ಕೇರಳ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಕೊಡುಗೆ ನೀಡುತ್ತಿರುವ ಅಭಿವೃದ್ಧಿಶೀಲ ಅಥವಾ ಪ್ರಗತಿಪರ ರಾಜ್ಯಗಳನ್ನು ಒಟ್ಟುಗೂಡಿಸಿ ಆ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲು ವೇದಿಕೆ ಸೃಷ್ಟಿಸಿದ್ದಾರೆ.
ಬೆಂಗಳೂರು(ಸೆ.12): ಕೇಂದ್ರದ 16ನೇ ಹಣಕಾಸು ಆಯೋಗದ ವರದಿಯಲ್ಲಿ ಅಭಿವೃದ್ಧಿಶೀಲ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗದಂತೆ ಒಟ್ಟಾಗಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಕೇಂದ್ರದ ತೆರಿಗೆ ಪಾಲು ಹಾಗೂ ಅನುದಾನ ಹಂಚಿಕೆಯಲ್ಲಿ ಹೆಚ್ಚು ತೆರಿಗೆ ಸಂಗ್ರಹ ಮಾಡುತ್ತಿರುವ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸದ್ಯದಲ್ಲೇ ಅಭಿವೃದ್ಧಿಶೀಲ ರಾಜ್ಯಗಳ ಮುಖ್ಯ ಮಂತ್ರಿಗಳ ಸಮ್ಮೇಳನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೇರಳ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಕೊಡುಗೆ ನೀಡುತ್ತಿರುವ ಅಭಿವೃದ್ಧಿಶೀಲ ಅಥವಾ ಪ್ರಗತಿಪರ ರಾಜ್ಯಗಳನ್ನು ಒಟ್ಟುಗೂಡಿಸಿ ಆ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲು ವೇದಿಕೆ ಸೃಷ್ಟಿಸಿದ್ದಾರೆ.
undefined
ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ: ಕಾಂಗ್ರೆಸ್‌ನಿಂದ ರಾಜ್ಯವ್ಯಾಪಿ ಖಾಲಿ ಚೊಂಬು ಚಳವಳಿ
ತಲಾವಾರು ಜಿಎಸ್‌ಡಿಪಿ ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯ ಕ್ಷಮತೆಗಾಗಿಯೇ ಶಿಕ್ಷೆ ಅನುಭವಿಸು ವಂತಾಗಿದೆ. ದೇಶದ ಅಭಿವೃದ್ಧಿ ಹಾಗೂ ನಿರ್ಮಾಣದಲ್ಲಿ ಬಹುಮುಖ್ಯ ಕೊಡುಗೆ ನೀಡುತ್ತಿರುವ ರಾಜ್ಯಗಳು ಅತಿ ಕಡಿಮೆ ತೆರಿಗೆ ಪಾಲು ಪಡೆಯುತ್ತಿವೆ.ಅಭಿವೃದ್ಧಿ ಶೀಲ ರಾಜ್ಯಗಳ ಆರ್ಥಿಕ ಸ್ವಾಯತ್ತೆಗೆ ಧಕ್ಕೆ ಉಂಟು ಮಾಡುತ್ತದೆ ಎಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿ ಗಳಿಗೆ ಬರೆದಿರುವ ಪತ್ರದಲ್ಲಿ ಕಿಡಿ ಕಾರಿ ದ್ದಾರೆ. ಈಗಾಗಲೇ 16ನೇ ಹಣ ಕಾಸು ಆಯೋಗ ತನ್ನ ಚರ್ಚೆ ಆರಂಭಿಸಿದೆ. ಆಗಸ್ 29 ಹಾಗೂ 30ರಂದು ಕರ್ನಾಟಕ ರಾಜ್ಯಕ್ಕೆ ಆಗಮಿಸಿದ್ದ ಹಣಕಾಸು ಆಯೋಗದ ಮುಂದೆ ಅಭಿವೃದ್ಧಿಶೀಲ ರಾಜ್ಯಗಳ ಸಮಸ್ಯೆಗಳು ಹಾಗೂ ಆಗುತ್ತಿರುವ ಅನ್ಯಾಯವನ್ನು ಒತ್ತಿ ಹೇಳುವ ಜತೆಗೆ ಯಾವ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕುಎಂಬುದನ್ನು ವಿವರಿಸಿದ್ದೇವೆ. ದೇಶದ ಜಿಡಿಪಿಗೆ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳು ಹಲವು ರೀತಿಯಲ್ಲಿ ದೇಶವನ್ನು ನಿರ್ಮಾಣ ಮಾಡುತ್ತಿವೆ.ನಾವುದೇಶಕ್ಕೆನೀಡುತ್ತಿರುವ ಕೊಡುಗೆಗೆ ಹೋಲಿಸಿದರೆ ಕೇಂದ್ರದಿಂದ ಬರುತ್ತಿರುವ ಅನುದಾನ ಯಾವುದಕ್ಕೂ ಸಾಲುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿಗೆ ಹೂಡಿಕೆ ಮಾಡಲು ಅವಕಾಶ ಸಿಗುತ್ತಿಲ್ಲ. ಈ ಬಗ್ಗೆ ವಿವರವಾದ ಪ್ರಸ್ತಾವನೆ ಸಲ್ಲಿಸ ಬೇಕಿದೆ ಎಂದು ಮನವಿ ಮಾಡಿದ್ದಾರೆ.