ಪರ್ಮಿಟ್ ರದ್ದು ಮಾಡುತ್ತೇನೆಂದರೂ ಹೆಚ್ಚು ದರ ಫಿಕ್ಸ್: ಖಾಸಗಿ ಬಸ್ ವಿರುದ್ಧ ಇಲ್ಲಿ ದೂರು ನೀಡಿ

By Suvarna NewsFirst Published Sep 30, 2022, 1:00 PM IST
Highlights

ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ‌ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು ಎಂಬ ಖಡಕ್ ಸೂಚನೆ ನೀಡಲಾಗಿದೆ. ಈ ಕುರಿತ ವಿವರ ಇಲ್ಲಿವೆ.

ಬೆಂಗಳೂರು(ಸೆ.30): ದಸರಾ ಹಬ್ಬಕ್ಕೆ ಖಾಸಗಿ ಬಸ್‌ಗಳು ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಹೆಚ್ಚಿನ ದೂರುಗಳ ಬಂದಿರುವ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಬೆಂಗಳೂರು ಸೇರಿದಂತೆ ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಂದ ಖಾಸಗಿ ಬಸ್‌ಗಳು ಹೆಚ್ಚುವರಿ ದರ ವಸೂಲಿ ಮಾಡುತ್ತಿದೆ. ಹೀಗಾಗಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿರುವ ದರವನ್ನೇ ಪಡೆಯಬೇಕು. ಹೆಚ್ಚುವರಿ ದರ ಪಡೆದರು ರೂಟ್ ಪರ್ಮಿಟ್ ರದ್ದು ಮಾಡಲಾಗುತ್ತದೆ ಎಂದು ರಾಜ್ಯ ಸಾರಿಗೆ ಇಲಾಖೆ ಖಡಕ್ ಸೂಚನೆ ನೀಡಿದೆ.  ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಹತ್ತು ವಿಶೇಷ ತನಿಖಾ ತಂಡಗಳನ್ನು ರಚಿಸಿದೆ. ರಾಜ್ಯದ್ಯಾಂತ ಈ ತಂಡ ಕಾರ್ಯಾಚರಣೆ ನಡೆಸಲಿದೆ.

ಖಾಸಗಿ ಬಸ್ ಮಾಲೀಕರು ಹೆಚ್ಚುವರಿ ದರ ಪಡೆದರು ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಬಸ್ ನಂಬರ್, ಮಾರ್ಗ ತಿಳಿಸಿ ದೂರು ನೀಡಿದರೆ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಇಲಾಖೆ ಹೇಳಿದೆ.   ಇದಕ್ಕಾಗಿ ಸರಾಗಿ ಇಲಾಖೆ ಸಹಾಯವಾಣಿ ಆರಂಭಿಸಿದೆ.  ಈ ನಂಬರ್‌ಗೆ ಕರೆ ಮಾಡಿ 94498 63429 / 94498 63426 ದೂರು ನೀಡಲು ಸಾರಿಗೆ ಇಲಾಖೆ ಕೋರಿದೆ. 

 

ಎಚ್ಚರಿಕೆಗೂ ಡೊಂಟ್‌ ಕೇರ್‌: ಖಾಸಗಿ ಬಸ್‌ ದರ ಸುಲಿಗೆ..!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗಸೂಚಿಯಂತೆ ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆ ಕುರಿತು ತಪಾಸಣೆ ನಡೆಸುವಂತೆ ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ. ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ, ಕಿರಿಕಿರಿ ಮಾಡಿದರೆ ಸಹಿಸುವುದಿಲ್ಲ. ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೇ ಯಾವ ಯಾವ ರೂಟ್‍ಗಳಿಗೆ ಎಷ್ಟು ದರ ನಿಗದಿ ಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ ಎಂದು  ಸಾರಿಗೆ ಇಲಾಖೆ ಹೇಳಿದೆ.

ಗಣೇಶ ಹಬ್ಬದ ವೇಳೆ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೆ ದಸರಾ ಹಬ್ಬದ ಸಂದರ್ಭದಲ್ಲಿಯೂ ಖಾಸಗಿ ಬಸ್‌ಗಳು ಪ್ರಯಾಣಿಕರಿಂದ ಸುಲಿಗೆ ಮುಂದುವರೆಸಿದ್ದು, ಬೆಂಗಳೂರಿನಿಂದ ರಾಜ್ಯ ವಿವಿಧೆಡೆ ತೆರಳುವ ಖಾಸಗಿ ಬಸ್‌ಗಳ ಟಿಕೆಟ್‌ ದರ ದುಪ್ಪಟ್ಟಾಗಿದೆ. ಅ.1ರ ಶನಿವಾರದಿಂದ ಅ. 5ರವರೆಗೂ ಸಾಲು ರಜೆಗಳಿವೆ. ಶುಕ್ರವಾರ ಸಂಜೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳಲು ಮುಂದಾಗುತ್ತಿದ್ದಾರೆ. ಇದನ್ನು ಮುಂದಾಗಿಸಿಕೊಂಡು ಸುಲಿಗೆ ಮಾಡಲಾಗುತ್ತಿದೆ.

Bengaluru: ಮತ್ತೆ ಸಿಲಿಕಾನ್ ಸಿಟಿಯ ರಸ್ತೆಗಿಳಿಯಲಿದೆ ಡಬಲ್ ಡೆಕ್ಕರ್ ಬಸ್..!

ಎಷ್ಟುದರ ಹೆಚ್ಚಳ?:
ಬೆಂಗಳೂರಿನಿಂದ ಉಡುಪಿಗೆ ಸಾಮಾನ್ಯ ದಿನಗಳಲ್ಲಿ ಪ್ರಯಾಣ ದರ ಎಸಿ ಸ್ಲೀಪರ್‌, ಕ್ಲಬ್‌ ಕ್ಲಾಸ್‌ ಸೇರಿದಂತೆ ವಿವಿಧ ಖಾಸಗಿ ಬಸ್‌ಗಳಲ್ಲಿ 700- 750 ರು. ಇದ್ದು, ಸೆ. 30ರಿಂದ ಅ. 4ರವರೆಗೆ 1,400ರಿಂದ 1,800 ರು. ಆಗಿದೆ. ಅದೇ ರೀತಿ, ಬೆಳಗಾವಿಗೆ 800-900 ರು. ಇದ್ದದ್ದು, 1,100ರಿಂದ 1,500 ರು. ಆಗಿದೆ. ಹುಬ್ಬಳ್ಳಿಗೆ 750-800 ರು. ಬದಲಿಗೆ 1,200ರಿಂದ 1,500 ರು. ಆಗಿದೆ. ಕಲಬುರಗಿಗೆ 800-900 ರು. ಇದ್ದದ್ದು 1,200- 1500 ರು. ಆಗಿದೆ.

click me!