ಕೊಪ್ಪ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಗಳ ಮೇಲೆ ಲೈಂಗಿಕ ಕಿರುಕುಳ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪಿಎಸ್ಐ ಬಸವರಾಜು ವಿರುದ್ಧ ತನಿಖೆ ನಡೆಯುತ್ತಿದೆ. ಮಹಿಳಾ ಪೇದೆಗಳು ತನಿಖಾಧಿಕಾರಿಗಳ ಮುಂದೆ ಕಣ್ಣೀರಿಟ್ಟು ಅಳಲು ತೋಡಿಕೊಂಡಿದ್ದಾರೆ.
ಚಿಕ್ಕಮಗಳೂರು (ಸೆ.09): ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ನಟಿಯರು ಹಾಗೂ ಸಹ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಆರೋಪದ ಬೆನ್ನಲ್ಲಿಯೇ ಇದೀಗ ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ರಾಜ್ಯದ ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಲಾಗುತ್ತಿದ್ದು, ಕೇರಳದ ಹೇಮಾ ಸಮಿತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ 153ಕ್ಕೂ ಹೆಚ್ಚು ನಟ, ನಟಿಯರು ಮನವಿ ಮಾಡಿಕೊಂಡಿದ್ದಾರೆ. ಇದೀಗ, ಮಹಿಳೆಯನ್ನು ರಕ್ಷಣೆ ಮಾಡಬೇಕಾದ ಜವಾಬ್ದಾರಿ ಹೊಂದಿರುವ ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಮಹಿಳೆಯರಿಗೆ ರಕ್ಷಣೆ ಇಲ್ಲವೆಂದರೆ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ನಡೆದ ಲೈಂಗಿಕ ಕಿರುಕುಳದ ಇಂಚಿಂಚು ಮಾಹಿತಿ ಬಿಚ್ಚಿಟ್ಟಿರುವ ಮಹಿಳಾ ಪೇದೆಗಳು ತಮಗೆ ರಕ್ಷಣೆ ನೀಡುವಂತೆ ತನಿಖಾಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
undefined
ಆಕಾಶದಿಂದ ಬರಲಿದೆ ಭಾರೀ ಆಪತ್ತು: ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ
ಕೊಪ್ಪ ಮಹಿಳಾ ಪೇದೆಗಳ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಿಖಾಧಿಕಾರಿಗಳ ಬಳಿ ಮಹಿಳಾ ಪೇದೆಗಳು ಕಣ್ಣೀರಿಟ್ಟಿದ್ದಾರೆ. ಪಿಎಸ್ಐ ಬಸವರಾಜು ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಕುರಿತು ತಮಗೆ ಆಗುತ್ತಿರುವ ದೌರ್ಜನ್ಯ ಕುರಿತು ತನಿಖಾಧಿಕಾರಿಗಳಿಗೆ ಮಹಿಳಾ ಪೇದೆಗಳು ಇಂಚಿಂಚು ಮಾಹಿತಿ ಬಿಚ್ಚಿಟ್ಟಿದ್ದಾರೆ. ತನಿಖಾಧಿಕಾರಿಗಳಿಂದ ಚಿಕ್ಕಮಗಳೂರು ಎಸ್ ಪಿ ಬಸವರಾಜುಗೆ ಪ್ರಕರಣದ ಮಾಹಿತಿ ರವಾನೆ ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ.
ಹೆಣ್ಣಿನ ಗೌರವವನ್ನು ರಕ್ಷಿಸುವ ಜವಾಬ್ದಾರಿ ಪೊಲೀಸ್ ಇಲಾಖೆಗೆ ಇದೆ. ಆದ್ದರಿಂದ ಪೊಲೀಸ್ ಇಲಾಖೆಯಲ್ಲಿಯೇ ಇರುವ ಹೆಣ್ಣಿನ ಗೌರವ ಕಾಪಾಡಿ ಎಂದು ಮಹಿಳಾ ಪೇದೆಗಳು ತನಿಖಾಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇನ್ನು ಹಲವು ಪ್ರಭಾವಿಗಳ ಜೊತೆಗೆ ಸೇರಿಕೊಂಡು ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೆ, ಕೆಳ ಹಂತದಲ್ಲಿ ಕೆಲಸ ಮಾಡುವ ನಮಗಾಗಿರುವ ಅನ್ಯಾಯ ಸರಿಪಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಮತ್ತೊಂದು ದೂರು
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮಹಿಳಾ ಪೇದೆಗಳಿಂದ ಚಿಕ್ಕಮಗಳೂರು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಇನ್ನು ನಮಗೆ ಜಿಲ್ಲೆಯ ಹಂತದಲ್ಲಿ ನ್ಯಾಯ ಸಿಗದಿದ್ದರೆ ಮಹಿಳಾ ಆಯೋಗದ ಬಳಿ ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿಯಿದೆ. ಆದರೆ, ಈ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿ ಹಾಕಲು ಪಿಎಸ್ಐ ಬಸವರಾಜು ತೀವ್ರ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪಗಳೂ ಕೂಡ ಕೇಳಿಬರುತ್ತಿವೆ.