
ಬೆಂಗಳೂರು(ಜು.03): ಸಾಕಷ್ಟುಆತಂಕ, ಭಯದಿಂದ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದೆ. ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ.
ಈಗಾಗಲೇ ಕನ್ನಡ, ಇಂಗ್ಲಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳು ಮುಕ್ತಾಯವಾಗಿವೆ. ಶುಕ್ರವಾರ ನಡೆಯಲಿರುವ ತೃತೀಯ ಭಾಷೆ ಹಿಂದಿ ಪರೀಕ್ಷೆಗೆ ಅಂದಾಜು ಏಳು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಆಗಸ್ಟ್ ಬಳಿಕ ಶಾಲೆ, ಕಾಲೇಜು ಆರಂಭಕ್ಕೆ ಚಿಂತನೆ
ನಿವಾರ ಅತಿ ಕಡಿಮೆ ಸಂಖ್ಯೆಯಲ್ಲಿರುವ ಜೂನಿಯರ್ ಟೆಕ್ನಿಕಲ್ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ನಡೆಯಲಿದೆ. ಅದಕ್ಕೆ ಕೇವಲ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿರುತ್ತಾರೆ.
ಕೊರೋನಾ ದೃಢ: ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಕರೆದ್ಯೊಯ್ದ ಆರೋಗ್ಯ ಸಿಬ್ಬಂದಿ
ಕೊರೋನಾ ಪಾಸಿಟಿವ್ ದೃಢಪಟ್ಟಹಿನ್ನಲೆ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನು ಅರ್ಧಕ್ಕೆ ಕರೆದುಕೊಂಡು ಹೋಗಿರುವ ಪ್ರಕರಣ ಜಿಲ್ಲೆಯ ಪಾಂಡವಪುರದಲ್ಲಿ ವರದಿಯಾಗಿದೆ.
ಇಲ್ಲಿನ ಖಾಸಗಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ಬಂದಿದೆ. ವಿಷಯ ತಿಳಿದ ಕೊರೋನಾ ವಾರಿಯರ್ಸ್‌ಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕೊಠಡಿಯಿಂದಲೇ ಕರೆದುಕೊಂಡು ಹೋಗಿದ್ದು, ಇದೀಗ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಆತಂಕ ಶುರವಾಗಿದೆ. ಈಗ ವಿದ್ಯಾರ್ಥಿನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆಯಿಂದ ವಿದ್ಯಾರ್ಥಿನಿ ಜೊತೆಗೆ ತಾಯಿ ಹಾಗೂ ಸಹೋದರಿನಿಗೂ ಪಾಸಿಟಿವ್ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ