ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಕನ್ನಡಿಗ ವಿರೋಧಿ ಸರ್ಕಾರವೆಂದ ಸಿಎಂ ಸಿದ್ದರಾಮಯ್ಯ

Published : Jan 09, 2024, 07:13 PM ISTUpdated : Jan 23, 2024, 11:59 AM IST
ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಕನ್ನಡಿಗ ವಿರೋಧಿ ಸರ್ಕಾರವೆಂದ ಸಿಎಂ ಸಿದ್ದರಾಮಯ್ಯ

ಸಾರಾಂಶ

ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಜ.09): ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.

ರಾಜ್ಯಪಾಲ ಥಾವರ್‌ ಚಂದ್ ಗೆಹಲೋತ್‌ಗೆ ಕೊರೊನಾ ಪಾಸಿಟಿವ್!

ನವ ಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ. 

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕಕ್ಕೆ ಶಾಕ್‌ ! ರಾಜ್ಯ ಕಳುಹಿಸಿದ್ದ ಟ್ಯಾಬ್ಲೋಗೆ ಇನ್ನೂ ಸಿಕ್ಕಲ್ಲ ಅನುಮತಿ !

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ.

ಕಳೆದ 14 ವರ್ಷದಿಂದ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನವಾಗುತ್ತಿದೆ. ನಾಲ್ಕು ಮಾದರಿಯ ಸ್ತಬ್ಧಚಿತ್ರಗಳನ್ನು ರಾಜ್ಯ ಸರ್ಕಾರ ಕಳುಹಿಸಿತ್ತು. ಬ್ರಾಂಡ್ ಬೆಂಗಳೂರು (Brand bengaluru), ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar), ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 (Bengaluru Airport Terminal 2), ಅಣ್ಣಮ್ಮ ದೇವಸ್ಥಾನದ (Annamma Temple) ಮಾದರಿಗಳನ್ನು ಕಳುಹಿಸಲಾಗಿತ್ತು. ರಾಜ್ಯದ ಸ್ತಬ್ಧ ಚಿತ್ರಕ್ಕೆ ಈ ಬಾರಿ ಅನುಮತಿ ನಿರಾಕರಣೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ