ಹಂಪಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಪ್ರತಿಮೆ: ಇಲ್ಲಿದೆ ನೋಡಿ ವಿಶೇಷತೆ!

Published : Nov 17, 2020, 05:02 PM ISTUpdated : Nov 17, 2020, 05:04 PM IST
ಹಂಪಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಪ್ರತಿಮೆ: ಇಲ್ಲಿದೆ ನೋಡಿ ವಿಶೇಷತೆ!

ಸಾರಾಂಶ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಬೆನ್ನಲ್ಲೇ ಬಳ್ಳಾರಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತೀ ಎತ್ತರದ ಹನುಮಂತ ಪ್ರತಿಮೆ| ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಅಧ್ಯಕ್ಷ ಸ್ವಾಮಿ ಗೋವಿಂದ್ ಆನಂದ್ ಘೋಷಣೆ

ಹಂಪಿ(ನ.17): ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆದ ಬೆನ್ನಲ್ಲೇ ಇದೀಗ ಕರ್ನಾಟಕದ ಬಳ್ಳಾರಿ ಜಿfಲಲಡಯಲ್ಲಿ ವಿಶ್ವದ ಅತೀ ಎತ್ತರದ ಹನುಮಂತನ ಪ್ರತಿಮೆ ನಿರ್ಮಾಣವಾಗಲಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಅಧ್ಯಕ್ಷ ಸ್ವಾಮಿ ಗೋವಿಂದ್ ಆನಂದ್ ಸರಸ್ವತಿಯವರು,  ಅಯೋಧ್ಯೆಯ ರಾಮಜನ್ಮಭೂಮಿ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರನ್ನು ಭೇಟಿಯಾದ ಬಳಿಕ ಈ ಘೋಷಣೆ ಮಾಡಿದ್ದಾರೆ.

ಬಳ್ಳಾ​ರಿಯಲ್ಲೊಂದು ಗಣೇಶ ಹಬ್ಬದ ಅಪರೂಪದ ಘಟನೆ

 ಕರ್ನಾಟಕದ ಬಳ್ಳಾರಿಯ ಜಿಲ್ಲೆಯ ಹಂಪಿಯ ಹೊರವಲಯದ ಪಂಪಾಪುರದಲ್ಲಿ 215 ಮೀಟರ್ ಎತ್ತರದ ಹನುಮನ ವಿಗ್ರಹ ನಿರ್ಮಿಸುವ ಯೋಜನೆ ಇದಾಗಿದೆ. ಇದಕ್ಕೆ ಅಂದಾಜು 1,200 ಕೋಟಿ ರೂ ವೆಚ್ಚವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ಹಂಪಿಯ ಪಂಪಾಪುರ ರಾಮಾಯಣದಲ್ಲಿರುವ ಕಿಷ್ಕಿಂದೆ ಸ್ಥಳ ಎಂದು ನಂಬಲಾಗಿದೆ. ಹೀಗಿರುವಾಗ ಹನುಮಂತ ಇದೇ ಕಿಷ್ಕಿಂದೆಯಲ್ಲಿ ಜನಿಸಿದ್ದು ಎಂದು ವಾಲ್ಮೀಕಿ ರಾಮಾಯಣದಲ್ಲಿ ಹೇಳಲಾಗಿದೆ.

ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೋನಾ ಸೋಂಕಿತ ಮಹಿಳೆ

ಹನುಮಂತನ ವಿಗ್ರಹ ಸ್ಥಾಪನೆಗೆ ಹಣ ಸಂಗ್ರಹಿಸಲು ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಸ್ಥೆಯು ರಾಷ್ಟ್ರವ್ಯಾಪಿ ರಥಯಾತ್ರೆ ನಡೆಸಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಇನ್ನು 6 ವರ್ಷದಲ್ಲಿ ಹಂಪಿಯ ಹಂಪಾಪುರದಲ್ಲಿ ವಿಶ್ವದ ಅತಿ ಎತ್ತರದ ಆಂಜನೇಯನ ಮೂರ್ತಿ ನಿರ್ಮಾಣವಾಗಲಿದೆ ಎನ್ನಲಾಗಿದೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ