* ಅಂತಾರಾಜ್ಯ ಸಾರಿಗೆಗೆ ಗ್ರೀನ್ ಸಿಗ್ನಲ್
* ಆಂಧ್ರ, ತೆಲಂಗಾಣಕ್ಕೆ ಬಸ್ ಸಂಚಾರ ಆರಂಭ
* ಈ ಬಗ್ಗೆ ಪ್ರಕಟಣೆ ಹೊರಡಿಸಿದ ಕೆಎಸ್‌ಆರ್‌ಟಿಸಿ
ಬೆಂಗಳೂರು, (ಜೂನ್.21): ಕೋವಿಡ್ ಎರಡನೇ ಅಲೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಅಂತಾರಾಜ್ಯ ಸಾರಿಗೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ಹೊರಡಿಸಿದ್ದು, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್ ಸಂಚಾರ ಪುನರಾರಂಭಿಸಲಾಗುತ್ತದೆ.
ಚಾಲಕರು ತೂಕಡಿಸಿದರೆ ಬರುತ್ತೆ ಅಲಾರ್ಮ್ ಸಂದೇಶ!
ಮಂಗಳವಾರದಿಂದ (ಜೂನ್.22) ಅಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಯನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇಕಡಾ 50ರಷ್ಟು ಆಸನ ವ್ಯವಸ್ಥೆಯೊಂದಿಗೆ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂತಾರಾಜ್ಯ ಸಾರಿಗೆ ಸಂಚಾರ ಕಾರ್ಯ ನಿರ್ವಹಿಸಲಿದೆ.
ಪ್ರಯಾಣಿಕರು ಕಡ್ಡಾಯ ಮಾಸ್ಕ್ ಧರಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಮುಂಗಡ ಆಸನಗಳನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ ಕಾಯ್ದಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.