ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.
ಬೆಂಗಳೂರು (ಜೂ.19): ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.
ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವರು, 2014 ರಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲಾಗಿದೆ. ಇದೀಗ ಡೀಸೆಲ್ ದರ ಹೆಚ್ಚಳವಾಗಿರುವುದರಿಂದ ಹೊರೆಯಾಗುತ್ತಿದೆ. ಹೀಗಾಗಿ ಪ್ರಯಾಣದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದಿದ್ದಾರೆ.
undefined
ಮಂತ್ರಾಲಯದ ಕರ್ನಾಟಕ ಛತ್ರದ ಕಳಪೆ ಕಾಮಗಾರಿ: ಲೋಕಾಯುಕ್ತ ತನಿಖೆಗೆ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ
ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ಈ ನಡುವೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿರುವುದು ನೇರವಾಗಿ ರೈತರು ಬಡವರ ಮೇಲೆ ಪರಿಣಾಮ ಬೀರಲಿದೆ. ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದಿವೆ. ಈ ನಡುವೆ ಇದೀಗ ಬಸ್ ಪ್ರಯಾಣದರ ಹೆಚ್ಚಳದ ಬಗ್ಗೆ ಸಚಿವರು ಸುಳಿವು ನೀಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.