
ಬೆಂಗಳೂರು (ಜೂ.28) ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಘೋಷಿಸಿದ ಮಹತ್ವದ ಆದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ್ ಬಸ್ ಪಾಸ್ ಕೂಡ ಒಂದು. ಗಂಡು ಮಕ್ಕಳಿಗೂ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಅರ್ಜಿ ಸಲ್ಲಿಕೆ ವೇಳೆ ಹಣ ಪಾವತಿ ಮಾಡಿದ ವಿದ್ಯಾರ್ಥಿಗಳಿಗೆ ಇದೀಗ ಮರುಪಾವತಿ ಮಾಡಲಾಗುತ್ತಿದೆ. ಈ ಪ್ರಕಿಯೆ ನಾಳೆಯಿಂದ (ಜೂ.29) ಆರಂಭಗೊಳ್ಳುತ್ತಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದರೆ 7 ದಿನಗಳಲ್ಲಿ ಹಣ ವಿದ್ಯಾರ್ಥಿಗಳ ಖಾತೆಗೆ ಜಮೆ ಆಗಲಿದೆ.
ಉಚಿತ ಪಾಸ್ ಕಾರಣದಿಂದ ಹಣ ಪಾವತಿ ಮಾಡಿದ ವಿದ್ಯಾರ್ಥಿಗಳಿಗೆ ನಾಳೆಯಿಂದ KSRTC,BMTC, NWKRTC, KKRTC ನಿಗಮದಿಂದ ಹಣ ವಾಪಸ್‌ಗೆ ಆದೇಶ ನೀಡಲಾಗಿದೆ. ಇದಕ್ಕಾಗಿ 2026-27ರ ವಿದ್ಯಾರ್ಥಿ ಬಸ್ ಪಾಸ್ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ನಿಗಮಗಳು ಶುಲ್ಕ ಪಾವತಿಸಿಕೊಂಡಿತ್ತು. ಈ ಶುಲ್ಕವನ್ನು ವಿದ್ಯಾರ್ಥಿಗಳಿಗೆ ವಾಪಸ್ ಮಾಡಲಾಗುತ್ತಿದೆ.
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸಿದ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಒಟಿಪಿ ಮೂಲಕ ನೋಂದಣಿ ಮಾಡಿ ಅರ್ಜಿ ಸಲ್ಲಿಕೆ ಮಾಡಲು ಕೋರಲಾಗಿದೆ. ಅರ್ಜಿ ಸಲ್ಲಿಕೆ ವೇಳೆ ಶುಲ್ಕದ ರಸೀದಿ ವಿವರ, ಬ್ಯಾಂಕ್ ಖಾತೆ ಸೇರಿದಂತೆ ಕೆಲ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗತ್ತದೆ. ಅರ್ಜಿ ಪರಿಶೀಲನೆ ಬಳಿಕ ಅರ್ಹ ವಿದ್ಯಾರ್ಥಿಗಳಿಗೆ NEFT/RTGS ಮೂಲಕ ಹಣ ಜಮೆ ಮಾಡಲಾಗುತ್ತದೆ. 7 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹಣ ಮರುಪಾವತಿ ಮಾಡಲಾಗುತ್ತದೆ. ಬ್ಯಾಂಕ್ ವಿವರ ತಪ್ಪಾಗಿ ನೀಡಿದರೆ ಹಣ ಪಾವತಿಯಲ್ಲಿ ಸಮಸ್ಯೆಗಳಾಗುತ್ತದೆ. ಹೀಗಾಗಿ ಎಚ್ಚರಿಕೆವಹಿಸುವಂತೆ ಸೂಚಿಸಲಾಗಿದೆ.
2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲರನ್ನೂ ಸೇರಿಸಿ 10 ಲಕ್ಷ ಉಚಿತ ಬಸ್ ಪಾಸ್ ಅಂದಾಜು ಮಾಡಲಾಗಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಿಸಲಾಗುತ್ತಿದೆ. ಉಚಿತ ಪಾಸ್ ಪಡೆಯಲೂ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ