'ನೆರೆ ಹಾನಿಗೆ ತಕ್ಷಣ ವಿಶೇಷ ಅನುದಾನ'

By Kannadaprabha News  |  First Published Oct 16, 2020, 7:05 AM IST

ಈ ಬಾರಿ ಸುರಿದ ಮಳೆಯಿಂದ ಕಂಗಾಲಾಗಿರುವ ಎಲ್ಲಾ ಪ್ರದೇಶಗಳಿಗೆ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


ಬೆಂಗಳೂರು (ಅ.16):  ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಟ್ವೀಟರ್‌ನಲ್ಲಿ ಆಗ್ರಹಿಸಿದ್ದಾರೆ.

Tap to resize

Latest Videos

ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ! .

ಕೊರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರಹಾವಳಿಯಿಂದ ರೈತರು ದಿಕ್ಕೆಟ್ಟು ಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯ ಇದೆ ಎಂದು ಹೇಳಿದ್ದಾರೆ.

click me!