
ಬೆಂಗಳೂರು (ಜು.24): ರಾಜ್ಯದ ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ 6 ತಿಂಗಳಾದರೂ ಯಾವುದೇ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾರಿಗೆ ಇಲಾಖೆಯ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯೂಕೆಆರ್‌ಟಿಸಿ ಸೇರಿ ಎಲ್ಲ ನಿಗಮಗಳ ನೌಕರರು ಆ.5ರಂದು ತಮ್ಮ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಠಾವಧಿ ಪ್ರತಿಭಟನೆ ಮಾಡಲು ವೇದಿಕೆ ರೂಪಿಸಿಕೊಂಡಿದ್ದಾರೆ. ಇದರ ಬೆನ್ನಲ್ಲಿಯೇ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಜು.28ರಂದು ರಾಜೀ ಸಂಧಾನ ಸಭೆಯೊಂದನ್ನ ನಡೆಸಲು ಮುಂದಾಗಿದೆ.
ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವೆ ಕೈಗಾರಿಕಾ ಸಂಘರ್ಷವು ತೀವ್ರವಾಗಿ ಉಂಟಾಗಿದೆ. ಆಗಸ್ಟ್-5 ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರು, ವೇತನ ಹೆಚ್ಚಳ ಮಾಡುವುದು ಸೇರಿ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ನಿರ್ಧಾರದಿಂದ ರಾಜ್ಯದ ಜನಜೀವನದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ. ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಕಾರ್ಮಿಕ ಇಲಾಖೆ ಸಮಸ್ಯೆ ಇತ್ಯರ್ಥಕ್ಕೆ ಮಧ್ಯೆ ಪ್ರವೇಶಿಸಿದೆ.
ಸಾರಿಗೆ ನಿಗಮಗಳ ಆಡಳಿತ ಮಂಡಳಿ ಮತ್ತು ನೌಕರರ ಸಂಘಟನೆಗಳ ನಡುವೆ ಬಗೆಹರಿಕೆ ಸಭೆ ಜುಲೈ 28ರಂದು ನಿಗದಿಯಾಗಿದ್ದು, ಈ ಸಭೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ರಾಜಿ ಸಂಧಾನ ಸಭೆಗೆ ನೌಕರರ ಸಂಘಟನೆಗಳು ಮತ್ತು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಜರಾಗುವಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಳ, ಕೆಲಸದ ಭದ್ರತೆ, ನಿವೃತ್ತಿ ಸೌಲಭ್ಯಗಳು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುತ್ತಿರುವ ನೌಕರರು, ಸರ್ಕಾರದ ನಿರ್ಲಕ್ಷ್ಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಸಭೆ ವಿಫಲವಾದರೆ, ಆಗಸ್ಟ್-5 ರಿಂದ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.
ಈ ಬೆಳವಣಿಗೆ ರಾಜ್ಯದ ಸಾಮಾನ್ಯ ಜನತೆಗೆ ತೀವ್ರ ತೊಂದರೆ ಉಂಟುಮಾಡಲಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ದೈನಂದಿನ ಪ್ರಯಾಣಿಕರು ಇದರಿಂದ ಹಿನ್ನಡೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕಾರ್ಮಿಕ ಕಲ್ಯಾಣ ಇಲಾಖೆಯ ಈ ಮಧ್ಯವರ್ತಿ ಸಭೆಗೆ ಇದೀಗ ಎಲ್ಲರ ದೃಷ್ಟಿ ಹರಿದಿದೆ. ಸಮಸ್ಯೆ ಬಗೆಹರಿಸಲು ಸರ್ಕಾರ ಮತ್ತು ನೌಕರರ ಸಂಘಟನೆಗಳು ಗಂಭೀರವಾಗಿ ಚರ್ಚಿಸಲು ಮುಂದಾಗಬೇಕು. ರಾಜ್ಯದ ಸಾರಿಗೆ ವ್ಯವಸ್ಥೆಯ ಸ್ಥಿತಿಗತಿಯು ಇದೀಗ ಜುಲೈ 28ರ ಸಭೆ ಫಲಿತಾಂಶದ ಮೇಲೆ ಆಧಾರಿತವಾಗಿದೆ.
ಮುಖ್ಯ ಅಂಶಗಳು:
ಈಗಾಗಲೇ ರಾಜ್ಯ ಸರ್ಕಾರದಿಂದ ಕಳೆದ 2024ರ ಡಿಸೆಂಬರ್ ತಿಂಗಳಲ್ಲಿ ಮುಷ್ಕರ ಹಮ್ಮಿಕೊಂಡಿದ್ದಾರೆ ಕಾರ್ಮಿಕರನ್ನು ಮನವೊಲಿಕೆ ಮಾಡುವ ಕೆಲಸ ಮಾಡಿದ್ದ ಸರ್ಕಾರ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ತಿಳಿಸಿತ್ತು. ಆದರೆ, ಇದೀಗ ಭರವಸೆ ನೀಡಿ 6 ತಿಂಗಳು ಕಳೆದರೂ ಸರ್ಕಾರದಿಂದ ಭರವಸೆ ಈಡೇರಿಸುವ ಕಾರ್ಯದಲ್ಲಿ ಯಾವುದೇ ಪ್ರಗತಿಯೂ ಕಂಡುಬಂದಿಲ್ಲ.
ಸಾರಿಗೆ ಇಲಾಖೆ ನೌಕರರಿಗೆ ಪ್ರತಿ 4 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡಬೇಕಿದೆ. 2016ರಲ್ಲಿ ಮಾಡಿದ್ದ ವೇತನ ಪರಿಷ್ಕರಣೆ 2019ರಲ್ಲಿ ಮುಕ್ತಾಯಗೊಂಡಿದೆ. 2020ರಲ್ಲಿ ವೇತನ ಪರಿಷ್ಕರಣೆ ಮಾಡದ ಕಾರಣ ನಿರಂತರ ಪ್ರತಿಭಟನೆ ಬಳಿಕ 2023ರಲ್ಲಿ ಶೇ.15 ವೇತನ ಹೆಚ್ಚಳ ಮಾಡಲಾಯಿತು. ಅದನ್ನು 2019ರಿಂದ ಪೂರ್ವಾನ್ವಯ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ, 38 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಪಾವತಿ ಮಾಡಿಲ್ಲ ಎಂದು ಸಾರಿಗೆ ನೌಕರರು ಆಕ್ರೋಶ ಹೊರ ಹಾಕಿದ್ದಾರೆ.
ವೇತನ ಹಿಂಬಾಕಿ ಪಾವತಿ,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ