
ಬೆಂಗಳೂರು (ನ.9): ಕಬ್ಬು ಬೆಳೆಗೆ ಹೆಚ್ಚುವರಿಯಾಗಿ ಒಟ್ಟಾರೆ 100 ರು. ನಿಗದಿ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ದರ ಹೆಚ್ಚಳ ಬಗ್ಗೆ ಇದ್ದ ಎಲ್ಲ ಗೊಂದಲಗಳಿಗೂ ತೆರೆ ಎಳೆದಿದೆ.
ಶುಕ್ರವಾರ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತ್ಯೇಕವಾಗಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಮತ್ತು ಕಬ್ಬು ಬೆಳೆಗಾರರ ಜತೆಗಿನ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಸರ್ಕಾರದಿಂದ 50 ರು. ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರಿಂದ 50 ರು. ಹೆಚ್ಚುವರಿ ಹಣ ಪಾವತಿಗೆ ನಿರ್ಧರಿಸಲಾಗಿತ್ತು. ನಿರ್ಧಾರದ ಬೆನ್ನಲ್ಲೇ ಶನಿವಾರ ಪ್ರತಿ ಟನ್‌ಗೆ ಹೆಚ್ಚುವರಿ 100 ರು. ಪಾವತಿಗೆ ಆದೇಶಿಸಲಾಗಿದೆ.
ಎಲ್ಲ ಬಗೆಯ ಕಬ್ಬಿಗೆ ಪ್ರತಿ ಟನ್‌ಗೆ ಸಕ್ಕರೆ ಕಾರ್ಖಾನೆಗಳಿಂದ ಹೆಚ್ಚುವರಿ 50 ರು. ಪಾವತಿಸುವಂತೆ ಸರ್ಕಾರ ಮಾಡಿರುವ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ದಕ್ಷಿಣ ಭಾರತ ಷುಗರ್ ಮಿಲ್ಸ್ ಅಸೋಸಿಯೇಷನ್ ತಿಳಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅಸೋಸಿಯೇಷನ್, ಸರ್ಕಾರದ ಭರವಸೆಯಂತೆ ಬೆಳಗಾವಿ ಭಾಗದ ಕಬ್ಬು ಬೆಳೆಗಾರರು ಪೂರೈಸಿರುವ ಕಬ್ಬಿಗೆ ಪ್ರತಿ ಕ್ವಿಂಟಾಲ್‌ಗೆ ಕಾರ್ಖಾನೆಗಳ ಹೆಚ್ಚುವರಿ ದರ ಸೇರಿಸಿ 3,200 ರು. ಪಾವತಿಸಲು ಸಿದ್ಧವಿದ್ದೇವೆ. ಹಾಗೆಯೇ, ಶೇ. 11.25ರ ಸಕ್ಕರೆ ಇಳುವರಿ ಹೊಂದಿರುವ ಕಬ್ಬಿನ ಪ್ರತಿ ಟನ್‌ಗೂ 3,200 ರು. ಪಾವತಿಸುತ್ತೇವೆ. ಅದನ್ನು ಹೊರತುಪಡಿಸಿ ಶೇ. 9.5 ಅಥವಾ ಅದಕ್ಕಿಂತ ಕಡಿಮೆ ಇಳುವರಿಯ ಹಾಗೂ ಶೇ.10.25ರ ರಿಕವರಿ ದರಕ್ಕೆ ಎಲ್ಲ ಜಿಲ್ಲೆಗಳಿಗೂ ಹೆಚ್ಚುವರಿ ದರ ಪಾವತಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
SISM K opposes government order
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ