
ಕಣ್ಣೂರು: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿಗರ ಟೆಂಪೊ ಟ್ರಾವೆಲರ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುರುವಾರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ವಾಹನದಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು ನೆರೆಯ ವಯನಾಡ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದರು.
ಕಣ್ಣೂರು ಜಿಲ್ಲೆಯ ಗಡಿ ಭಾಗದ ಸಮೀಪವಿರುವ ಆಂಬಾಯತ್ತೋಡ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ವಾಹನವು ಜಖಂಗೊಂಡಿದ್ದು ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹಾಗೂ ಹಾದಿಹೋಕರು ತಕ್ಷಣವೇ ಧಾವಿಸಿ ಬಂದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು.
ಅಪಘಾತದಲ್ಲಿ ಗಾಯಗೊಂಡ ಎಲ್ಲ 20 ಮಂದಿಯನ್ನು ತಕ್ಷಣವೇ ರಕ್ಷಿಸಿ, ಚಿಕಿತ್ಸೆಗಾಗಿ ನೆರೆಯ ವಯನಾಡ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಈ ಟೆಂಪೋ ಕರ್ನಾಟಕದಿಂದ ಕೊಟ್ಟಿಯೂರು ಕಡೆ ಪ್ರಯಾಣ ಮಾಡುತ್ತಿತ್ತು. ಹೀಗಾಗಿ ಗಾಯಗೊಂಡವರು ಕರ್ನಾಟಕದ ಯಾವ ಜಿಲ್ಲೆಯವರು ಎಂಬ ಮಾಹಿತಿ ಲಭ್ಯವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ