ಶಕ್ತಿಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ : ಕಂಡಕ್ಟರ್ ಆಗಲಿದ್ದಾರೆ ಸಿಎಂ

Kannadaprabha News   | Kannada Prabha
Published : Jul 14, 2025, 05:51 AM IST
karnataka shakti yojane

ಸಾರಾಂಶ

‘ಶಕ್ತಿ’ ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಸೋಮವಾರ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ.

 ಬೆಂಗಳೂರು :  ‘ಶಕ್ತಿ’ ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಸೋಮವಾರ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ.

ಬೆಂಗಳೂರಿನ ಕುಮಾರಪಾರ್ಕ್‌ ಈಸ್ಟ್‌ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು 500ನೇ ಕೋಟಿ ಟಿಕೆಟ್‌ ಅನ್ನು ಸಾಂಕೇತಿಕವಾಗಿ ವಿತರಣೆ ಮಾಡುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭಾಗಿಯಾಗಲಿದ್ದಾರೆ.

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ 2023ರ ಜೂನ್‌ 11ರಂದು ಆರಂಭವಾಗಿದ್ದು, ಮಹಿಳೆಯರು ಪ್ರಯಾಣಿಸಿರುವ ಟಿಕೆಟ್‌ ಮೊತ್ತ 12,500 ಕೋಟಿ ರು.ಗಿಂತ ಹೆಚ್ಚಾಗಿದೆ. ಮಹಿಳೆಯರ ಮನ ಗೆದ್ದಿರುವ ಈ ಯೋಜನೆಯಡಿ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟುತ್ತಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್‌.ಎಂ. ರೇವಣ್ಣ ಅವರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮಿತಿಗಳ ಪದಾಧಿಕಾರಿಗಳು ಸೋಮವಾರದಂದು ಪ್ರತಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಬೇಕೆಂದು ಸೂಚನೆ ನೀಡಿದ್ದಾರೆ.

ರಾಜ್ಯದ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರತಿನಿತ್ಯ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷದವರೆಗೆ ತಲುಪಿದ್ದು, ‘ಶಕ್ತಿ ಯೋಜನೆಯಡಿ ಪ್ರತಿನಿತ್ಯ ₹20 ಕೋಟಿಗಳಷ್ಟು ಉಚಿತ ಟಿಕೆಟ್‌ ಅನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ.

ಕಾಂಗ್ರೆಸ್‌ನ ಚುನಾವಣಾ ಭರವಸೆಗಳ ಪೈಕಿ ಒಂದಾದ ಶಕ್ತಿ ಉಚಿತ ಪ್ರಯಾಣ ಸ್ಕೀಮ್‌ಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು

ಸರ್ಕಾರಿ ಬಸ್‌ಗಳಲ್ಲಿ ನಿತ್ಯ ಪ್ರಯಾಣಿಸುವ 1 ಕೋಟಿಗೂ ಹೆಚ್ಚಿನ ಪ್ರಯಾಣಿಕರ ಪೈಕಿ 80 ಲಕ್ಷ ಮಹಿಳೆಯರು. ಇವರಿಗೆ 20 ಲಕ್ಷ ಟಿಕೆಟ್‌ ವಿತರಣೆ

ಯೋಜನೆ ಆರಂಭವಾದ 2 ವರ್ಷದಲ್ಲೇ 500 ಕೋಟಿ ಟಿಕೆಟ್‌ ವಿತರಣೆ ದಾಖಲೆ ನಿರ್ಮಾಣ. ಇದಕ್ಕಾಗಿ ಸರ್ಕಾರದಿಂದ 12500 ಕೋಟಿ ರು.ವೆಚ್ಚ

ಹೊಸ ಮೈಲುಗಲ್ಲು ಸ್ಥಾಪನೆ ಹಿನ್ನೆಲೆ ಮಂಗಳವಾರ ರಾಜ್ಯದ ಜಿಲ್ಲಾ ಮತ್ತು ಎಲ್ಲಾ ತಾಲೂಕುಗಳಲ್ಲೂ ಸಿಂಹಿ ಹಂಚಿ ಸಂಭ್ರಮಾಚರಣೆಗೆ ನಿರ್ಧಾರ

ಬೆಂಗಳೂರಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 500 ಕೋಟಿಯ ಟಿಕೆಟ್‌ ಅನ್ನು ಸಾಂಕೇತಿಕವಾಗಿ ವಿತರಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!