SSLC ಫೇಲ್‌ ಆಗಿದ್ದಕ್ಕೇ ಮತ್ತಿಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನ!

By Ravi Janekal  |  First Published May 9, 2024, 6:18 PM IST

2023-24ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಅನುತೀರ್ಣರಾಗಿದ್ದಕ್ಕೇ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಹೆರಜೇನಹಳ್ಳಿಯಲ್ಲಿ ನಡೆದಿದೆ.


ತುಮಕೂರು (ಮೇ.9): 2023-24ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಅನುತೀರ್ಣರಾಗಿದ್ದಕ್ಕೇ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಹೆರಜೇನಹಳ್ಳಿಯಲ್ಲಿ ನಡೆದಿದೆ.

ರಂಜಿತಾ, ಪ್ರಿಯದರ್ಶಿನಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯರು. ವಿದ್ಯಾರ್ಥಿನಿ ರಂಜಿತಾ ಲಕ್ಷ್ಮಣರೇಖೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇತ್ತ ಬುಕ್ಕಾಪಟ್ಟಣ ಪ್ರೌಢಶಾಲೆಯ ಮತ್ತೋರ್ವ ವಿದ್ಯಾರ್ಥಿನಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ದುರಂತ ಘಟನೆ ನಡೆದಿದೆ. ಸದ್ಯ ಇಬ್ಬರು ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Tap to resize

Latest Videos

undefined

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಾಸಾಗಿದ್ದರೂ, ಫೇಲ್ ಆಗಿದ್ದೇನೆಂದು ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಇಂದಿನ SSLC ಫಲಿತಾಂಶ ನೋಡಿ ಧೃತಿಗೆಟ್ಟ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಯತ್ನದಿಂದ ಪೋಷಕರು ಕಂಗಾಲಾಗಿದ್ದಾರೆ. ಈಗಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರು ಬಾಲಕಿಯರು, ಮುಂದಿನ ಭವಿಷ್ಯ, ಜೀವನ, ಪೋಷಕರ ಒತ್ತಡವೂ ಮಕ್ಕಳು ಆತ್ಮಹತ್ಯೆಗೆ ಯತ್ನಿಸಲು ಕಾರಣವಾಗುತ್ತಿವೆ. ಮಕ್ಕಳು ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರೆ ಪೋಷಕರಾದವರು ಮಕ್ಕಳಿಗೆ ಧೈರ್ಯ ತುಂಬಿ. ಈ ಬಾರಿ ಫೇಲ್‌ ಆದರೆ ಮುಂದಿನ ಬಾರಿಯೂ ಪ್ರಯತ್ನಿಸೋಣ ಡೋಂಟ್‌ವರಿ ಎನ್ನಿ. ಇಂತಹ ಸಂದರ್ಭದಲ್ಲಿ ಮುಗ್ಧ ಮಕ್ಕಳ ಮೇಲೆ ಪೋಷಕರು ಒತ್ತಡ ಹಾಕುವುದರಿಂದ ಆತ್ಮಹತ್ಯೆ ಯತ್ನಿಸುವ ಸಾಧ್ಯತೆಯಿದೆ. ಇಂದು ರಾಜ್ಯಾದ್ಯಂತ ಹಲವೆಡೆ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆಗಳು ನಡೆಯುತ್ತಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.

ಮುಂದಿನ ವರ್ಷದಿಂದ ಇಲ್ಲಿ 10ನೇ ಕ್ಲಾಸ್‌ ಪಾಸಾಗೋಕೆ ಕನಿಷ್ಠ ಶೇ. 40 ಮಾರ್ಕ್ಸ್‌ ಗಳಿಸೋದು ಕಂಪಲ್ಸರಿ

ಇಂದಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ದೊರೆತಿದ್ದರೆ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಶೇ 94ರ ಫಲಿತಾಂಶ ದಾಖಲಾಗಿದೆ.

click me!