
ಬೆಂಗಳೂರು (ನ.6): ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮತಪೆಟ್ಟಿಗೆ ಮೂಲಕ ನಡೆಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಮತಪೆಟ್ಟಿಗೆ ಖರೀದಿಗೆ ಚುನಾವಣಾ ಆಯೋಗಕ್ಕೆ 128 ಕೋಟಿ ರು. ಹಣವನ್ನೂ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಮತಪೆಟ್ಟಿಗೆ ಮೂಲಕ ಚುನಾವಣೆ ನಡೆಸುವುದಾಗಿ ತಿಳಿಸಿದ್ದೇವೆ. ಈ ಸಂಬಂಧ ಮರು ಚಿಂತನೆ ಇಲ್ಲ. ಚುನಾವಣಾ ಆಯೋಗದ ಬಳಿಕ ಈಗಾಗಲೇ ಮತಪೆಟ್ಟಿಗೆಗಳು ಇದ್ದು ಹೆಚ್ಚುವರಿಯಾಗಿ ಅಗತ್ಯವಿರುವ ಮತಪೆಟ್ಟಿಗೆ ಖರೀದಿಗೆ ಈಗಾಗಲೇ ಹಣ ನೀಡಿದ್ದೇವೆ. ಹಣಕಾಸು ಸಮಸ್ಯೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಪರಿಷ್ಕೃತ ಮತದಾರರ ಪಟ್ಟಿ ಅನುಸಾರ ಚುನಾವಣೆ ನಡೆಸಲಾಗುತ್ತದೆಯೇ ಎಂಬ ಪ್ರಶ್ನೆಗೆ, ಎಸ್‌ಐಆರ್ ಬಳಿಕದ ಪರಿಷ್ಕೃತ ಮತದಾರರ ಪಟ್ಟಿ ಲಭ್ಯವಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಚುನಾವಣಾ ಆಯೋಗವು ಸ್ವಾಯತ್ತ ಸಂಸ್ಥೆಯಾಗಿದ್ದು, ಯಾವ ಪಟ್ಟಿ ಆಧರಿಸಿ ಚುನಾವಣೆ ನಡೆಸಬೇಕು ಎಂಬುದನ್ನು ಆಯೋಗ ತೀರ್ಮಾನಿಸಲಿದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ