ಕರಾಮುವಿಯಲ್ಲಿ 2024-25ರ ಶೈಕ್ಷಣಿಕ ಪ್ರವೇಶಾತಿ ಆರಂಭ; ಆನ್‌ಲೈನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ

Published : Feb 10, 2025, 05:45 PM IST
ಕರಾಮುವಿಯಲ್ಲಿ 2024-25ರ ಶೈಕ್ಷಣಿಕ ಪ್ರವೇಶಾತಿ ಆರಂಭ; ಆನ್‌ಲೈನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ

ಸಾರಾಂಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಬೆಂಗಳೂರು (ಫೆ.10): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಸಾಲಿನ  ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೋಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್  ಶಿಕ್ಷಣ ಕ್ರಮಗಳಿಗೆ  ಫೆಬ್ರವರಿ 10 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01 ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರಾವೇಶಾತಿಯನ್ನು  ಪ್ರಾರಂಭಿಸಲಾಗಿರುತ್ತದೆ.  ಆಸಕ್ತ ವಿದ್ಯಾರ್ಥಿಗಳು www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ  ಭೇಟಿ ನೀಡಿ, ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳ್ಳಿಸಿಕೊಳ್ಳಬಹುದು.

 ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್  www.ksoumysuru.ac.in  ಅಥವಾ ಪ್ರಾದೇಶಿಕ ನಿರ್ದೇಶಕರು,  ಬೆಂಗಳೂರು ಪ್ರಾದೇಶಿಕ ಕೇಂದ್ರ-1, ಮೊದಲನೇ ಮಹಡಿ, ಸ್ಯಾಟಲೈಟ್  ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಅಥವಾ ದೂರವಾಣಿ: ಸಂಖ್ಯೆ: 080-2600 3664 ಹಾಗೂ 9844965515  ಮೂಲಕ ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ  ಕೇಂದ್ರ-01, ಬಾಪೂಜಿನಗರ, ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ