ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಿಗೆ ಬರುವ ಭಕ್ತಾದಿಗಳಿಗೆ ಸೂಕ್ತ ನೆರಳು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಮುಜರಾಯಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಬೆಂಗಳೂರು (ಮಾ.07): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದ ದೇವಾಲಯಗಳಿಗೆ ಆಗಮಿಸುವ ಭಕ್ತರಿಗೆ ಸೂಕ್ತ ನೆರಳಿನ ವ್ಯವಸ್ಥೆ ಮಾಡುವಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ನೀಡಲಾಗಿದೆ.
ಹೌದು, ದಿನದಿಂದ ಹೆಚ್ಚುತ್ತಿರುವ ಬಿಸಿಲಿನ ಬೇಗೆಯಿಂದ ರಾಜ್ಯ ಸರ್ಕಾರದಿಂದ ಭಕ್ತಾದಿಗಳ ಮೇಲೆ ಕೇರಿಂಗ್ ಹೆಚ್ಚಾಗಿದೆ. ಹೀಗಾಂಗಿ, ಭಕ್ತದಿಗಳಿಗಾಗಿ ಮುಜರಾಯಿ ಇಲಾಖೆಯಿಂದ ದೇವಸ್ಥಾನಗಳಿಗೆ ವಿಶೇಷ ಸೂಚನೆ ಕೊಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳು ನೀಡುವುದಕ್ಕೆ ಮುಂದಾಗಿದೆ. ಅಂದರೆ, ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ದೇವಸ್ಥಾನಗಳಿಗೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ.
ಸಿದ್ದಗಂಗಾ ಮಠ ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಂಡೆಪಾಳ್ಯದ 3 ಆರೋಪಿಗಳ ಬಂಧನ!
ಇನ್ನು ಸರ್ಕಾರದಿಂದ ಸೂಚಿಸಲಾದ ವ್ಯವಸ್ಥೆಗಳನ್ನು ಮಾಡಲು ಯಾರಾದರೂ ದಾನಿಗಳು ಮುಂದಾದರೆ ಅವರಿಗೆ ಅವಕಾಶ ಮಾಡಿಕೊಡಿ. ಅಂದರೆ, ದೇವಸ್ಥಾನದ ಆಡಳಿತ ಮಂಡಳಿಯಿಂದ ಭಕ್ತಾದಿಗಳಿಗೆ ಮಾಡುವ ನೆರಳು ಮತ್ತು ಇತರೆ ಮೂಲಸೌಕರ್ಯ ವೆಚ್ಚಗಳನ್ನು ಭರಿಸಲು ಮನವಿ ಮಾಡುವಂತೆ ಸೂಚಿಸಲಾಗಿದೆ. ಒಂದು ವೇಳೆ ಯಾವುದೇ ದಾನಿಗಳು ನೆರಳು ಹಾಗೂ ಇತರೆ ವ್ಯವಸ್ಥೆ ಕಲ್ಪಿಸಲು ಮುಂದಾಗದಿದ್ದರೆ, ಆಗ ಮಾತ್ರ ದೇವಾಲಯದ ನಿಧಿಯಿಂದ ನಿಯಮಾನುಸಾರ ವೆಚ್ಚ ಭರಿಸುವಂತೆ ಸೂಚಿಸಲಾಗಿದೆ.
ರಾಮೇಶ್ವರಂ ಕೆಫೆ ಬಾಂಬರ್ ರೇಖಾಚಿತ್ರ ಬಿಡುಗಡೆ ಮಾಡಿದ ಕಲಾವಿದ!
ಇನ್ನು ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೇವೆಯನ್ನು ಕಲ್ಪಿಸಲಾಗಿದ್ದು, ಮಹಿಳಾ ಭಕ್ತಾದಿಗಳು ಕೂಡ ಹೆಚ್ಚಾಗಿ ದೇವಾಲಯಗಳಿಗೆ ಹರಿದುಬರುವ ಸಾಧ್ಯತೆಯಿದೆ. ಜೊತೆಗೆ, ಈ ಸಮಸಯದಲ್ಲಿ ಶಾಲೆ, ಕಾಲೇಜುಗಳು ಕೂಡ ರಜೆ ಇರುವುದರಿಂದ ಜಿಲ್ಲೆ, ಹೊರ ಜಿಲ್ಲೆ, ಹೊರ ರಾಜ್ಯಗಳು ಹಾಗೂ ವಿದೇಶಗಳಿಂದಲೂ ಭಕ್ತಾದಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಎಲ್ಲ ಮೂಲಸೌಕರ್ಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.