
ಬೆಂಗಳೂರು(ಸೆ.20): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ SSLC ಹಾಗೂ ದ್ವಿತೀಯ PU ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ www.kseab.karnataka.gov.in ನಲ್ಲಿ ವೀಕ್ಷಿಸಬಹುದು.
ಆಕ್ಷೇಪಣೆ ಸಲ್ಲಿಕೆಗೆ ಅವಕಾಶ, ಹೇಗೆ ಸಲ್ಲಿಸುವುದು?
ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ವೇಳಾಪಟ್ಟಿಯ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಇಂದಿನಿಂದ ಅಕ್ಟೋಬರ್ 9, 2025ರ ವರೆಗೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಇ-ಮೇಲ್ ಮೂಲಕ chairpersonkscab@gmail.com ಗೆ ಅಥವಾ ಹಾರ್ಡ್ ಕಾಪಿಯನ್ನು 'ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ' ಗೆ ಕಳುಹಿಸಬಹುದು.
ಇದನ್ನೂ ಓದಿ: ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್‌ಪೋ' ಯಶಸ್ವಿ- 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ
ಗಮನಿಸಿ: ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಹೆಚ್ಚಿನ ಮಾಹಿತಿಗಾಗಿ www.kseab.karnataka.gov.in ಗೆ ಭೇಟಿ ನೀಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ