ಡ್ರಗ್ಸ್: ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಪಂಜಾಬ್ ಮೀರಿಸಲಿದೆ ಕರ್ನಾಟಕ, ಪ್ರಹ್ಲಾದ ಜೋಶಿ

By Kannadaprabha News  |  First Published May 26, 2024, 12:44 PM IST

ಡ್ರಗ್ಸ್ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ತೀರಾ ಬೇಜವಾಬ್ದಾರಿ ತೋರುತ್ತಿದೆ. ಹೀಗಾಗಿ ಇಲ್ಲಿ ಡ್ರಗ್ ಮಾಫಿಯಾ ತಲೆ ಎತ್ತುತ್ತಿದೆ. ಡ್ರಗ್ಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ, ಕಠಿಣ ಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಬರುವ ದಿನಗಳಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಬಹುದು. ಆದರಿಂದ ಎಚ್ಚರವಹಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 


ಹುಬ್ಬಳ್ಳಿ(ಮೇ.26): ರಾಜ್ಯದಲ್ಲಿ ಡ್ರಗ್ಸ್, ಗಾಂಜಾ ನಿಯಂತ್ರಣಕ್ಕೆ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಭಾಗದಲ್ಲಿ ಹೆಚ್ಚು ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಿರುವುದೇ ಇದಕ್ಕೆ ನಿದರ್ಶನ ಎಂದು ಹೇಳಿದರು.

Latest Videos

undefined

ಲೋಕಸಭೆಯಲ್ಲಿ ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ನಾಯಕರೇ ಸೋಲಿಸುತ್ತಾರೆ: ಪ್ರಲ್ಹಾದ್‌ ಜೋಶಿ

ಡ್ರಗ್ಸ್ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ತೀರಾ ಬೇಜವಾಬ್ದಾರಿ ತೋರುತ್ತಿದೆ. ಹೀಗಾಗಿ ಇಲ್ಲಿ ಡ್ರಗ್ ಮಾಫಿಯಾ ತಲೆ ಎತ್ತುತ್ತಿದೆ. ಡ್ರಗ್ಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ, ಕಠಿಣ ಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಬರುವ ದಿನಗಳಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಬಹುದು. ಆದರಿಂದ ಎಚ್ಚರವಹಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

click me!