Karnataka temperature: ಮಳೆಯಿಂದಾಗಿ ತಾಪಮಾನ 3-5°C ಇಳಿಕೆ! ರಾಜ್ಯದ ಬಹುತೇಕ ಕಡೆ ಈಗ 40 ಡಿಗ್ರಿಗಿಂತ ಕಮ್ಮಿ!

Kannadaprabha News   | Kannada Prabha
Published : May 09, 2026, 08:02 AM IST
Karnataka temperature drops below 40 degrees in most places rav

ಸಾರಾಂಶ

ಉತ್ತರ ಒಳನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ತಾಪಮಾನದಲ್ಲಿ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಕಲಬುರಗಿಯಂತಹ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿದಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಇದು ನಿರಾಳತೆ ತಂದಿದೆ.

ಬೆಂಗಳೂರು (ಮೇ.9): ಉತ್ತರ ಒಳನಾಡು, ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಿರುವುದರಿಂದ ಶುಕ್ರವಾರದಂದು ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನದಲ್ಲಿ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಭಾರೀ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ಸ್ವಲ್ಪ ನಿರಾಳರಾಗಿದ್ದಾರೆ.

ಕರಾವಳಿಯ ಮಂಗಳೂರು ವಿಮಾನ ನಿಲ್ದಾಣ ಮತ್ತು ಶಕ್ತಿನಗರದಲ್ಲಿ ತಾಪಮಾನವು ಗರಿಷ್ಠ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗಿದೆ. ಹೊನ್ನಾವರ, ವಿಜಯಪುರ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಉಷ್ಣಾಂಶ ಇಳಿಕೆಯಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ಬೀದರ್ ಮತ್ತಿತರ ಜಿಲ್ಲೆಗಳಲ್ಲಿ 43 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತಿದ್ದ ಗರಿಷ್ಠ ತಾಪಮಾನ, ಶುಕ್ರವಾರದಂದು ಕಲಬುರಗಿಯಲ್ಲಿ ಗರಿಷ್ಠ 38.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೀದರ್‌ನಲ್ಲಿ 37.8, ಬಳ್ಳಾರಿ 37.3, ವಿಜಯಪುರ ಮತ್ತು ಧಾರವಾಡದಲ್ಲಿ ತಲಾ 37 ಹಾಗೂ ಬಾಗಲಕೋಟೆಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ದಕ್ಷಿಣ ಒಳನಾಡಿನ ಮೂಡಿಗೆರೆ, ಬೆಂಗಳೂರು ಜಿಕೆವಿಕೆ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.6 ಡಿಗ್ರಿ ಸೆಲ್ಸಿಯಸ್, ಚಂದೂರಾಯನಹಳ್ಳಿಯಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದ್ದು, ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: Karnataka temperature - ಮಳೆಯಿಂದಾಗಿ ತಾಪಮಾನ 3-5°C ಇಳಿಕೆ! ರಾಜ್ಯದ ಬಹುತೇಕ ಕಡೆ ಈಗ 40 ಡಿಗ್ರಿಗಿಂತ ಕಮ್ಮಿ!
ಪ್ರಧಾನಿ ಮೋದಿ ಆಗಮನ: ನಾಳೆ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲು