ತರಗತಿವರೆಗಿನ ಶಾಲೆಗಳಲ್ಲಿ ಬೋಧನಾ ಮಾಧ್ಯಮ ಮಾತೃಭಾಷೆಯಲ್ಲಿರಬೇಕು ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ತೀರ್ಮಾನವನ್ನು ಅಸಿಂಧುಗೊಳಿಸಿ ಹಿಂದಿನ ಆದೇಶವನ್ನು ರದ್ದುಗೊಳಿಸಬೇಕು. ಹಾಗೆಯೇ ಕನ್ನಡ ಮಾಧ್ಯಮದ ಶಾಲೆಗಳನ್ನು ಬಲವರ್ಧನೆಗೊಳಿಸುವ ಜತೆಗೆ ಆಂಗ್ಲ ಭಾಷೆಯನ್ನು ಒಂದು ಭಾಷೆಯನ್ನಾಗಿ ಪ್ರಭುತ್ವದ ಮಟ್ಟಕ್ಕೆ ಕಲಿಸುವ ಬಗ್ಗೆ ಗಂಭೀರವಾಗಿ ಸರ್ಕಾರ ಚಿಂತನೆ ನಡೆಸಬೇಕು ಎಂದು ಮನು ಬಳಿಗಾರ್‌ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ 9.67 ಲಕ್ಷ ಟನ್‌ ತೊಗರಿ ಖರೀದಿಗೆ ಕೇಂದ್ರ ಅಸ್ತು
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌